ಅನರ್ಹರು ಬಿಪಿಎಲ್ ಕಾರ್ಡ್ ಹಿಂದಿರುಗಿಸಿ: ಡಿಸಿ ಸಂಜಯ
Team Udayavani, Feb 26, 2021, 4:11 PM IST
ಹಾವೇರಿ: ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯಲು ಅರ್ಹತೆ ಇಲ್ಲದ ಸರ್ಕಾರಿ, ಅರೇ ಸರ್ಕಾರಿ ಹಾಗೂ ನಿಗಮ-ಮಂಡಳಿ ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ತಕ್ಷಣ ಹಿಂದಿರುಗಿಸಬೇಕು. ಇಲ್ಲದಿದ್ದರೆ, ಅಂತಹ ಅಧಿಕಾರಿ, ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಕೆ ನೀಡಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅ ಧಿಕಾರಿ, ನೌಕರ ಸರ್ಕಾರದಿಂದ ವೇತನ, ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ. ಆದ್ದರಿಂದ ಇಂತಹ ಅ ಧಿಕಾರಿ, ನೌಕರರು ಮತ್ತು ನೌಕರರ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವುದು ಆಹಾರ ಸಚಿವರ ಗಮನಕ್ಕೆ ಬಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಸೂಚನೆ ನೀಡಲು ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್‌ನ್ನು ಹೊಂದಿರುವ ನೌಕರರು ತಕ್ಷಣವೇ ಆಯಾ ತಾಲೂಕು ತಹಶೀಲ್ದಾರ್ ಕಚೇರಿಗಳಿಗೆ ಹಿಂದಿರುಗಿಸಲು ಜಿಲ್ಲಾಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.
ಈ ಎಚ್ಚರಿಕೆ ನೀಡಿದ್ದಾಗ್ಯೂ ಜಿಲ್ಲೆಯ ಸರ್ಕಾರಿ, ಸರ್ಕಾರದ ನಿಗಮ,ಮಂಡಳಿ, ಪ್ರಾಕಾರ, ವಿಶ್ವ ವಿದ್ಯಾಲಯ, ಸಂಸ್ಥೆಯ ಅಧಿ ಕಾರಿ, ನೌಕರರು ಮತ್ತು ನೌಕರರ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ ಅವುಗಳನ್ನು ಸ್ವಯಂ ಪ್ರೇರಣೆಯಿಂದ ಮಾ.10 ರೊಳಗಾಗಿ ಜಿಲ್ಲೆಯ ಆಯಾ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಹಿಂದಿರುಗಿಸಬೇಕು.
ಒಂದೊಮ್ಮೆ ಕಾರ್ಡ್‌ಗಳನ್ನು ಹಿಂತಿರುಗಿಸದೇ ಉಳಿಸಿಕೊಂಡಲ್ಲಿ ಕಾನೂನಿನ್ವಯ ಕ್ರಮ ವಹಿಸಿ, ಸಂಬಂಧಿ ಸಿದ ಅ ಧಿಕಾರಿ, ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಶಿಸ್ತಿನ ಕ್ರಮ ಕೈಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.