ಡೆಂಘೀ-ಮಲೇರಿಯಾ ನಿಯಂತ್ರಣ ಜಾಗೃತಿ ಜಾಥಾ
Team Udayavani, Jul 16, 2019, 3:10 PM IST
ಹಿರೇಕೆರೂರ: ಕುಡುಪಲಿ ಗ್ರಾಮದಲ್ಲಿ ಮಲೇರಿಯಾ ನಿಯಂತ್ರಣ ಕುರಿತು ಜಾಥಾ ನಡೆಸಲಾಯಿತು.
ಹಿರೇಕೆರೂರ: ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಇಲ್ಲಿನ ಎಸ್ವಿಎಂ ಪ್ರೌಢ ಶಾಲಾ ಮಕ್ಕಳ ಸಂಯೋಗದೊಂದಿಗೆ ರಾಷ್ಟ್ರೀಯ ಡೆಂಘೀ ವಿರೋಧಿ ಮಾಸಾಚರಣೆ ನಿಮಿತ್ತ ಗ್ರಾಮದ ಪ್ರಮುಖ ಬೀದಿಯಲ್ಲಿ ರಾಷ್ಟ್ರೀಯ ಮಲೇರಿಯಾ ನಿಯಂತ್ರಣ ಕುರಿತು ಜಾಥಾ ನಡೆಸಲಾಯಿತು.
ಈ ವೇಳೆ ಮಾತನಾಡಿದ ಡಾ| ಮಂಗಳಗೌರಿ, ಸೊಳ್ಳೆಗಳು ಆರೋಗ್ಯವಂತ ಮನುಷ್ಯನನ್ನು ಕಚ್ಚಿದಾಗ ರೋಗಾಣುಗಳು ದೇಹ ಪ್ರವೇಶಿಸುತ್ತವೆ. ಬಳಿಕ ಕೆಲವು ದಿನದ ಬಳಿಕ ಇದರ ಪ್ರಭಾವ ಹೆಚ್ಚಾಗುತ್ತದೆ. ಚಳಿ, ತೆಲೆನೋವು, ತೀವ್ರವಾದ ಜ್ವರ, ವಿಪರೀತ ಬೆವರು, ದಿನಬಿಟ್ಟು ದಿನ ಕಾಣಿಸಿಕೊಳ್ಳುವುದು ಮಲೇರಿಯಾ ಲಕ್ಷಣಗಳು. ರೋಗ ಬಂದ ಬಳಿಕ ಎಚ್ಚೆತ್ತುಕೊಳ್ಳುವ ಬದಲು ರೋಗ ಬರುವ ಮೊದಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಶಿಕ್ಷಕ ಆರ್.ಎಂ.ದೇವರಮನಿ ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ. ಆರೋಗ್ಯ ಇಲಾಖೆ ಸಲಹೆ ಸೂಚನೆಗಳನ್ನು ಪಾಲಿಸಿದರೆ ರೋಗದಿಂದ ದೂರವಿರುವುದಕ್ಕೆ ಸಾಧ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಪ್ರಭು ಕೆಂಚಳ್ಳೇರ, ಸಂತೋಷ, ಶಿಲ್ಪಾ ಎಂ., ಡಿ.ಚಂದ್ರಶೇಖರ, ಆರ್.ಎಸ್.ಪಾಟೀಲ, ಎಂ.ಶಕುಂತಲಾ, ಸುಮಾ, ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.