ಡಾಟಾ ಎಂಟ್ರಿ-ಕಂಪ್ಯೂಟರ್‌ ಆಪರೇಟರ್‌ ಸಮಾವೇಶ

ಸಮಸ್ಯೆ ನಿವಾರಣೆಗೆ ಸರ್ಕಾರದ ಗಮನ ಸೆಳೆಯುವೆ: ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ

Team Udayavani, Jul 25, 2022, 5:56 PM IST

20

ಹಾವೇರಿ: ನಗರದ ಡಾ|ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಹೊರಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ರಾಜ್ಯಮಟ್ಟದ ಡಾಟಾ ಎಂಟ್ರಿ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್‌ಗಳ ಸಮಾವೇಶ ನಡೆಯಿತು.

ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಡಾಟಾ ಎಂಟ್ರಿ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್‌ಗಳಿಗೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದರು. ಅಲ್ಲದೇ, ಸರ್ಕಾರದ ಗಮನ ಸೆಳೆಯುವ ಆಶ್ವಾಸನೆ ನೀಡಿದರು.

ಡಾಟಾ ಎಂಟ್ರಿ, ಕಂಪ್ಯೂಟರ್‌ ಆಪರೇಟರ್‌ ಗಳ ಕಾರ್ಯಾಧ್ಯಕ್ಷ ಪ್ರಕಾಶ ವೈ.ಎಂ. ಮಾತನಾಡಿ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಮಲತಾಯಿ ಧೋರಣೆ ಖಂಡಿಸಿದರು. ಎಲ್ಲಾ ನೌಕರರನ್ನು ನೇರ ಪಾವತಿಗೆ ಒಳಪಡಿಸಿದಲ್ಲಿ, ಈ ಹಿಂದೆ ಸರ್ಕಾರದಿಂದ ಅನುಸರಿಸಿದ ಹೊರಗುತ್ತಿಗೆ ಪದ್ಧತಿಯಿಂದ ಗುತ್ತಿಗೆದಾರರಿಗೆ ಪಾವತಿಯಾಗುತ್ತಿರುವ ವಿವಿಧ ತೆರಿಗೆಗಳಾದ ಜಿಎಸ್‌ಟಿ, ಸರ್ವೀಸ್‌ ಟ್ಯಾಕ್ಸ್‌ ಮುಂತಾದವುಗಳಿಂದ ಶೇ.25ರಷ್ಟು ಹಣ ಸರ್ಕಾರ ಮತ್ತು ನೌಕರರರಿಗೆ ಉಳಿತಾಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಮುಂದಿನ ದಿನಗಳಲ್ಲಿ ಡಾಟಾ ಎಂಟ್ರಿ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್‌ ನೌಕರರಿಗೆ ನೇರ ಪಾವತಿ, ಖಾಯಮಾತಿಗಾಗಿ ಒಗ್ಗೂಡಿ ಸರ್ಕಾರವನ್ನು ಆಗ್ರಹಿಸಿ ಹೋರಾಡಲು ಸಂಪೂರ್ಣ ಬೆಂಬಲ ನೀಡಿದರು.

ಅಂತಿಮವಾಗಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್‌ ಗಳಿಗೆ ನೇರ ಪಾವತಿ, ಸೇವಾ ಖಾಯಮಾತಿ ಮಾಡಲು ಸರ್ಕಾರವನ್ನು ಒತ್ತಾಯಿಸಿದರು. 700 ಜನರಿಗೆ ಒಬ್ಬ ಪೌರಕಾರ್ಮಿಕರಿದ್ದ ನಿಯಮಗಳನ್ನು 500 ಜನರಿಗೆ ಒಬ್ಬರಂತೆ ಬದಲಾಯಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ರೂಪಿತವಾದ ಸಿಆರ್‌ ನಿಯಮ 2010ರಲ್ಲಿ ರಚನೆಯಾಗಿದೆ. ಇಂದಿನ ಸ್ಥಿತಿಗೆ ಅನುಗುಣವಾಗಿ ಸಿಆರ್‌ ನಿಯಮ ಬದಲಾಯಿಸಲು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಹೊರಗುತ್ತಿಗೆ ನೌಕರರ ಸಂಘದ ರಾಜ್ಯಧ್ಯಕ್ಷ ಎಂ.ಬಿ. ನಾಗನಗೌಡ್ರ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ನಾಯಕರಾದ ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ವಕೀಲರಾದ ಎಸ್‌.ಜಿ. ಹೊನ್ನಪ್ಪನವರ, ನಾಗರಾಜ ಮಾಳಗಿ, ಸಂಜಯಗಾಂಧಿ  ಸಂಜೀವಣ್ಣನವರ, ಹೊನ್ನೇಶ್ವರ ತಗಡಿನಮನಿ, ಉಡಚಪ್ಪ ಮಾಳಗಿ, ಬಸವರಾಜ ಹಿಡಿಗೊಂಡ, ಲಕ್ಷ್ಮಣ ಕನವಳ್ಳಿ ಪಾಲ್ಗೊಂಡು ಬೆಂಬಲ ವ್ಯಕ್ತ ಪಡಿಸಿದರು.

ಸಮಾವೇಶದಲ್ಲಿ ಜಿಲ್ಲೆಯ ಹೊರಗುತ್ತಿಗೆ ನೌಕರರ ಡಾಟಾ ಎಂಟ್ರಿ ಆಪರೇಟರ್‌, ಕಂಪ್ಯೂಟರ್‌ ಆಪರೇಟರ್‌ಗಳ ಸಂಘದ ಜಿಲ್ಲಾಧ್ಯಕ್ಷ ಸತೀಶ ಪೂಜಾರ, ಸಂಘದ ಮುಖಂಡರಾದ ಸಂತೋಷಗೌಡ ಹಿತ್ತಲಮನಿ, ರಾಘು ದಾಮೋದರ, ಶೋಯಬ್‌ ಚಿನಿವಾಲ, ಜಗದೀಶ ಕಾಶೆಟ್ಟಿ, ಹೇಮಾ ಪಾಟೀಲ, ಶೈಲಜಾ, ಫೈರೋಜ, ಸುರೇಶ ಕಮ್ಮಾರ, ಅಣ್ಣಯ್ಯ, ರೇಖಾ ಗಿಡ್ಡಣ್ಣನವರ ಇತರರಿದ್ದರು.

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.