ಬಿತ್ತನೆಗೆ ಬೀಜ-ಗೊಬ್ಬರ ಸಿದ್ಧತೆ ಮಾಡಿಕೊಳ್ಳಿ

|ಜಿಲ್ಲೆಯಲ್ಲಿ 15-18 ಸಾವಿರ ಮೆಟ್ರಿಕ್‌ ಟನ್‌ ಡಿಎಪಿ ಗೊಬ್ಬರ ಬೇಡಿಕೆ |15 ಸಾವಿರ ಮೆಟ್ರಿಕ್‌ ಟನ್‌ ದಾಸ್ತಾನು

Team Udayavani, Jun 4, 2021, 9:28 PM IST

3hvr1

ಹಾವೇರಿ: ಹವಾಮಾನ ಇಲಾಖೆ ವರದಿಯಂತೆ ಮೂರ್‍ನಾಲ್ಕು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಜಿಲ್ಲೆಯಲ್ಲಿ ಮುಂಗಾರು ಕೃಷಿ ಯೋಜನೆಯಂತೆ ಡಿಎಪಿ ಗೊಬ್ಬರ ಸೇರಿದಂತೆ ಮುಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ಗೊಬ್ಬರದ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮುಂಗಾರು ಬಿತ್ತನೆ ಕೃಷಿ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾಮಾನ ಇಲಾಖೆ ಮಾಹಿತಿಯಂತೆ ಈ ವರ್ಷ ಮುಂಗಾರು ಮಳೆ ಶೇ.4 ಕಡಿಮೆಯಾಗಲಿದೆ ಎಂದು ಮುನ್ಸೂಚನೆ ದೊರೆತಿದೆ. ಆದಾಗ್ಯೂ ವಾಡಿಕೆ ಮಳೆಯಂತೆ ಜಿಲ್ಲೆಯಲ್ಲಿ ಮುಂಗಾರಿಗೆ ಅಗತ್ಯವಾದ ಡಿಎಪಿ ಹಾಗೂ ಕಾಂಪ್ಲೆಕ್ಸ್‌ ಗೊಬ್ಬರಗಳು ಹಾಗೂ ಬಿತ್ತನೆ ಬೀಜಗಳ ದಾಸ್ತಾನು ಕುರಿತಂತೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ 15 ರಿಂದ 18 ಸಾವಿರ ಮೆಟ್ರಿಕ್‌ ಟನ್‌ ಡಿಎಪಿ ಗೊಬ್ಬರ ಬೇಡಿಕೆ ಇದೆ. ಈಗಾಗಲೇ ಅಂದಾಜು 15 ಸಾವಿರ ಮೆಟ್ರಿಕ್‌ ಟನ್‌ನಷ್ಟು ಗೊಬ್ಬರ ದಾಸ್ತಾನು ಇದೆ. ಜೂನ್‌ ಹಾಗೂ ಜುಲೈ ತಿಂಗಳಲ್ಲಿ ನಿಗದಿ ಯಾದ ಗೊಬ್ಬರ ಹಂಚಿಕೆಯನ್ನು ತಿಂಗಳ ಮೊದಲ ವಾರದಲ್ಲಿ ಪೂರೈಕೆ ಮಾಡಲು ಈಗಾಗಲೇ ಕೃಷಿ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಇದರಿಂದ ಈ ವರ್ಷ ಡಿಎಪಿ ಗೊಬ್ಬರಕ್ಕೆ ಯಾವುದೇ ಕೊರತೆ ಎದುರಾಗುವುದಿಲ್ಲ ಎಂದರು.

ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಡಿಎಪಿ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷದ ಅಂಕಿ ಅಂಶಗಳನ್ನು ಪರಿಶೀಲಿಸಿದಾಗ 2018ರಲ್ಲಿ 14,653, 2019ರಲ್ಲಿ 16,291, 2020ರಲ್ಲಿ 20,312 ಮೆಟ್ರಿಕ್‌ ಟನ್‌ ಡಿಎಪಿ ಗೊಬ್ಬರ ಜಿಲ್ಲೆಗೆ ಪೂರೈಕೆಯಾಗಿದೆ. ಪ್ರಸಕ್ತ ಮುಂಗಾರು ಸಾಲಿನಲ್ಲಿ 26,635 ಮೆಟ್ರಿಕ್‌ ಟನ್‌ ಹಂಚಿಕೆಯಾಗಿದೆ. ಈ ವರ್ಷ 6,323 ಮೆಟ್ರಿಕ್‌ ಟನ್‌ ಡಿಎಪಿ ಗೊಬ್ಬರ ಜಿಲ್ಲೆಗೆ ಹೆಚ್ಚುವರಿಯಾಗಿ ಹಂಚಿಕೆಯಾಗಿದೆ. ಮೇ ಕೊನೆಯವರೆಗೆ 10,450 ಮೆಟ್ರಿಕ್‌ ಟನ್‌ ಡಿಎಪಿ ಜಿಲ್ಲೆಗೆ ಪೂರೈಕೆಯಾಗಿದ್ದು, 5,960 ಮೆಟ್ರಿಕ್‌ ಟನ್‌ ಹಳೇ ದಾಸ್ತಾನು ಸೇರಿದಂತೆ ಮೇ ತಿಂಗಳಲ್ಲಿ 9,200 ಮೆಟ್ರಿಕ್‌ ಟನ್‌ ಸೇರಿದಂತೆ 15,161 ಮೆಟ್ರಿಕ್‌ ಡಿಎಪಿ ಗೊಬ್ಬರ ಬಳಕೆಗೆ ಲಭ್ಯವಿದೆ. ಈಗಾಗಲೇ 5745 ಮೆಟ್ರಿಕ್‌ ಟನ್‌ ಗೊಬ್ಬರ ವಿತರಣೆಗೆ ಕ್ರಮ ವಹಿಸಲಾಗಿದೆ.

ಪ್ರಸ್ತುತ 9416 ಮೆಟ್ರಿಕ್‌ ಟನ್‌ ಗೊಬ್ಬರ ದಾಸ್ತಾನು ಇದೆ. ಕರ್ನಾಟಕ ರಾಜ್ಯ ಸಹಕಾರಿ ಮಾರುಕಟ್ಟೆ ಮಹಾ ಮಂಡಳ (ಕೆಎಸ್‌ಸಿಎಂಎಫ್‌)ದಲ್ಲಿ 2626 ಮೆಟ್ರಿಕ್‌ ಟನ್‌ ಗೊಬ್ಬರ ದಾಸ್ತಾನಿದೆ. ಅಂದಾಜು 14,657 ಮೆಟ್ರಿಕ್‌ ಟನ್‌ ಡಿಎಪಿ ಗೊಬ್ಬರ ಲಭ್ಯವಿದೆ. ಜೂನ್‌ ತಿಂಗಳಿಗೆ ಜಿಲ್ಲೆಗೆ ನಿಗ ದಿಯಾದ 5,242 ಮೆಟ್ರಿಕ್‌ ಟನ್‌ ಹಾಗೂ ಜುಲೈ ತಿಂಗಳಿಗೆ ನಿಗ ದಿಯಾದ ಕೋಟಾವನ್ನು ತಿಂಗಳ ಆರಂಭದಲ್ಲಿ ನೀಡಿದರೆ ನಮಗೆ ಜುಲೈವರೆಗೆ 18 ಸಾವಿರ ಮೆಟ್ರಿಕ್‌ ಟನ್‌ ಗೊಬ್ಬರ ಲಭ್ಯವಾಗಲಿದೆ ಎಂದರು.

ಹಾವೇರಿ, ರಾಣಿಬೆನ್ನೂರು-ಹಿರೇಕೆರೂರು ತಾಲೂಕುಗಳಲ್ಲಿ ಹೆಚ್ಚು ಸಹಕಾರಿ ಸಂಘಗಳಿರುವ ಕಾರಣ ಈ ಸಂಘಗಳ ಮೂಲಕವೇ ಗೊಬ್ಬರ ಹೆಚ್ಚು ಪ್ರಮಾಣದಲ್ಲಿ ವಿತರಿಸಲಾಗುತ್ತದೆ. ಬ್ಯಾಡಗಿ, ಹಾನಗಲ್ಲ, ಶಿಗ್ಗಾವಿ, ಸವಣೂರು ತಾಲೂಕುಗಳಲ್ಲಿ ಸಹಕಾರ ಸಂಘಗಳು ಕಡಿಮೆ ಸಂಖ್ಯೆಯಲ್ಲಿವೆ. ಕೆಲ ಸಂಘಗಳ ನೋಂದಣಿ ನವೀಕರಣಗೊಂಡಿಲ್ಲ. ಕೆಲ ಸಂಘಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಸಹಕಾರಿ ಸಂಘಗಳನ್ನು ಬಲಪಡಿಸಲು ಸಾಲದ ನೆರವು ದೊರಕಿಸಿ ಕೊಡುವುದು, ನೋಂದಣಿ ಸೇರಿದಂತೆ ಹಳೆ ಸಹಕಾರಿ ಸಂಘಗಳನ್ನು ಕ್ರಿಯಾಶೀಲಗೊಳಿಸಲು, ಹೊಸ ಸಂಘಗಳನ್ನು ಆರಂಭಿಸಲು ವಿಶೇಷ ಅಭಿಯಾನ ಮಾದರಿಯಲ್ಲಿ ಕ್ರಮ ವಹಿಸುವಂತೆ ಸಹಕಾರಿ ಸಂಘಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕೃಷಿ ಸಚಿವ ಬಿ.ಸಿ.ಪಾಟೀಲ, ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷ, ಶಾಸಕ ನೆಹರು ಓಲೇಕಾರ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌ ಇದ್ದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.