‘ಹಿರೇ-ರಾಣಿ’ಗಾಗಿ ಕಾಂಗ್ರೆಸ್‌ ಸಿದ್ಧತೆ

•ಹಿರೇಕೆರೂರು, ರಾಣಿಬೆನ್ನೂರು ಉಪಸಮರ •'ಕೈ'ಚಳಕ ತೋರಿಸಲು ತಯಾರಿ

Team Udayavani, Aug 3, 2019, 3:55 PM IST

hv-tdy-4

ಹಾವೇರಿ: ಸ್ಪೀಕರ್‌ ಅವರಿಂದ ಅನರ್ಹಗೊಂಡ ವಿಧಾನಭೆ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್‌ ಈಗಲೇ ಸಿದ್ಧತೆ ನಡೆಸಿದ್ದು, ಜಿಲ್ಲೆಯ ಹಿರೇಕೆರೂರು ಹಾಗೂ ರಾಣಿಬೆನ್ನೂರು ಕ್ಷೇತ್ರಗಳಲ್ಲಿ ಮಳೆಗಾಲದ ತಂಪಿನಲ್ಲಿಯೂ ಬಿಸಿ ಚರ್ಚೆ ಶುರುವಾಗಿದೆ.

ಉಪಚುನಾವಣೆಗೆ ಸಿದ್ಧರಾಗುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್‌ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷ ಇಂದು ಸಂಕಷ್ಟದಲ್ಲಿದೆ. ಆದರೆ, ಪಕ್ಷದ ಕಾರ್ಯಕರ್ತರು ಧೃತಿಗೆಡದೆ ಪಕ್ಷ ಸಬಲೀಕರಣ ಕಾರ್ಯದಲ್ಲಿ ಬೆನ್ನುಲುಬಾಗಿ ನಿಂತು ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವಲ್ಲಿ ಪಕ್ಷದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಸಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಚುನಾವಣೆ ತಯಾರಿಗೆ ಅಣಿಯಾಗುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಅನರ್ಹ ಶಾಸಕರ ಪರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಬ್ಲಾಕ್‌ ಅಧ್ಯಕ್ಷರನ್ನು ಉಚ್ಛಾಟಿಸುವ ಜತೆಗೆ ಕ್ರಿಯಾಶೀಲ ಇಲ್ಲದ ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಿಸಿ, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಕಾಂಗ್ರೆಸ್‌ ಮುಖಂಡರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಪರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ಬ್ಲಾಕ್‌ ಅಧ್ಯಕ್ಷರನ್ನು ಉಚ್ಛಾಟಿಸಲು ಸಹ ಕ್ರಮ ಕೈಗೊಂಡಿದ್ದಾರೆ.

ಉಪಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ ಕುರಿತು ಚರ್ಚಿಸಲು ಹಿರೇಕೆರೂರು ಹಾಗೂ ರಾಣಿಬೆನ್ನೂರು ಎರಡೂ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗುತ್ತಿದ್ದು, ಮುಂಬರುವ ಉಪಚುನಾವಣೆಯನ್ನು ಯಾವ ರೀತಿ ಎದುರಿಸಬೇಕು? ಎದುರಾಳಿ ಪಕ್ಷವನ್ನು ಹೇಗೆ ಮಣಿಸಬೇಕು? ಯಾವ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಬೇಕು ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿ ಯಾರಾದರೆ ಸೂಕ್ತ ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಜಿಲ್ಲೆಯ ಮುಖಂಡರ ಜತೆಗೆ ರಾಜ್ಯಮಟ್ಟದ ನಾಯಕರು ಸಹ ಕಾರ್ಯಕರ್ತರ ಸಭೆಗಳಲ್ಲಿ ಭಾಗಿಯಾಗುವ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸುವ ಕಾರ್ಯ ಮಾಡುತ್ತಿದ್ದಾರೆ.

ಹಿರೇಕೆರೂರು ಹಕೀಕತ್ತು: ಹಿರೇಕೆರೂರು ಕ್ಷೇತ್ರದಲ್ಲಿ ಈ ಹಿಂದೆ ಕಾಂಗ್ರೆಸ್‌ ಶಾಸಕರಾಗಿ ಬಿ.ಸಿ. ಪಾಟೀಲ ಇದ್ದರು. ಅವರ ರಾಜೀನಾಮೆಯಿಂದ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಭಾರೀ ಕುತೂಹಲ ಕೆರಳಿಸಿದೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ.ಸಿ. ಪಾಟೀಲ ಹಾಗೂ ಬಿಜೆಪಿಯ ಯು.ಬಿ. ಬಣಕಾರ ನಡುವೆ ನೇರ ಹಣಾಹಣಿ ನಡೆದು ಬಿ.ಸಿ. ಪಾಟೀಲ ಕೇವಲ 555 ಮತಗಳ ಅಂತರದಿಂದ ಜಯಗಳಿಸಿದ್ದರು. ಈಗ ಅವರೇ ಬಿಜೆಪಿಯತ್ತ ವಾಲಿರುವುದರಿಂದ ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆಯೇ ದೊಡ್ಡ ಸವಾಲಾಗಿದೆ.

ಕ್ಷೇತ್ರದಲ್ಲಿ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಪ್ರಭಾವಿ ನಾಕರಾಗಿದ್ದಾರೆ. ಎರಡು ಬಾರಿ ಶಾಸಕರಾಗಿರುವ ಅನುಭವ ಇರುವ ಬಿ.ಎಚ್. ಬನ್ನಿಕೋಡ ಅವರಿಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಕೊಡುವ ಸಾಧ್ಯತೆ ಇದೆ. ಬನ್ನಿಕೋಡ ಅವರು 1989ರಲ್ಲಿ ಜನತಾದಳದಿಂದ ಪ್ರಥಮ ಬಾರಿಗೆ ಶಾಸಕರಾದವರು. 1994ರಲ್ಲಿ ಜನತಾದಳ ಸ್ಪರ್ಧಿಸಿ ಸೋತರು. 1999ರಲ್ಲಿ ಪಕ್ಷೇತರಾಗಿ ಸ್ಪರ್ಧಿಸಿ ಎರಡನೇ ಬಾರಿ ಶಾಸಕರಾದರು. 2004ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. 2008ರಲ್ಲಿ ಜೆಡಿಎಸ್‌ನಿಂದ, 2013ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಸೋತರು. ಬಳಿಕ ಕಾಂಗ್ರೆಸ್‌ ಸೇರ್ಪಡೆಯಾದರು.

ಬಿ.ಎಚ್.ಬನ್ನಿಕೋಡ ಅವರನ್ನು ಬಿಟ್ಟರೆ ಕ್ಷೇತ್ರದಲ್ಲಿ ಮೊದಲ ಪಂಕ್ತಿಯ ಪ್ರಭಾವಿ ನಾಯಕರ ಕೊರತೆ ಎದ್ದು ಕಾಣುತ್ತಿದೆ. ಕಾಂಗ್ರೆಸ್‌ ಬನ್ನಿಕೋಡ ಅವರಿಗೆ ವಯಸ್ಸಿನ ಕಾರಣ ಮುಂದಿಟ್ಟು ಟಿಕೆಟ್ ನಿರಾಕರಿಸಿದರೆ, ಅದೇ ಪ್ರಭಾವ ಗಿಟ್ಟಿಸಿಕೊಳ್ಳಬಹುದಾದ ಅವರ ಮಗ, ಜಿಪಂ ಸದಸ್ಯ ಪ್ರಕಾಶ ಬನ್ನಿಕೋಡ ಅವರಿಗೆ ಟಿಕೆಟ್ ಕೊಡಬಹುದು ಎಂಬ ಲೆಕ್ಕಾಚಾರ ಪಕ್ಷದ ವಲಯದಲ್ಲಿ ನಡೆದಿದೆ.

ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಗಳಲ್ಲಿ ಜಿಪಂ ಮಾಜಿ ಸದಸ್ಯರಾದ ಬಿ.ಎನ್‌. ಬಣಕಾರ, ಪಿ.ಡಿ. ಬಸನಗೌಡ್ರ, ಮಾಜಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಬಿ. ತಿಪ್ಪಣ್ಣನವರ, ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಎಸ್‌.ಕೆ. ಕರಿಯಣ್ಣನವರ ಹಾಲಿ ಜಿಪಂ ಅಧ್ಯಕ್ಷರಾಗಿದ್ದು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ‘ಸಾದರ ಲಿಂಗಾಯತ ಕ್ಷೇತ್ರ’ ಎನಿಸಿಕೊಳ್ಳುವ ಈ ಕ್ಷೇತ್ರದಲ್ಲಿ ನಡೆಯಬಹುದಾದ ಜಾತಿ ಲೆಕ್ಕಾಚಾರದಲ್ಲಿ ಅವರಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂಬ ಚರ್ಚೆ ನಡೆದಿದ್ದು, ಕಾಂಗ್ರೆಸ್‌ ಯಾರಿಗೆ, ಯಾವ ಲೆಕ್ಕಾಚಾರದ ಮೇಲೆ ಟಿಕೆಟ್ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ.

ರಾಣಿಬೆನ್ನೂರು ರಾಜಕೀಯ: ರಾಣಿಬೆನ್ನೂರು ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಪಿಜೆಪಿಯಿಂದ ಆರ್‌. ಶಂಕರ್‌ ಆಯ್ಕೆಯಾಗಿದ್ದರು. ಅವರ ಅನರ್ಹತೆಯಿಂದ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಕೆ.ಬಿ. ಕೋಳಿವಾಡ ಇಲ್ಲವೇ ಅವರ ಪುತ್ರ ಪ್ರಕಾಶ ಕೋಳಿವಾಡ ಅವರಿಗೆ ಟಿಕೆಟ್ ಕೊಡುವ ಸಾಧ್ಯತೆಯಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆ.ಬಿ. ಕೋಳಿವಾಡ ಅವರು ಆರ್‌. ಶಂಕರ್‌ ವಿರುದ್ಧ 4029 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಈಗ ಅವರೇ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದನ್ನು ಸ್ವತಃ ಕೆ.ಬಿ. ಕೋಳಿವಾಡ ಅವರು ಕಾರ್ಯಕರ್ತರ ಸಭೆಯಲ್ಲಿ ಖಚಿತಪಡಿಸಿದ್ದಾರೆ. ಕೆ.ಬಿ.ಕೋಳಿವಾಡ ಕಾಂಗ್ರೆಸ್‌ನ ಪ್ರಭಾವಿ ಮುಖಂಡರಾಗಿದ್ದು, ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಿ ಇಲ್ಲವೇ ತಮಗೇ ಟಿಕೆಟ್ ಕೊಡಿ ಎಂಬ ಪ್ರಸ್ತಾಪ ಪಕ್ಷದ ಹೈಕಮಾಂಡ್‌ ಮುಂದಿಟ್ಟಿದ್ದರು. ಕೊನೆಗೆ ಪಕ್ಷ ಕೆ.ಬಿ. ಕೋಳಿವಾಡ ಅವರಿಗೇ ಟಿಕೆಟ್ ನೀಡಿತ್ತು. ಈಗ ನಡೆಯಬಹುದಾದ ಉಪಚುನಾವಣೆಯಲ್ಲಿಯೂ ಕೆ.ಬಿ. ಕೋಳಿವಾಡ ತಮ್ಮ ಹಿಂದಿನ ಪ್ರಸ್ತಾವನೆಯನ್ನೇ ಹೈಕಮಾಂಡ್‌ ಮುಂದಿಡಬಹುದು. ತಂದೆ ಅಥವಾ ಮಗ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಬಹುದು ಎಂಬ ಲೆಕ್ಕಾಚಾರ ನಡೆದಿದೆ. ಕೇವಲ ಒಂದು ವರ್ಷದ ಹಿಂದಷ್ಟೇ ಸೋತ ಕೆ.ಬಿ. ಕೋಳಿವಾಡ ಈ ಉಪಚುನಾವಣೆಯನ್ನು ಸವಾಲಾಗಿ ತೆಗೆದುಕೊಂಡು ತಾವೇ ಸ್ಪರ್ಧಿಸಲು ಇಚ್ಛಿಸಿದ್ದಾರೆ ಎಂಬ ಮಾತುಗಳು ಕಾರ್ಯಕರ್ತರ ವಲಯದಲ್ಲಿ ಕೇಳಿ ಬರುತ್ತಿದ್ದು, ಪಕ್ಷದ ಹೈಕಮಾಂಡ್‌ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಕಾದು ನೋಡಬೇಕಿದೆ.

 

•ಎಚ್.ಕೆ. ನಟರಾಜ

ಟಾಪ್ ನ್ಯೂಸ್

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.