![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Aug 30, 2023, 11:48 AM IST
ಹಾವೇರಿ: ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಆಗಿರುವುದು ದುರದೃಷ್ಟಕರ ಈ ಘಟನೆ ಆಗಬಾರದಾಗಿತ್ತು. ನಾಲ್ಕು ಜನರು ಮೃತಪಟ್ಟಿದ್ದು, ಇಬ್ಬರು ಗಾಯಾಳುಗಳನ್ನ ಬೆಂಗಳೂರಿಗೆ ಶಿಪ್ಟ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ಹೊರವಲಯದ ಆಲದಕಟ್ಟಿ ಗ್ರಾಮದ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆ ವೆಚ್ಚ ಸರಕಾರ ಭರಿಸಲಿದೆ. ಮೃತರ ಕುಟುಂಬ ಗಳಿಗೆ ಈಗಾಗಲೇ ಮುಖ್ಯಮಂತ್ರಿಗಳು ಪರಿಹಾರ ಘೋಷಣೆ ಮಾಡಿದ್ದಾರೆ. ಗೋದಾಮಿನಲ್ಲಿ 500 ರಿಂದ1000 ಕೆಜಿ ಸಂಗ್ರಹ ಮಾಡಲು ಅವಕಾಶವಿತ್ತು.ಇವರು ಹೆಚ್ಚಿನ ದಾಸ್ತಾನು ಮಾಡಿದ್ದರು. ಈ ಬಗ್ಗೆ ಸೂಕ್ತ ತನಿಖೆ ಮಾಡಿಸುತ್ತೇವೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ತರುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆ ಆಗದಬಾರದು ಅಂತಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಹೆಚ್ಚಿಗೆ ಸಂಗ್ರಹ ಮಾಡಿದ್ದು ಮೇಲ್ನೋಟಕ್ಕೆ ಸಾಭಿತಾಗುತ್ತದೆ. ಇಲ್ಲಿ ಸರಿಯಾದ ಸುರಕ್ಷತಾ ಕ್ರಮಗಳು ಇರಲಿಲ್ಲ.ಲೈಸೆನ್ಸ್ ರಿನೀವಲ್ ಗೆ ಅರ್ಜಿ ಕೊಟ್ಟಿದ್ದಾರೆ. ಜನವಸತಿ ಪ್ರದೇಶದಲ್ಲಿ ಪರ್ಮಿಷನ ಎಂದು ಹೇಳಿದರು.
ನಾಲ್ವರ ಮೇಲೆ ಕೇಸ್ ದಾಖಲು..
ಹಾವೇರಿಯ ಆಲದಕಟ್ಟಿಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ನಾಲ್ವರ ಮೇಲೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟಾಕಿ ಅಂಗಡಿ ಮಾಲೀಕ ಹಾಗೂ ಕಟ್ಟಡದ ಮಾಲೀಕನ ಮೇಲೆ ಪ್ರಕರಣ ದಾಖಲಾಗಿದ್ದು, ಕೆ ಬಿ ಜಯಣ್ಣ, ಸಿಜಿ ವಿರೇಶ, ವಿಜಯ ಯರೇಸೀಮಿ, ಕುಮಾರಪ್ಪ ಸಾತೇನಹಳ್ಳಿ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ. ವೆಲ್ಡಿಂಗ್ ಮಾಡುವಾಗ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ.
ಕಾರ್ಮಿಕರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಗ್ನಿ ಅವಘಡದಲ್ಲಿ ದ್ಯಾಮಪ್ಪ, ರಮೇಶ, ಶಿವಲಿಂಗಪ್ಪ , ಕೆಬಿ ಜಯಣ್ಣ ಸಜೀವ ದಹನಗೊಂಡಿದ್ದು, ವಾಸೀಂ ಹಾಗೂ ಶೇರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Raksha Bandhan: ರಕ್ಷಾ ಬಂಧನದ ಮೂಲ ಇತಿಹಾಸವೇನು…ಪೌರಾಣಿಕ ಹಿನ್ನಲೆ ಇಲ್ಲಿದೆ..
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.