ಸಾರಿಗೆ ಬಸ್ ಗಳ ಮುಖಾಮುಖಿ ಢಿಕ್ಕಿ: ವಿದ್ಯಾರ್ಥಿಗಳು ಸೇರಿ 68 ಮಂದಿಗೆ ಗಾಯ
Team Udayavani, Jul 2, 2022, 1:31 PM IST
ಹಾವೇರಿ: ಸಾರಿಗೆ ಸಂಸ್ಥೆಯ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 68 ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಹಾನಗಲ್ಲ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ನಡೆದಿದೆ.
ಬಸ್ ನಲ್ಲಿ ಬೆಳಗ್ಗೆ ಗ್ರಾಮೀಣ ಭಾಗದಿಂದ ಶಾಲೆಗಳಿಗೆ ತೆರಳುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮಾರ್ಗಮಧ್ಯೆ ಬೈಂಚವಳ್ಳಿ ಕ್ರಾಸ್ ಸಮೀಪ ಬಸ್ ಚಾಲಕರ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಈ ಘಟನೆಯಲ್ಲಿ ಸುಮಾರು 20 ವಿದ್ಯಾರ್ಥಿಗಳು ಸೇರಿದಂತೆ 68 ಪ್ರಯಾಣಿಕರು ಗಾಯಗೊಂಡಿದ್ದರೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ತೀವ್ರ ಗಾಯಗೊಂಡ ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, 14 ಜನರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಎರಡೂ ಬಸ್ ನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:“ಜೀವನವು ಕೊಳಕುಗಳಿಂದ ತುಂಬಿದೆ”.. ಮೂರುವರೆ ವರ್ಷದ ಮಗುವನ್ನು ಕೊಂದು ನೇಣಿಗೆ ಶರಣಾದ ತಾಯಿ
ಸ್ಥಳಕ್ಕೆ ಶಾಸಕ ಶ್ರೀನಿವಾಸ ಮಾನೆ, ಮಾಜಿ ಶಾಸಕ ಶಿವರಾಜ ಸಜ್ಜನರ ಭೇಟಿ ನೀಡಿದರು. ಈ ವೇಳೆ ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಇದ್ದರು. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
ಹಾವೇರಿ: ಮಾರುಕಟ್ಟೆಗೆ ಲಗ್ಗೆಇಟ್ಟ ಆಕರ್ಷಕ ಮಾದರಿ ಆಕಾಶ ಬುಟ್ಟಿ
Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ
ಬ್ಯಾಡಗಿ: ಬಳ್ಳಾರಿಯ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.