ಕಬ್ಬು, ಗೋವಿನ ಜೋಳ, ಭತ್ತ ಬೆಳೆಯುವ ರೈತರಿಗೆ ಆರ್ಥಿಕ ಸಬಲತೆ: ಸಿಎಂ ಬಸವರಾಜ ಬೊಮ್ಮಾಯಿ

Team Udayavani, Feb 13, 2022, 2:59 PM IST

ಕಬ್ಬು, ಗೋವಿನ ಜೋಳ, ಭತ್ತ ಬೆಳೆಯುವ ರೈತರಿಗೆ ಆರ್ಥಿಕ ಸಬಲತೆ: ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಸಕ್ಕರೆ ಕಾರ್ಖಾನೆಯಲ್ಲಿ ಎಥನಾಲ್ ಘಟಕ ಸ್ಥಾಪನೆ, ಕಬ್ಬು, ಗೋವಿನ ಜೋಳ, ಭತ್ತ ಬೆಳೆಯುವ ರೈತರ ಆರ್ಥಿಕ ಸಬಲತೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ವಿ.ಐ.ಎನ್.ಪಿ ಸಕ್ಕರೆ ಕಾರ್ಖಾನೆ ಸ್ಥಳಕ್ಕೆ ಭೇಟಿ ನೀಡಿ, ಡಿಸ್ಟಲರಿ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರೈತರ ಉತ್ಪಾದಿಸುವ ಬೆಳೆಗಳು ಸಂಸ್ಕರಣೆ ನಂತರ ಮೌಲ್ಯ ವೃದ್ಧಿಯಾದಾಗ ಮಾತ್ರ ರೈತನಿಗೆ ಒಳ್ಳೆಯ ಬೆಲೆ ಸಿಗುತ್ತದೆ. ಕೋಣನಕೆರೆಯಿಂದ ತಡಸವರೆಗೂ ಸುಮಾರು 15000 ಕಬ್ಬು ಬೆಳೆಯ ಪ್ರದೇಶ ನಿರ್ಮಾಣವಾಗಿದ್ದು, ರೈತರ ಕಬ್ಬು ಬೆಳೆಗೆ ಉತ್ತಮ ಬೆಲೆ ಸಿಕ್ಕು, ಅವರ ಬದುಕೂ ಕೂಡ ಆರ್ಥಿಕ ಸಬಲತೆ ಕಾಣಲು ವಿಐಎನ್ಪಿ ಸಕ್ಕರೆ ಕಾರ್ಖಾನೆಯಿಂದ ಸಹಕಾರ ನೀಡಲಿರುವ ಭರವಸೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.

ಎಥನಾಲ್ ನೀತಿ: ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆ, ಆರ್ಥಿಕ ಚಟುವಟಿಕೆ, ರೈತರ ಹಿತರಕ್ಷಣೆಯ ಗುರಿಯನ್ನಿರಿಸಿಕೊಂಡು ಎಥನಾಲ್ ನೀತಿಯನ್ನು ರೂಪಿಸಿದೆ. ಕರ್ನಾಟಕ ಎಥನಾಲ್ ಪಾಲಿಸಿಯಿಂದ ಹೆಚ್ಚಿನ ಲಾಭ ಪಡೆಯುವ ಹಾದಿಯಲ್ಲಿದ್ದು, ಕೆಲವೊಂದು ಸಕ್ಕರೆ ಕಾರ್ಖಾನೆಗಳಲ್ಲಿ ಎಥನಾಲ್ ಘಟಕವನ್ನು ಸ್ಥಾಪಿಸಲಾಗಿದೆ. ಕಾರ್ಖಾನೆಯಲ್ಲಿ ಕಬ್ಬು, ಗೋವಿನ ಜೋಳ, ಭತ್ತದಿಂದಲೂ ಎಥನಾಲ್ ತಯಾರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯರಿಗೆ ಉದ್ಯೋಗಾವಕಾಶ: ವಿಐಎನ್ ಪಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗವಕಾಶ ದೊರೆಯುವಂತಾಗಬೇಕು. ಕಾರ್ಖಾನೆಯು ಸ್ಥಳೀಯ ಜನರಿಗೆ, ರೈತರಿಗೆ ಹಾಗೂ ಯುವಕರಿಗೆ ಲಾಭವನ್ನುಂಟು ಮಾಡಲಿ ಎಂದು ಶುಭ ಹಾರೈಸಿದರು.

ಇದನ್ನೂ ಓದಿ:ಅಲ್ಪಸಂಖ್ಯಾತರ ರಕ್ಷಣೆ ಹಿಂದೆಯೂ ಮಾಡಿದ್ದೇವೆ,ಇನ್ನೂ ಮಾಡುತ್ತೇವೆ:ಹಿಜಾಬ್ ವಿಚಾರಕ್ಕೆ ಡಿಕೆಶಿ

ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಮೂಲಭೂತ ಸೌಕರ್ಯ,ಕೈಗಾರಿಕೆಗಳ ಅಭಿವೃದ್ಧಿಗಾಗಿ ದೂರದೃಷ್ಟಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಗಾರ್ಮೆಂಟ್ಸ್, ಟೆಕ್ಸ್ ಟೈಲ್ ಕಾರ್ಖಾನೆ ಬರಲಿದೆ. ಬೆಂಗಳೂರು ನಗರಕ್ಕೇ ಮೀಸಲಾಗಿರುವ ಕೆಲವೊಂದು ಕಾರ್ಖಾನೆಗಳನ್ನು ಉತ್ತರ ಕರ್ನಾಟಕಕ್ಕೆ ತರುವ ಚಿಂತನೆಯಿಂದ ‘ಬಿಯಾಂಡ್ ಬೆಂಗಳೂರು’ಯೋಜನೆಯನ್ನು ಜಾರಿಗೆ ತರಲಾಗಿದೆ. ಯುವಕರ ಭವಿಷ್ಯ ಉಜ್ವಲವಾಗಿ ಸ್ವಾಭಿಮಾನದಿಂದ ಬದುಕಲು ಈ ಎಲ್ಲಾ ಕಾರ್ಖಾನೆಗಳನ್ನು ಸ್ಥಾಪಿಸಲಾಗುತ್ತಿದೆ. ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವರದಾ ನದಿಯಿಂದ ಕೋಣನಕೆರೆ,ತಡಸದವರೆಗೂ ನೀರು ಹರಿಸಿ, ಕೆರೆಗಳಿಗೆ ನೀರು ತುಂಬಿಸುವ  ಕಾರ್ಯವನ್ನು ಮಾಡಲಾಗಿದೆ. ಸವಣೂರು, ಬ್ಯಾಡಗಿ, ಹಾನಗಲ್ ನಲ್ಲಿ ಏತನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಕೆಎಂಎಫ್ ಘಟಕ: ಹಾವೇರಿ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಗಣನೀಯ ಪ್ರಮಾಣದಲ್ಲಿರುವುದರಿಂದ ಪ್ರತ್ಯೇಕ ಕೆಎಂಎಫ್  ಘಟಕದ ಬೇಡಿಕೆ ಇತ್ತು. ರೈತರು, ಕಾರ್ಮಿಕರು, ದುಡಿಯುವ ವರ್ಗಗಳ ಬದುಕು ಹಸನಾಗಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಕೆಎಂಎಫ್ ಘಟಕ ಸ್ಥಾಪನೆಗೆ 30 ಕೋಟಿ ರೂ. ಮಂಜೂರು ಮಾಡಲಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶಾಸಕ ನೆಹರೂ  ಓಲೇಕಾರ್, ಸಕ್ಕರೆ ಕಾರ್ಖಾನೆ ಮುಖ್ಯಸ್ಥ ವಿವೇಕ ಹೆಬ್ಬಾರ, ಮತ್ತು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.