ಸುರಕ್ಷತೆಯಿಂದ ಮಾತ್ರ ಕೋವಿಡ್ ತಡೆ ಸಾಧ್ಯ
Team Udayavani, Apr 10, 2021, 5:13 PM IST
ಬ್ಯಾಡಗಿ: ಕೋವಿಡ್ ತಡೆಗಟ್ಟಲುಸುರಕ್ಷತಾ ಕ್ರಮಗಳಿಂದ ಮಾತ್ರ ಸಾಧ್ಯ ಎಮದು ಹಾವೇರಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.
ಹಾವೇರಿ ಜಿಲ್ಲಾ ಪೊಲೀಸ್, ಹಾವೇರಿ ಉಪವಿಭಾಗ ಹಾಗೂ ಬ್ಯಾಡಗಿ ಪೊಲೀಸ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ನಡೆದ ಕೋವಿಡ್ ಜಾಗೃತಿ ಬೈಕ್ ಜಾಥಾದಲ್ಲಿ ಅವರುಮಾತನಾಡಿದರು. ಸಾರ್ವಜನಿಕರುಸ್ವಯಂ ಪ್ರೇರಿತರಾಗಿ ಮುಂಜಾಗ್ರತಾಕ್ರಮಗಳನ್ನು ಅನುಸರಿಸಿದಲ್ಲಿ ಮಾತ್ರಹೆಚ್ಚುತ್ತಿರುವ ಕೋವಿಡ್ ತಡೆಗಟ್ಟಲು ಸಾಧ್ಯ ಎಂದರು.
ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಕಳೆದೊಂದು ವರ್ಷದಿಂದ ಕೋವಿಡ್ ಹಾವಳಿಯಿಂದ ಜಗತ್ತುತಲ್ಲಣಿಸಿದೆ. ಭಾರತದಲ್ಲಿಯೇಇದಕ್ಕೆ ಲಸಿಕೆ ತಯಾರಿಸಲಾಗಿದ್ದು,ಇನ್ನೇನು ಕೋವಿಡ್ ದಿಂದ ಜಗತ್ತುಮುಕ್ತವಾಯಿತು ಎನ್ನುವಷ್ಟರಲ್ಲಿಎರಡನೇ ಅಲೆ ಆರಂಭವಾಗಿದ್ದುಆತಂಕದ ವಿಷಯ. ಈ ನಿಟ್ಟಿನಲ್ಲಿಸರಕಾರ ಸಾರ್ವಜನಿಕರ ಆರೋಗ್ಯದೃಷ್ಟಿಯಿಂದ ಕೆಲವು ನಿಯಮಗಳನ್ನುಜಾರಿಗೆ ತಂದಿದೆ. ಅವುಗಳ ಪಾಲನೆಮಾಡುವ ಮೂಲಕ ಸರಕಾರದಜೊತೆಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಜಾಥಾದಲ್ಲಿ ಡಿವೈಎಸ್‌ಪಿ ಶಂಕರಮಾರಿಹಾಳ, ಸಿಪಿಐ ಬಸವರಾಜಪಿ.ಎಸ್., ಹಾವೇರಿ ಶಹರದ ಸಿಪಿಐಪ್ರಲ್ಹಾದ ಚನ್ನಗಿರಿ, ಸಿಪಿಐ ಚಿದಾನಂದ,ಪಿಎಸ್‌ಐ ಮಾಹಾಂತೇಶ ಎಂ.ಎಂ.,ತಹಸೀಲ್ದಾರ್ ರವಿಕುಮಾರಕೊರವರ, ಪುರಸಭೆ ಮುಖ್ಯಾಧಿಕಾರಿ ವಿ.ಎಂ.ಪೂಜಾರ, ಬ್ಯಾಡಗಿ ಹಾಗೂಕಾಗಿನೆಲೆ ಪೊಲೀಸ್ ಠಾಣೆ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.