64593 ಮಕ್ಕಳಿಗೆ ಕಾರ್ಬೆವ್ಯಾಕ್ಸ್‌ ಲಸಿಕೆ

12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್‌ನಿಂದ ವಿಶೇಷ ಆರೋಗ್ಯ ಭದ್ರತೆ: ಡಿಸಿ ಶೆಟ್ಟೆಣ್ಣವರ

Team Udayavani, Mar 17, 2022, 5:22 PM IST

20

ಹಾವೇರಿ: ಜಿಲ್ಲೆಯಲ್ಲಿ 12 ರಿಂದ 14 ವರ್ಷದ 64,593 ಮಕ್ಕಳಿಗೆ ಇಂದಿ(ಬುಧವಾರ)ನಿಂದ ಕಾರ್ಬೆವ್ಯಾಕ್ಸ್‌ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಮಕ್ಕಳಿಗೆ ಕೋವಿಡ್‌ನಿಂದ ವಿಶೇಷ ಆರೋಗ್ಯ ಭದ್ರತೆ ನೀಡುತ್ತದೆ. ಪೋಷಕರು ಯಾವುದೇ ಭಯವಿಲ್ಲದೆ ಲಸಿಕೆ ಪಡೆಯಲು ಮಕ್ಕಳನ್ನು ಪ್ರೋತ್ಸಾಹಿಸಬೇಕೆಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಬುಧವಾರ 12 ರಿಂದ 14 ವರ್ಷದ ಮಕ್ಕಳಿಗೆ ಸರ್ಕಾರ ವಿಶೇಷ ಅನುಮತಿ ನೀಡಿರುವ ಕಾರ್ಬೆವ್ಯಾಕ್ಸ್‌ ಕೋವಿಡ್‌ ಲಸಿಕೆ ಹಾಕುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯಿಂದ ಹೊರಗುಳಿದ 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸಕ್ಕರೆ ಕಾಯಿಲೆ, ಅಸ್ತಮಾದಂತಹ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುವ 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಈವರೆಗೆ ಬೂಸ್ಟರ್‌ ಡೋಸ್‌ ಕೋವಿಡ್‌ ಲಸಿಕೆ ನೀಡಲಾತ್ತಿತ್ತು. ಆದರೆ, ಈಗ ಸರ್ಕಾರದ ಸೂಚನೆಯಂತೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್‌ ಡೋಸ್‌ ನೀಡಲಾಗುತ್ತದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಈಗಾಗಲೇ ಜಿಲ್ಲೆಯಲ್ಲಿ 15 ರಿಂದ 17 ವರ್ಷದ 76 ಸಾವಿರ ಮಕ್ಕಳಿಗೆ ಮೊದಲ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ. ಉಳಿದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಗತಿಯಲ್ಲಿದೆ. ಇದರೊಂದಿಗೆ ನಿಗದಿತ ಸಮಯದಲ್ಲಿ ಎರಡನೇ ಡೋಸ್‌ ಲಸಿಕೆ ನೀಡಲಾಗುವುದು. 18 ವರ್ಷ ಮೇಲ್ಪಟ್ಟ ಶೇ.102ರಷ್ಟು ಜನರಿಗೆ ಮೊದಲ ಡೋಸ್‌ ಹಾಗೂ ಶೇ.96.67ರಷ್ಟು ಜನರಿಗೆ ಎರಡನೇ ಡೋಸ್‌ ನೀಡಲಾಗಿದೆ. ಈ ತಿಂಗಳ ಅಂತ್ಯದೊಳಗೆ ಬಾಕಿ ಉಳಿದಿರುವ ಎಲ್ಲರಿಗೂ ಎರಡನೇ ಡೋಸ್‌ ಲಸಿಕೆ ನೀಡಲಾಗುವುದು ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ|ಜಯಾನಂದ ಮಾತನಾಡಿ, 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡಲು ಜಿಲ್ಲೆಯಲ್ಲಿ 64,593 ಮಕ್ಕಳನ್ನು ಗುರುತಿಸಲಾಗಿದೆ. ಇಂದು ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಎರಡ್ಮೂರು ದಿನಗಳಲ್ಲಿ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ಮಕ್ಕಳಿಗೂ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ 2021ರ ಜ.16ರಿಂದ ಮೊದಲ ಹಂತದ ಕೋವಿಡ್‌ ಲಸಿಕೆ ಕಾರ್ಯಕ್ರಮ ಆರಂಭಿಸಿ, ವಿವಿಧ ವಯೋಮಾನದವರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗಿದೆ. 12 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿರುವುದು ಆರನೇ ಹಂತವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 12,03,091 ಜನರಿಗೆ ಮೊದಲ ಡೋಸ್‌, 11,39,705 ಜನರಿಗೆ ಎರಡನೇ ಡೋಸ್‌ ಹಾಗೂ 17,352 ಜನರಿಗೆ ಮುನ್ನೆಚ್ಚರಿಕೆ ಡೋಸ್‌ ನೀಡಲಾಗಿದೆ ಎಂದರು.

ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿಯ ಹೊನ್ನಪ್ಪ ಮೇವುಂಡಿ ಹಾಗೂ ಅನುಷಾ ಬಡಿಗೇರ ವಿದ್ಯಾರ್ಥಿಗಳಿಗೆ ಕಾರ್ಬೆವ್ಯಾಕ್ಸ್‌ ಕೋವಿಡ್‌ ಲಸಿಕೆ ನೀಡುವುದರ ಮೂಲಕ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎಚ್‌.ಎಸ್‌.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಪಿ.ಆರ್‌.ಹಾವನೂರ, ಡಿಡಿಪಿಐ ಬಿ.ಎಸ್‌.ಜಗದೀಶ್ವರ, ತಾಲೂಕು ಆರೋಗ್ಯಾಧಿಕಾರಿ ಡಾ|ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌.ಪಾಟೀಲ ಇತರರಿದ್ದರು.

64,593 ಮಕ್ಕಳಿಗೆ ಲಸಿಕೆ ಗುರಿ:  ಜಿಲ್ಲೆಯ ಶಾಲೆಗಳಲ್ಲಿ ಕಲಿಯುತ್ತಿರುವ 12 ರಿಂದ 14 ವರ್ಷದ 64,593 ಮಕ್ಕಳನ್ನು ಗುರುತಿಸಿ ಸರ್ಕಾರ ಬಿಡುಗಡೆ ಮಾಡಿರುವ ಕಾರ್ಬೆವ್ಯಾಕ್ಸ್‌ ಲಸಿಕೆ ನೀಡಲಾಗುತ್ತಿದೆ. ತಾಲೂಕುವಾರು ಶಿಕ್ಷಣ ಇಲಾಖೆ ನೀಡಿರುವ ಮಾಹಿತಿಯಂತೆ ಬ್ಯಾಡಗಿ ತಾಲೂಕಿನಲ್ಲಿ 4550, ಹಾನಗಲ್ಲ ತಾಲೂಕಿನಲ್ಲಿ 10,500, ಹಾವೇರಿ ತಾಲೂಕಿನಲ್ಲಿ 13,100, ಹಿರೇಕೆರೂರು ತಾಲೂಕಿನಲ್ಲಿ 7,135, ರಾಣಿಬೆನ್ನೂರ ತಾಲೂಕಿನಲ್ಲಿ 13,650, ಸವಣೂರ ತಾಲೂಕಿನಲ್ಲಿ 7,000 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ 8,658 ಮಕ್ಕಳು ಸೇರಿ 64,593 ಮಕ್ಕಳನ್ನು ಲಸಿಕೆ ನೀಡಲು ಗುರುತಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆತರಲು ಹಾಗೂ ಲಸಿಕೆ ಕೊಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.