ಅರೇಮಲ್ಲಾಪುರದಲ್ಲಿ ಬಾಲ್ಯ ವಿವಾಹ ತಡೆ
Team Udayavani, Jun 21, 2020, 6:33 AM IST
ಸಾಂದರ್ಭಿಕ ಚಿತ್ರ
ರಾಣಿಬೆನ್ನೂರು: ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೊಬ್ಬಳಿಗೆ ವಿವಾಹ ಮಾಡಲು ಮುಂದಾದ ಮಾಹಿತಿ ಪಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಬಾಲ್ಯ ವಿವಾಹ ತಡೆದಿದ್ದಾರೆ.
ಅರೇಮಲ್ಲಾಪುರದ ಅಪ್ರಾಪ್ತ ಬಾಲಕಿಗೆ ಅದೇ ಗ್ರಾಮದ 23 ವರ್ಷದ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. ಈ ಮಾಹಿತಿ ಪಡೆದ ಅಧಿಕಾರಿಗಳು ಮದುವೆ ನಿಶ್ಚಯ ಮಾಡಿರುವ ವಧು-ವರರ ಪೋಷಕರೊಂದಿಗೆ ಮಾತನಾಡಿ, ಬಾಲ್ಯವಿವಾಹದಿಂದ ಉಂಟಾಗುವ ದುಷ್ಪರಿಣಾಮ ಹಾಗೂ ಶಿಕ್ಷೆ ಕುರಿತಂತೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ವಿವಾಹ ನಿಲ್ಲಿಸಲಾಯಿತು. ಈ ಕುರಿತಂತೆ ಮುಚ್ಚಳಿಕೆಯನ್ನು ವಧು-ವರರ ಪಾಲಕರಿಂದ ಬರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.