ಮಾದಕ ವ್ಯಸನದಿಂದ ವ್ಯಕ್ತಿತ್ವ ನಾಶ
Team Udayavani, Jun 29, 2020, 3:12 PM IST
ಬಂಕಾಪುರ: ಆರೋಗ್ಯವಂತ ಸಮಾಜ ನಿರ್ಮಾಣದ ಹೊಣೆ ಪ್ರತಿಯೊಬ್ಬರದಾಗಿದ್ದು, ದುಷcಟಗಳಿಂದ ದೂರಾಗುವ ಮೂಲಕ ಉತ್ತಮ ಹವ್ಯಾಸ, ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಪೊಲೀಸ್ ಇಲಾಖೆ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಜಾಥಾಕ್ಕೆ ಜಾಲನೆ ನೀಡಿ ಮಾತನಾಡಿದ ಅವರು, ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ವ್ಯಕ್ತಿತ್ವ ಹಾಳಾಗುವುದರ ಜೋತೆಗೆ ಇಡೀ ಕುಟುಂಬ ಬೀದಿಗೆ ಬರುತ್ತದೆ. ಚಟಕ್ಕೆ ಬಲಿಯಾದ ವ್ಯಕ್ತಿ ಆಸ್ತಿ, ಅಂತಸ್ತುಗಳನ್ನು ಕಳೆದುಕೊಂಡು ಸಮಾಜದಲ್ಲಿ ಗೌರವ ಕಳೆದುಕೊಂಡು ಹೀನಾಯವಾಗಿ ಬದುಕುಬೇಕಾಗುತ್ತದೆ. ಆದ್ದರಿಂದ ಮನುಷ್ಯ ದುಶ್ಚಟಗಳ ದಾಸರಾಗದೇ ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಗೌರವದಿಂದ ಬದುಕು ಸಾಗಿಸುವಂತೆ ಜನತೆಗೆ ಕರೆ ನೀಡಿದರು.
ಪಟ್ಟಣದ ಪೊಲೀಸ್ ಠಾಣೆ ಎಎಸ್‌ಐ ಶಿವಾನಂದ ವನಹಳ್ಳಿ ಮಾತನಾಡಿದರು. ಪುರಸಭೆ ಸಿಂಬಂದಿ ಬಿ.ಎಸ್.ಗಿಡ್ಡಣ್ಣವರ, ಮಲ್ಲಮ್ಮ ಹರವಿ, ನಿಂಗಪ್ಪ ಹೊಸಮನಿ, ಎಸ್.ಎನ್.ಸುಣಗಾರ, ವೀರಣ್ಣ ಬಾರಕೇರ, ರೂಪಾ ನಾಯಕ, ಬಸವರಾಜ ಕಟ್ಟಿಮನಿ, ಮಂಜುನಾಥ ಲಮಾಣಿ ಪುಟ್ಟಣವರ ಸೇರಿದಂತೆ ಪುರಸಭೆ, ಠಾಣೆ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.