ವಾಕ್ಸಮರದ ಮಧ್ಯೆ ಮತದಾನಕ್ಕೆ ದಿನಗಣನೆ


Team Udayavani, Oct 25, 2021, 3:52 PM IST

23election

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟಿದೆ.

ಎರಡೂ ಪಕ್ಷಗಳ ನಾಯಕರ ವಾಕ್ಸಮರದ ನಡುವೆ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ಇನ್ನುಳಿದ 5 ದಿನಗಳು ಎರಡೂ ಪಕ್ಷಗಳಿಗೆ ನಿರ್ಣಾಯಕವಾಗಿವೆ. ಬಿಜೆಪಿಯ ಶಿವರಾಜ ಸಜ್ಜನರ, ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಎರಡೂ ಪಕ್ಷ‌ಗಳ ನಾಯಕರು ಕ್ಷೇತ್ರದಲ್ಲೇ ಠಿಕಾಣಿ ಹೂಡಿ ತಮ್ಮ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಕಾರ್ಯಕರ್ತರು ಹಗಲಿರುಳು ಪಕ್ಷ‌ ವಹಿಸಿದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಮತದಾನದ ದಿನಕ್ಕೆ ಇನ್ನು 5 ದಿನಗಳಷ್ಟೇ ಬಾಕಿ ಉಳಿದಿರುವುದರಿಂದ ಮತದಾರರನ್ನು ಓಲೈಸಲು ಎಲ್ಲ ಪಕ್ಷ‌ಗಳು ನಾನಾ ತಂತ್ರ ಹೂಡುತ್ತಿವೆ. ಆಡಳಿತಾರೂಢ ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳುವುದು ಅನಿವಾರ್ಯ ಎನಿಸಿದೆ.

ಈ ಉಪಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ಪಾಠ ಕಲಿಸುವ ಉತ್ಸಾಹದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಸದ್ಯ ಮನೆಮನೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಸಂಘಟನೆ ಹಾಗೂ ಕಾರ್ಯಕರ್ತರ ಕೊರತೆ ಎದುರಿಸುತ್ತಿದೆ.

ಕಾರ್ಯಕರ್ತರಲ್ಲಿ ಹೊಸ ಹುರುಪು

ನಾಮಪತ್ರ ಸಲ್ಲಿಕೆ ದಿನದಿಂದಲೇ ಹಾನಗಲ್ಲ ಕ್ಷೇತ್ರ ರಾಜಕೀಯ ನಾಯಕರ ವಾಕ್ಸಮರಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಸಿದ್ದರಾಮಯ್ಯ, ಡಿಕೆಶಿ ಅವರು ಕ್ಷೇತ್ರದಲ್ಲಿ ಈಗಾಗಲೇ ಬೀಡು ಬಿಟ್ಟು ಪ್ರಚಾರ ನಡೆಸಿ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಸಿ.ಎಂ. ಬಸವರಾಜ ಬೊಮ್ಮಾಯಿ ಅವರೂ ಕಾಂಗ್ರೆಸ್‌ ನಾಯಕರ ಆರೋಪಕ್ಕೆ ಸೆಡ್ಡು ಹೊಡೆದು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ. ಬಹಿರಂಗ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿ ಇದ್ದು, ಚುನಾವಣಾ ಕಣ ರಂಗೇರಿದ್ದರಿಂದ ಎರಡೂ ಪಕ್ಷ‌ಗಳ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಂತಾಗಿದೆ.

ಇದನ್ನೂ ಓದಿ: ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ರಂಗೇರಿದ ಚುನಾವಣಾ ಕಣ

ಈಗಾಗಲೇ ಎರಡು ಸುತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರ ವಾಕ್ಸಮರವನ್ನು ಕ್ಷೇತ್ರದ ಮತದಾರರು ನೋಡಿದ್ದಾರೆ. ಬಹಿರಂಗ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿ ಇರುವ ಹಿನ್ನೆಲೆ ಸೋಮವಾರದಿಂದ ಮತ್ತೊಂದು ಸುತ್ತಿನಲ್ಲಿ ಮೂರೂ ಪಕ್ಷ‌ಗಳ ನಾಯಕರು ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಸಿಎಂ ಬೊಮ್ಮಾಯಿ ಸೇರಿದಂತೆ ಹತ್ತಾರು ಸಚಿವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಕಾಂಗ್ರೆಸ್‌ ನಾಯಕರೂ ಪ್ರಚಾರ ನಡೆಸಲಿದ್ದಾರೆ. ಅ.27ರಂದು ಕಾಂಗ್ರೆಸ್‌ ಬೃಹತ್‌ ಸಮಾವೇಶ ಆಯೋಜಿಸಲು ಸಿದ್ಧತೆಯಲ್ಲಿ ತೊಡಗಿದ್ದು, ಕಾಂಗ್ರೆಸ್‌ನ ಘಟಾನುಘಟಿ ನಾಯಕರಿಗೆ ಈ ಸಮಾವೇಶದ ವೇದಿಕೆ ಸಾಕ್ಷಿಯಾಗಲಿದೆ. ಇನ್ನು ಜೆಡಿಎಸ್‌ ಪಕ್ಷ ಅಭ್ಯರ್ಥಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು, ಶನಿವಾರ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೂ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿ ಕಾಂಗ್ರೆಸ್‌-ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು. ಇದರೊಂದಿಗೆ ಮೂರೂ ಪಕ್ಷ‌ಗಳ ನಾಯಕರ ವಾಕ್ಸಮರಕ್ಕೆ ಹಾನಗಲ್ಲ ಕ್ಷೇತ್ರದ ಜನತೆ ಸಾಕ್ಷಿಯಾದಂತಾಗಿದೆ.

ದಿ.ಸಿಎಂ.ಉದಾಸಿ ಅವರು ಕಳೆದ ಮೂರು ವರ್ಷದಲ್ಲಿ 1530ಕೋಟಿ ಗೂ. ಹೆಚ್ಚು ಹಣವನ್ನು ತಾಲೂಕಿಗೆ ತಂದಿದ್ದಾರೆ. 600ಕೋಟಿಗೂ ಹೆಚ್ಚು ಹಣವನ್ನು ಏತನೀರಾವರಿ ಯೋಜನೆಗೆ ತಂದಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಬೇಕಾದರೆ ನಮ್ಮ ಪಕ್ಷದ ಶಾಸಕರು ಬೇಕಾಗುತ್ತೆ. ಹೀಗಾಗಿ ನಮ್ಮವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರಿಗೆ ಮತ ನೀಡಬೇಕು. -ಶಿವಕುಮಾರ ಉದಾಸಿ, ಸಂಸದರು

ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ. ಶ್ರೀನಿವಾಸ ಮಾನೆ ಅವರು ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಇದ್ದುಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಹಿರಿಯ ಮುಖಂಡರು, ಪಕ್ಷದ ಶಾಸಕರು, ಮಾಜಿ ಶಾಸಕರು, ವೀಕ್ಷಕರು, ಹಾಗೂ ನಿಯೋಜಿತ ಉಸ್ತುವಾರಿಗಳು ಎಲ್ಲ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡು ಅವರ ಗೆಲುವಿವಾಗಿ ಶ್ರಮಿಸಲಾಗುತ್ತಿದೆ. ಹಾನಗಲ್ಲ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಗೆಲುವು ಖಚಿತ. -ಸಲೀಂ ಅಹ್ಮದ್‌, ಕೆಪಿಸಿಸಿ ಕಾರ್ಯಾಧ್ಯಕ್ಷ.

-ವೀರೇಶ ಮಡ್ಲೂರ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.