ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಅಪಘಾತ: ಮೂವರಿಗೆ ಗಂಭೀರ ಗಾಯ
Team Udayavani, Feb 25, 2021, 11:13 AM IST
ಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ವಾಹನವೊಂದು ಢಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಾಳುಗಳನ್ನು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಂಜಿನ್ ಬಳಿ ಸಿಲುಕಿ ನರುಳುತ್ತಿದ್ದ ಗಾಯಾಳು ಸತೀಶ್ ಎಂಬ ವ್ಯಕ್ತಿಯ ಕಾಲು ತುಂಡಾಗಿದೆ.
108 ವಾಹನದ ಸಿಬ್ಬಂದಿಗಳು ಗಾಯಾಳುಗಳನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನಿಬ್ಬರಿಗೆ ತೀವ್ರ ರಕ್ತಸ್ರಾವವಾಗಿ ಪರಿಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ:ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್
ಮಹಾರಾಷ್ಟ್ರದಿಂದ ತಿರುಪತಿಗೆ ಹೋಗಿದ್ದ ಪ್ರಯಾಣಿಕರು ವಾಪಸ್ಸು ಊರಿಗೆ ತೆರಳುತ್ತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎನ್ನಲಾಗುತ್ತದೆ.
ಒಂಬತ್ತು ಜನರನ್ನು ಕರೆತುಕೊಂಡಿದ್ದ ಕ್ರೂಸರ್ ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಗುಂಪುಗಳ ನಡುವೆ ಗಲಭೆಯಲ್ಲಿ ಆರ್ ಎಸ್ಎಸ್ ಕಾರ್ಯಕರ್ತನ ಕೊಲೆ: 6 ಎಸ್ ಡಿಪಿಐ ಕಾರ್ಯಕರ್ತರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.