![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 16, 2020, 4:25 PM IST
ಹಾವೇರಿ: ಶುಶ್ರೂಷಕಿ, ಪೊಲೀಸ್, ಶಿಕ್ಷಣ ಇಲಾಖೆ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ 115 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, 34 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 2407 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಶನಿವಾರದ ವರೆಗೆ 1533 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಶನಿವಾರ ಓರ್ವನ ಮರಣ ಪ್ರಕರಣ ಸೇರಿ ಒಟ್ಟಾರೆ 50 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 406 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಹಾಗೂ 418 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್ ಹೆಲ್ತ್ ಸೆಂಟರ್, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಒಟ್ಟಾರೆ 824 ಸಕ್ರಿಯ ಪ್ರಕರಣಗಳಿವೆ. ಆ.15 ರಂದು ಹಾನಗಲ್ಲ-08, ಸವಣೂರು-07, ಬ್ಯಾಡಗಿ-09, ಹಿರೇಕೆರೂರು-16, ಶಿಗ್ಗಾವಿ-13, ರಾಣೆಬೆನ್ನೂರು-36 ಹಾಗೂ ಹಾವೇರಿ ತಾಲೂಕಿನಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದೆ. ಶನಿವಾರ ಹಾನಗಲ್ಲ ಹಾಗೂ ಹಿರೇಕೆರೂರಿನ ತಲಾ ಆರು ಜನರು, ಶಿಗ್ಗಾವಿ-10, ಸವಣೂರು-09, ಹಾವೇರಿ-03 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೇನ್ಮೆಂಟ್ ಝೋನ್ ಹಾಗೂ ಬಫರ್ ಝೋನ್ ಆಗಿ ಘೋಷಿಸಲಾಗಿದೆ. ಆಯಾ ತಾಲೂಕು ದಂಡಾಧಿಕಾರಿಗಳನ್ನು ಇನ್ಸಿಡೆಂಟಲ್ ಕಮಾಂಡರ್ ಆಗಿ ನೇಮಿಸಲಾಗಿದೆ.
ಓರ್ವ ಸಾವು: ಶಿಗ್ಗಾವಿ ತಾಲೂಕಿನ ಹೋತನಹಳ್ಳಿ ಗ್ರಾಮದ 50 ವರ್ಷದ ಪುರುಷ(ಪಿ-177257) ತೀವ್ರ ಉಸಿರಾಟದ ತೊಂದರೆಯಿಂದ ಆ.2 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ರ್ಯಾಪಿಡ್ ಆಂಟಿಜನ್ ಕಿಟ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.