ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಆಗ್ರಹ
Team Udayavani, Dec 12, 2021, 3:31 PM IST
ಹಾವೇರಿ: ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಕುರಿತು ಸ್ವಾಮೀಜಿಗಳ ವಿರೋಧಕ್ಕೆ ಸರ್ಕಾರ ಮಣಿಯದೇ ಎಲ್ಲ ಶಾಲೆಗಳಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸಬೇಕೆಂದು ಒತ್ತಾಯಿಸಿ ಭಾರತವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜೆ.ಎಚ್.ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿಮಾತಾನಾಡಿ, ರಾಜ್ಯದಲ್ಲಿ ಶಾಲಾ ಮಕ್ಕಳ ಅಪೌಷ್ಟಿಕತೆನಿವಾರಣೆಗಾಗಿ ಕಲ್ಯಾಣ ಕರ್ನಾಟಕದ ಕೊಪ್ಪಳ,ಬೀದರ್, ಯಾದಗಿರಿ, ಕಲಬುರಗಿ, ಬೀದರ್,ಬಳ್ಳಾರಿ, ರಾಯಚೂರು ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ 1 ರಿಂದ 8ನೇ ತರಗತಿವರೆಗಿನ ಸರ್ಕಾರಿ ಶಾಲಾ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆಗೆ ರಾಜ್ಯ ಸರ್ಕಾರದ ಆದೇಶ ಸ್ವಾಗತಾರ್ಹವಾಗಿದೆ ಎಂದರು.
ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವುಸ್ವಾಮೀಜಿಗಳು ಜಾತಿ ಮತ್ತು ಧಾರ್ಮಿಕತೆ,ನಂಬಿಕೆಯ ಹೆಸರಿನಲ್ಲಿ ಸರ್ಕಾರ ತನ್ನ ಆದೇಶವಾಪಸ್ ಪಡೆಯಬೇಕೆಂದು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿರುವುದು ಸರಿಯಲ್ಲ. ಇದನ್ನೇತಿನ್ನಬೇಕು, ಇದನ್ನೇ ತಿನ್ನಬಾರದೆಂದು ಆಹಾರ ಹಕ್ಕಿನ ಮೇಲೆ ಸ್ವಾಮೀಜಿಗಳು ಒತ್ತಾಯ ಮಾಡುವುದು ಸರಿಯಲ್ಲ ಎಂದರು.
ರಾಜ್ಯದ ಅತೀ ಹಿಂದುಳಿದ ಪ್ರದೇಶವಾದ ಹೈದರಾಬಾದ್ ಕರ್ನಾಟಕದ ಈಗಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣಹೆಚ್ಚಿದೆ. ಈ ಸಮಸ್ಯೆ ನಿವಾರಣೆಗೆ ಸ್ವಾಮೀಜಿಗಳುಶ್ರಮ ವಹಿಸಲಿ. ಅದನ್ನು ಬಿಟ್ಟು ಜಾತಿ, ಧರ್ಮದಹೆಸರಿನಲ್ಲಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವುದು ಖಂಡನೀಯ ಎಂದರು.
ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ನಂತರ ಇದೇ ತಿಂಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಶೇ.10 ರಿಂದ 12ರಷ್ಟು ಏರಿಕೆ ಕಂಡುಬಂದಿದೆ.ಶೇ.80ರಷ್ಟು ಮಕ್ಕಳು ಮೊಟ್ಟೆ ಬೇಕೆಂದು ಬೇಡಿಕೆಇಟ್ಟಿದ್ದಾರೆ. ಸುಮಾರು 14,44,000 ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ಸಹಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಶಾಲೆಗಳಿಗೂ ಅಪೌಷ್ಟಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೆಹಣ್ಣನ್ನು ವಿತರಣೆಗೆ ಮುಂದಾಗಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅಭಿಷೇಕಗೌಡ, ಬೀರೇಶ ನೆಟಗಲ್ಲಣ್ಣನವರ, ಗಗನದೀಪ ವಡ್ಡರ, ಅಭಿಷೇಕದಿವಾಕರ, ಕಾಂತೇಶ ತೆವರಿ, ಭರತ ಎಚ್.ಕೆ., ಮಹೇಶಆರ್., ಮಲ್ಲೇಶ ಕೆ., ರಮೇಶ ಡಿ.ಆರ್., ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.