ಚುನಾವಣೆ ತಯಾರಿ ಕುರಿತು ದೆಹಲಿಯಲ್ಲಿ ಚರ್ಚೆ: ಸಿಎಂ ಬೊಮ್ಮಾಯಿ
Team Udayavani, Dec 24, 2022, 12:34 PM IST
ಹಾವೇರಿ: ಸೋಮವಾರ ಸಂಜೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲಿದ್ದು, ಈ ವೇಳೆ ಚುನಾವಣೆ ತಯಾರಿ ಕುರಿತು ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು, ಕೆಲವು ಸ್ಕೀಂಗಳು ಸರಿಯಾಗಿ ನಡೆಯುತ್ತಿವೆ. ದೆಹಲಿಯಲ್ಲಿ ಬಿಜೆಪಿ ಘಟಕದ ಅದ್ಯಕ್ಷರ ಜೊತೆ ಚರ್ಚೆ ಮಾಡಲಾಗುವುದು. ಅಲ್ಲಿ ಏನು ಚರ್ಚೆ ನಡೆಯುತ್ತೋ ಅದನ್ನು ಬಳಿಕವೇ ಹೇಳುತ್ತೇನೆ ಎಂದರು.
ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇನೆ. ಈಗಾಗಲೇ ಹಣಕಾಸು ಇಲಾಖೆ ಜೊತೆ ಎರಡು ಸುತ್ತಿನ ಮಾತುಕತೆ ನಡೆಸಲಾಗಿದೆ. ಎಲ್ಲಾ ಇಲಾಖೆಯವರ ಜೊತೆಗೂ ಚರ್ಚೆ ಮಾಡಲಿದ್ದೇನೆ. ಬಜೆಟ್ ಎಲ್ಲಾ ಸಿದ್ಧತೆಗಳನ್ನು ಮುಂದಿನ ಜನೆವರಿ ತಿಂಗಳಿಂದಲೇ ಶುರು ಮಾಡಲಿದ್ದೇನೆ ಎಂದರು.
ಕೊರೊನಾ ಹಿನ್ನೆಲೆ ಟೆಸ್ಟ್ ಗಳನ್ನು ಹೆಚ್ಚಿಸುತ್ತೇವೆ, ಬೂಸ್ಟರ್ ಡೋಸ್ ಕೂಡಾ ಜಾಸ್ತಿ ಮಾಡುತ್ತಿದ್ದೇವೆ. ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು, ತಂತ್ರಜ್ಞಾನಗಳನ್ನು ಅಳವಡಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಮಾಡುತ್ತಿದ್ದೇವೆ. ಏರ್ ಪೋರ್ಟ್ ಹಾಗೂ ಬಸ್ ಸ್ಟಾಪ್ ಗಳಲ್ಲಿ ನಿಗಾ ಇಡಲು ಸೂಚನೆ ನೀಡಿದ್ದೇನೆ ಎಂದರು.
ಇದನ್ನೂ ಓದಿ:ಬೆಂಗಳೂರು ಯಾವತ್ತೂ ನನ್ನ ತಂಡ..; ಮನ ಬಿಚ್ಚಿ ಮಾತನಾಡಿದ ಕ್ರಿಸ್ ಗೇಲ್
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್ ಭೀತಿ ವಿಚಾರ, ಓಪನ್ ಡೋರ್ ನಲ್ಲಿ ಸಮ್ಮೇಳನ ನಡೆಯುವುದರಿಂದ ಮುಂಜಾಗೃತಾ ಕ್ರಮ ತಗೊಳ್ಳಲು ಹೇಳಿದ್ದೇನೆ. ಮಾಸ್ಕ್, ಸ್ಯಾನಿಟೈಸರ್, ಅಂತರ ಕಾಪಾಡಲು ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತ ಎಂದರು.
ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಗಳಿಗೆ ಮೀಸಲಾತಿ ವಿಚಾರಕ್ಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಈಗಾಗಲೇ ಎಲ್ಲಾ ಮಟ್ಟದಲ್ಲಿ ಚರ್ಚೆ ಆಗಿದೆ ಎಂದರು.
ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ..
ಹಾವೇರಿಯಲ್ಲಿ ಜ.6ರಿಂದ 8ವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು.
ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಬೇಕು. ಎಲ್ಲಡೆ ಕನ್ನಡದ ಕಂಪು ಹರಡಬೇಕು. ಇತರೆ ಸಮ್ಮೇಳನಕ್ಕಿಂತ ಈ ಸಮ್ಮೇಳನ ಉತ್ಕೃಷ್ಟವಾಗಿರುತ್ತದೆ. ಕನ್ನಡ ಭಾಷೆ, ನೆಲ,ಜಲ ಹಾಗೂ ಜನರನ್ನು ಯಾರು ಮುಟ್ಟಲು ಸಾಧ್ಯವಿಲ್ಲ. ಕನ್ನಡ ನಾಡು ಶ್ರೀಮಂತ ನಾಡು. ಕನ್ನಡ,ಕನ್ನಡಿಗರ ಸಮಸ್ಯೆಗಳನ್ನು ಸಮ್ಮೇಳನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಇದು ಎಲ್ಲ ಕನ್ನಡಿಗರ ಕಾರ್ಯಕ್ರಮವಾಗಿದ್ದು ಎಲ್ಲರೂ ಆಗಮಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.