ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಧರಣಿ

Team Udayavani, Dec 17, 2019, 4:15 PM IST

hv-tdy-1

ಹಾವೇರಿ: ನಗರಸಭೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ನೇಮಕಾತಿಯಲ್ಲಾಗಿರುವ ವಿಳಂಬ ಹಾಗೂ ಕೆಲವು ಹೊರಗುತ್ತಿಗೆ ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿ ಜಿಲ್ಲಾ ಧಿಕಾರಿಯವರಿಗೆ ನಗರಸಭೆ ತಪ್ಪು ಮಾಹಿತಿ ನೀಡಿರುವುದನ್ನು ಖಂಡಿಸಿ ಹೊರಗುತ್ತಿಗೆ ಪೌರಕಾರ್ಮಿಕರು ಸೋಮವಾರ ನಗರಸಭೆ ಕಚೇರಿ ಎದುರು ಧರಣಿ ನಡೆಸಿದರು.

ನಗರಸಭೆ ಎದುರು ಸೇರಿದ ಪೌರಕಾರ್ಮಿಕರು ಹಲಗೆ ಬಾರಿಸುವ ಮೂಲಕ ತಮ್ಮ ಬೇಡಿಕೆ ಈಡೇರಿಕೆಗೆಆಗ್ರಹಿಸಿದರು. ಖಾಲಿ ಇರುವ ಪೌರಕಾರ್ಮಿಕರ ನೇಮಕಾತಿಗಾಗಿ ಸರ್ಕಾರ ನಗರಸಭೆ ಮೂಲಕ ಅರ್ಜಿ ಕರೆದಿದ್ದು, ನಗರಸಭೆಯಲ್ಲಿ ಈಗಾಗಲೇ 14-15ವರ್ಷಗಳಿಂದ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ 91 ಪೌರಕಾರ್ಮಿಕರು 2018ರ ಫೆಬ್ರುವರಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿ ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ 17-10-2018ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಆಗ ತಾತ್ಕಾಲಿಕ ಆಯ್ಕೆ ಪಟ್ಟಿ ಸರಿಯಿಲ್ಲ ಎಂದು ಆಕ್ಷೇಪಣೆಸಲ್ಲಿಸಲಾಗಿತ್ತು. ಆದರೆ, ಆಕ್ಷೇಪಣೆ ಸಲ್ಲಿಸಿ ಒಂದು ವರ್ಷವಾದರೂ ನೇಮಕಾತಿ ನಡೆದಿಲ್ಲ ಹಾಗೂ ತಪ್ಪಾಗಿರುವುದನ್ನು ಸರಿಪಡಿಸಿಲ್ಲ. ಮೂರ್‍ನಾಲ್ಕು ತಿಂಗಳಿಂದ ಸಂಬಳವೂ ನೀಡಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಹತ್ತಾರು ಬಾರಿ ಲಿಖೀತವಾಗಿ, ಮೌಖೀಕವಾಗಿ ಮನವಿ ಮಾಡಿದರೂ ನಮ್ಮ ಬೇಡಿಕೆ, ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ಸತ್ಯಾಗ್ರಹ ಅನಿವಾರ್ಯವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ನಗರಸಭೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಬೇಗ ಸರಿಪಡಿಸಬೇಕು. ನೇಮಕಾತಿ ಮಾಡುವಾಗ ಅರ್ಹ ಹಾಗೂ ಹೆಚ್ಚಿನ ಅವಧಿ ಕೆಲಸ ಮಾಡಿದ ಪೌರಕಾರ್ಮಿಕರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು. ನಗರಸಭೆ ಪರಿಸರ ಅಭಿಯಂತರ ಬೇಜವಾಬ್ದಾರಿಯಿಂದ ಸುಮಾರು 14-15ವರ್ಷ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತ ಬಂದಿರುವ ಏಳು ಪೌರಕಾರ್ಮಿಕರನ್ನು ಸೂಕ್ತ ದಾಖಲೆ ಇಲ್ಲದಿದ್ದರೂ ಅವರನ್ನು ಚಾಲಕ, ಮೇಲುಸ್ತುವಾರಿ ಎಂದೆಲ್ಲ ಜಿಲ್ಲಾಧಿಕಾರಿ ಕಚೇರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಈ ತಪ್ಪನ್ನು ಸರಿಪಡಿಸಬೇಕು. ನಗರಸಭೆಯಲ್ಲಿ ಕಸ ಹಾಗೂ ತ್ಯಾಜ್ಯ ಸಾಗಿಸಲು ಐದು ಟ್ರಾಕ್ಟರ್‌ಗಳು, ಐದು ಟಾಟಾಏಸ್‌, 10 ಆಟೋ ಟಿಪ್ಪರ್‌ ಸೇರಿ 21ವಾಹನಗಳಿದ್ದು ಈ ಯಾವ ವಾಹನಗಳಿಗೂ ಅಧಿಕೃತ ಚಾಲಕರಿಲ್ಲ. ವಾಹನ ಚಾಲನೆ ಪರವಾನಗಿ ಹೊಂದಿಲ್ಲದಿದ್ದರೂ ಹೊರಗುತ್ತಿಗೆ ಪೌರಕಾರ್ಮಿಕರನ್ನೇ ಚಾಲನೆ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಏನಾದರೂ ಅಪಘಾತವಾದರೆ ಅದಕ್ಕೆಲ್ಲ ಹೊಣೆ ಯಾರು? ಆದ್ದರಿಂದ ಪೌರಕಾರ್ಮಿಕರನ್ನು ವಾಹನ ಚಾಲನೆ

ಕೆಲಸಕ್ಕೆ ಬಳಸಬಾರದು ಹಾಗೂ ಹಾಲಿ ಕೆಲಸ ನಿರ್ವಹಿಸುತ್ತಿರುವ ಯಾವ ಪೌರಕಾರ್ಮಿಕರನ್ನೂ ಕೆಲಸದಿಂದ ತೆಗೆದುಹಾಕಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಹೊರಗುತ್ತಿಗೆ ಪೌರಕಾರ್ಮಿಕರ ಈ ಸತ್ಯಾಗ್ರಹಕ್ಕೆ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕ, ದಲಿತ ಸಂಘರ್ಷ ಸಮಿತಿ, ಲಿಂಗತ್ವ ಅಲ್ಪಸಂಖ್ಯಾತರ ಘಟಕದ ಪದಾಧಿ ಕಾರಿಗಳು ಬೆಂಬಲ ಸೂಚಿಸಿದ್ದರು. ತಾಲೂಕು ಹೊರಗುತ್ತಿಗೆ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜು ಮಾಳಗಿ, ಅಜ್ಜಪ್ಪ ಬನ್ನಮ್ಮನವರ, ರಾಜು ವರ್ದಿ, ಯಲ್ಲಪ್ಪ ಕೋಡಬಾಳ, ಯುವರಾಜ ಭಂಡಾರಿ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿದ್ದರು.

ಪ್ರತಿಭಟನಾ ಸ್ಥಳಕ್ಕೆ ಶಾಸಕ ನೆಹರು ಓಲೇಕಾರ ಭೇಟಿ ನೀಡಿ ಪೌರಕಾರ್ಮಿಕರ ಸಮಸ್ಯೆ ಆಲಿಸಿದರು.ಎಲ್ಲ ಪೌರಕಾರ್ಮಿಕರಿಗೆ ನ್ಯಾಯ ಒದಗಿಸುವ ಹಾಗೂ ನೇಮಕಾತಿಯಲ್ಲಾಗಿರುವ ತಪ್ಪು ಸರಿಪಡಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.