220 ವಾರಿಯರ್ಸ್‌ಗೆ ಸೋಂಕು

¬ಆರೋಗ್ಯ-ಪೊಲೀಸ್‌-ಕಂದಾಯ ಇಲಾಖೆ ನೌಕರರು-ಆಶಾ ಕಾರ್ಯಕರ್ತೆಯರಿಗೆ ಪಾಸಿಟಿವ್‌

Team Udayavani, Oct 17, 2020, 1:41 PM IST

hv-tdy-2

ಹಾವೇರಿ: ಕೋವಿಡ್ ಮಹಾಮಾರಿ ನಿಯಂತ್ರಣಕ್ಕೆ ಹಗಲಿರುಳು ನಿರಂತರವಾಗಿ ಶ್ರಮಿಸುತ್ತಿರುವ ಆರೋಗ್ಯ, ಪೊಲೀಸ್‌, ಕಂದಾಯ ಇಲಾಖೆನೌಕರರು, ಆಶಾ ಕಾರ್ಯಕರ್ತೆಯರುಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ 220 ವಾರಿಯರ್ಸ್‌ಗಳಿಗೆ ಕೋವಿಡ್ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಇದುವರೆಗೆಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ 9958 ಕ್ಕೆ ತಲುಪಿದ್ದು, 180 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಆರಂಭವಾದಾಗಿನಿಂದಲೂ ಫ್ರಂಟ್‌ಲೈನ್‌  ವಾರಿಯರ್ಸ್‌ಎನಿಸಿರುವ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೋಂಕು ಹರಡುವುದನ್ನು ತಡೆಯಲು, ಸೋಂಕಿತರಿಗೆ ಚಿಕಿತ್ಸೆ ನೀಡಲು ಶ್ರಮಿಸುತ್ತಿದ್ದಾರೆ. ಆದರೆ, ಅಂತಹ ವಾರಿಯರ್ಸ್‌ಗೂ ಕೋವಿಡ್ ಮಹಾಮಾರಿ ಬಿಟ್ಟಿಲ್ಲ. ಇದುವರೆಗೆ 220 ವಾರಿಯರ್ಸ್‌ಗಳಿಗೆ ಕೋವಿಡ್ ಸೋಂಕು ತಗುಲಿದೆ. ಪ್ರಮುಖ ಹುದ್ದೆಯೊಂದಿಗೆ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಧಿಕಾರಿಗಳು, ಸಿಬ್ಬಂದಿಯೇ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದರಿಂದ ಆಡಳಿತದ ಮೇಲೂ ಪರಿಣಾಮ ಬೀಳುವಂತಾಗಿದೆ.

220 ವಾರಿಯರ್ಸ್‌ಗೆ ಸೋಂಕು: ಸಾರ್ವಜನಿಕರು ಮಾಸ್ಕ್ ಧರಿಸುವಂತೆ, ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಹಗಲಿರುಳೆನ್ನದೇಕರ್ತವ್ಯ ನಿರ್ವಹಿಸಿದಪೊಲೀಸ್‌ ಸಿಬ್ಬಂದಿಯೇ ವಾರಿಯರ್ಸ್‌ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಇದುವರೆಗೆ 86 ಪೊಲೀಸರಿಗೆ ಕೋವಿಡ್ ಪಾಸಿಟಿವ್‌ ತಗುಲಿದೆ. ಗ್ರಾಮೀಣ ಭಾಗದಲ್ಲಿ ಕೋವಿಡ್ ಜಾಗೃತಿಗೆ ಶ್ರಮಿಸಿದ ಹಾಗೂ ಮನೆ ಮನೆ ಸರ್ವೇ ಮುಂತಾದ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ 23 ಆಶಾ ಕಾರ್ಯಕರ್ತೆಯರಿಗೆ ಸೋಂಕು ತಗುಲಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡುವ 20 ಸ್ಟಾಫ್‌ ನರ್ಸ್‌ಗಳು, 17 ಡಾಕ್ಟರ್‌ಗಳು, 11 ಲ್ಯಾಬ್‌ ಟೆಕ್ನೀಶಿಯನ್‌, ಇಬ್ಬರು ಕಿರಿಯ ಆರೋಗ್ಯ ಸಹಾಯಕರು, 5 ಪಿಡಿಒಗಳು, ಮೂವರು ತಹಶೀಲ್ದಾರ್‌, 25 ಗ್ರೂಪ್‌ ಡಿ ಸಿಬ್ಬಂದಿ, 8 ಜನ ಗ್ರಾಮ ಲೆಕ್ಕಾಧಿಕಾರಿಗಳು, ಅಬಕಾರಿ ಇಲಾಖೆಯ ಮೂವರು ಹಾಗೂ ಕೆಎಸ್‌ಆರ್‌ಟಿಸಿಯ 17 ನೌಕರರಿಗೆ ಇದುವರೆಗೆ ಸೋಂಕು ತಗುಲಿದೆ.

8 ಮಂದಿ ವಾರಿಯರ್ಸ್‌ ಸಾವು: ಇದುವರೆಗೆ ಜಿಲ್ಲೆಯಲ್ಲಿ 8 ಜನ ಕೋವಿಡ್ ವಾರಿಯರ್ಸ್‌ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆಯ 3, ಪೊಲೀಸ್‌ 1, ಲೋಕೋಪಯೋಗಿ ಇಲಾಖೆಯ 1, ಕಂದಾಯ ಇಲಾಖೆಯ 2, ಕೆಎಸ್‌ಆರ್‌ ಟಿಸಿಯ 1 ಸೇರಿದಂತೆ 8 ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ. ಅಲ್ಲದೇ, 18 ಶಿಕ್ಷಕರು ಮೃತಪಟ್ಟಿದ್ದು, 204 ಶಿಕ್ಷ‌ಕರಿಗೂ ಸೋಂಕು ತಗುಲಿದೆ. ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ಕು ನೂರಕ್ಕೂ ಹೆಚ್ಚು ನೌಕರರಿಗೆ ಸೋಂಕು ತಗುಲಿದೆ. ಜಿಲ್ಲೆಯ ಮೂರು ತಹಶೀಲ್ದಾರ್‌ ಕಚೇರಿ ಸೀಲ್‌ ಡೌನ್‌ ಮಾಡಲಾಗಿತ್ತು.

10 ಸಾವಿರದತ್ತ ಪ್ರಕರಣ: ಜಿಲ್ಲೆಯಲ್ಲಿ ಮೇ ಮೊದಲ ವಾರದಲ್ಲಿ ಪ್ರಥಮ ಕೋವಿಡ್ ಸೋಂಕಿನ ಪ್ರಕರಣ ಸವಣೂರಿನಲ್ಲಿ ವರದಿಯಾಗಿತ್ತು. ಆ ಬಳಿಕ ನಿರಂತರವಾಗಿಏರುಗತಿಯಲ್ಲಿ ಸಾಗಿ ನಿತ್ಯವೂ ನೂರಿನ್ನೂರು ಕೇಸ್‌ಗಳು ಬರುತ್ತಿವೆ. ಕಳೆದ ನಾಲ್ಕು ದಿನಗಳಿಂದ ನೂರರ ಒಳಗೆ ಪಾಸಿಟಿವ್‌ ಪ್ರಕರಣ ಬರುತ್ತಿರುವುದು ಸ್ವಲ್ಪ ಆಶಾದಾಯಕ ಬೆಳವಣಿಗೆಯಾಗಿದೆ. ಶುಕ್ರವಾರದವರೆಗೆ ಜಿಲ್ಲೆಯಲ್ಲಿ 9958 ಕೋವಿಡ್‌-19 ಪ್ರಕರಣಗಳು ವರದಿಯಾಗಿದ್ದು, 10 ಸಾವಿರದ ಗಡಿಯತ್ತ ಬಂದಿದೆ. ಇದುವರೆಗೆ 180 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚು ಜನರ ಕೋವಿಡ್ ಟೆಸ್ಟ್‌ ಮಾಡಿಸಲಾಗುತ್ತಿದ್ದರೂ ಕಳೆದ ಕೆಲವು ದಿನಗಳಿಂದ ಪಾಸಿಟಿವ್‌ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ಕಡಿಮೆಯಾಗಿದ್ದರೂ ಅಗತ್ಯ ಸಿದ್ಧತಾ ಕ್ರಮ ಹೆಚ್ಚಿಸಲಾಗುತ್ತಿದೆ. ಕೋವಿಡ್‌ ನಿಂದ ಮೃತಪಟ್ಟ ವಾರಿಯರ್ಸ್ ಗಳಲ್ಲಿ ಒಬ್ಬರಿಗೆ ಪರಿಹಾರ ಸಿಕ್ಕಿದ್ದು, ಉಳಿದ ಪ್ರಕರಣಗಳಲ್ಲೂ ಶೀಘ್ರದಲ್ಲಿ ಕುಟುಂಬದವರಿಗೆ ಪರಿಹಾರ ದೊರೆಯಲಿದೆ. ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ, ಹಾವೇರಿ

-ವೀರೇಶ ಮಡ್ಲೂರ

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.