ಹಳ್ಳಿಗರನ್ನೂ ಕಂಗೆಡಿಸಿದ ಕೋವಿಡ್

ಪತ್ತೆಯಾಗುತ್ತಿರುವ ಪ್ರಕರಣಗಳಲ್ಲಿ ಅರ್ಧ ಹಳ್ಳಿಗಳದ್ದು­! ಗ್ರಾಮಗಳಲ್ಲೂ ಪಾಲನೆಯಾಗಲಿ ಕಠಿಣ ಸುರಕ್ಷತಾ ಕ್ರಮ

Team Udayavani, May 18, 2021, 3:13 PM IST

17dvg002

ವಿಶೇಷ ವರದಿ

ಹಾವೇರಿ: ಕೊರೊನಾ ಕರ್ಫ್ಯೂ ಕಾರಣದಿಂದ ನಗರ, ಮಹಾನಗರಗಳಿಂದ ಯಥೇತ್ಛ ಪ್ರಮಾಣದಲ್ಲಿ ಜನರು ಹಳ್ಳಿಗಳಿಗೆ ಮರಳಿದ ಪರಿಣಾಮ ಈಗ ಹಳ್ಳಿಗಳಲ್ಲೂ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸಿದೆ.

ಕೋವಿಡ್‌ ತಪಾಸಣೆ ಮಾಡಿಸಿಕೊಳ್ಳದೇ ಹಳ್ಳಿಗಳಿಗೆ ಮರಳಿ ಬಂದವರಿಂದ, ಕೋವಿಡ್‌ ತಪಾಸಣೆಗೆ ಜನ ಮುಂದಾಗದೆ ಇರುವುದರಿಂದ ಹಾಗೂ ಹಳ್ಳಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮರೆತು ಮುಂದುವರಿದಿರುವ ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಂದ ಹಳ್ಳಿಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬರುವ ಪ್ರಕರಣಗಳಲ್ಲಿ ಅರ್ಧಕ್ಕರ್ಧ ಗ್ರಾಮೀಣ ಪ್ರದೇಶಗಳಲ್ಲಿಯೇ ಗೋಚರಿಸುತ್ತಿದೆ. ಈಗೀಗ ನಗರ ಪ್ರದೇಶಗಳಲ್ಲಿ ಕೊರೊನಾ ಸುರಕ್ಷತೆ ಬಗ್ಗೆ ಅರಿವು ಮೂಡಿದ್ದು, ಬಹುತೇಕರು ಸುರಕ್ಷತಾ ಕ್ರಮಗಳ ಪಾಲನೆಯಲ್ಲಿ ತೊಡಗಿದ್ದಾರೆ. ಆದರೆ ಗ್ರಾಮೀಣ ಜನರು ಮಾತ್ರ ಕೊರೊನಾ ಸುರಕ್ಷತಾ ಕ್ರಮಗಳ ಬಗ್ಗೆ ಈವರೆಗೂ ತಲೆಕೆಡಿಸಿಕೊಂಡಿಲ್ಲ.

ಮಾಸ್ಕ್ ಇಲ್ಲದೇ ತಮ್ಮ ನಿತ್ಯ ಕೆಲಸಗಳಲ್ಲಿ ತೊಡಗುತ್ತಿದ್ದಾರೆ. ಇದರ ಜತೆಗೆ ನೂರಾರು ಜನರನ್ನು ಸೇರಿಸಿ ಮನೆ ಮುಂದೆ ಮದುವೆ ಸಮಾರಂಭಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ನೂರಾರು ಜನರು ಯಾವುದೇ ದೈಹಿಕ ಅಂತರ, ಸುರಕ್ಷತಾ ಕ್ರಮಗಳ ಪಾಲನೆ ಇಲ್ಲದೇ ಒಂದೆಡೆ ಸೇರಿ ಸೋಂಕು ಹರಡುತ್ತಲೇ ಇದ್ದಾರೆ. ಇನ್ನು ಶವಸಂಸ್ಕಾರಕ್ಕೂ ನೂರಾರು ಜನರು ಸೇರುವ ಮೂಲಕ ಕೊರೊನಾದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದನ್ನೇ ಮರೆಯುತಿದ್ದಾರೆ. ಕೊರೊನಾ ಸೋಂಕಿನ ಬಗ್ಗೆ ಹಳ್ಳಿಗರು ತೋರುತ್ತಿರುವ ಉದಾಸೀನ ನಡೆಯಿಂದ ಈಗ ಹಳ್ಳಿಗಳಲ್ಲೂ ಕೊರಾನಾ ಅಟ್ಟಹಾಸ ಮೆರೆಯುವಂತಾಗಿದೆ.

ನಗರಗಳಂತೆ ಹಳ್ಳಿಗಳಲ್ಲೂ ಸ್ಥಳೀಯ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸುವುದು, ಅನಗತ್ಯ ಓಡಾಡದಂತೆ, ಒಂದೆಡೆ ನೂರಾರು ಜನರು ಸೇರದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರಿಗೆ ಹಳ್ಳಿಗರ ಸಹಕಾರ ಸಿಗುತ್ತಿಲ್ಲ.

ಜನರ ಈ ನಿರ್ಲಕ್ಷéದಿಂದ ಈಗ ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ವಕ್ಕರಿಸಿ ಗ್ರಾಮೀಣ ಜನರ ನಿದ್ದೆಗೆಡಿಸಿದೆ. ತಪಾಸಣೆಗೆ ಹಿಂದೇಟು: ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಈಗಾಗಲೇ ಸೋಂಕು ಹಬ್ಬಿದೆ. ಹಾಗೆಯೇ, ಪ್ರತಿ ಹಳ್ಳಿಯಲ್ಲೂ ಹತ್ತಾರು ಜನ ಅನಾರೋಗ್ಯದಿಂದ ಬಳಲಿ ಹಾಸಿಗೆ ಹಿಡಿಯುತ್ತಿದ್ದಾರೆ. ಆದರೂ ಜನರು ಕೊರೊನಾ ತಪಾಸಣೆಗೆ ಮುಂದಾಗುತ್ತಿಲ್ಲ. ಕೆಲವರು ಔಷಧ ಅಂಗಡಿಯಿಂದ ಜ್ವರ, ಶೀತಕ್ಕೆ ತಾವೇ ಕೇಳಿ ತಂದ ಔಷಧಿ ಸೇವಿಸುತ್ತಿದ್ದರೆ ಮತ್ತೆ ಕೆಲವರು ಸ್ಥಳೀಯವಾಗಿ ಸಿಗುವ ವೈದ್ಯರಿಂದ ಚಿಕಿತ್ಸೆ ಪಡೆದು ಮನೆಯಲ್ಲಿಯೇ ಇದ್ದಾರೆ. ಇದರಿಂದ ಕೆಲ ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರತೆಯತ್ತ ಸಾಗುತ್ತಿದ್ದು, ಕೊನೆಯ ಘಳಿಗೆಯಲ್ಲಿ ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ ಸಿಗದೆ ಪ್ರಾಣ ಬಿಡುವ ಪ್ರಸಂಗಗಳೂ ಹೆಚ್ಚಾಗುತ್ತಿವೆ.

ಒಟ್ಟಾರೆ ಕೊರೊನಾ ಸೋಂಕು ಹಳ್ಳಿಗಳಲ್ಲಿ ಹಬ್ಬುತ್ತಲೇ ಇದ್ದು, ಸೋಂಕಿನ ಸರಪಳಿ ತುಂಡರಿಸಲು ಸ್ಥಳೀಯ ಆಡಳಿತಗಳು ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ. ಜತೆಗೆ ಎಲ್ಲರ ಕಡ್ಡಾಯ ತಪಾಸಣೆ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ, ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ಕಾರ್ಯಕ್ಕೂ ಅಣಿಯಾಗಬೇಕಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.