ಪ್ರವಾಸಿ ತಾಣವಾಗಿ ದೊಡ್ಡಕೆರೆ ಅಭಿವೃದ್ಧಿ: ಕೋಳಿವಾಡ
Team Udayavani, Oct 23, 2019, 9:56 AM IST
ರಾಣಿಬೆನ್ನೂರ: ಜನರ ಜೀವನಾಡಿಯಾಗಿರುವ ಸುಮಾರು 6 ಸಾವಿರ ಎಕರೆ ವಿಸ್ತಾರವುಳ್ಳ ನಗರದ ದೊಡ್ಡಕೆರೆಯನ್ನು ಹೂಳೆತ್ತುವುದರ ಜತೆಗೆ ಸುಂದರ ಪ್ರವಾಸಿ ತಾಣವನ್ನಾಗಿ ಮಾಡಲು ಈಗಾಗಲೇ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದರು.
ಮಂಗಳವಾರ ನಗರದ ದೊಡ್ಡಕೆರೆ ತುಂಬಿ ಕೋಡಿ ಬಿದ್ದು ನೀರು ಹರಿದ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ದೊಡ್ಡಕೆರೆಯನ್ನು ಸಂಪೂರ್ಣವಾಗಿ ಸೌಂದಯೀಕರಣದೊಂದಿಗೆ ಪ್ರೇಕ್ಷಣೀಯ ಹಾಗೂ ವಾಯುವಿಹಾರ ಸ್ಥಳವನ್ನಾಗಿಸಲು 29.30 ಕೋಟಿ ರೂ. ಹಾಗೂ ಈ ಕೆರೆ ಸೇರಿದಂತೆ ಚಳಗೇರಿ, ಹುಣಸಿಕಟ್ಟಿ ಮತ್ತಿತರ ತಾಲೂಕಿನ ಕೆರೆಗಳಿಗೆ ತುಂಗಭದ್ರ ನದಿಯಿಂದ ನೀರು ತುಂಬಿಸಲು ಅಂದಾಜು 100 ಕೋಟಿ ರೂ. ಮಂಜೂರು ಮಾಡಲು ಶ್ರಮಿಸಿದ್ದೇನೆ ಎಂದರು.
ಪ್ರಸ್ತುತ ಮಳೆ ನೀರಿನಿಂದ ಕೆರೆಯ ಒಡಲು ತುಂಬಿ ಕೋಡಿ ಬಿದ್ದು ಹರಿಯುತ್ತಿರುವುದು ಸಂತಸ ತಂದಿದೆ. ಇದರಿಂದ ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿ ಮತ್ತು ನಾಗರಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಇದನ್ನು ಸರ್ವರೂ ಸಂರಕ್ಷಿಸಲು ಮುಂದಾಗಬೇಕು. ಕೆರೆಯ ದಂಡೆಯ ಮೇಲೆ ಮರ ಗಿಡಗಳನ್ನು ಬೆಳೆಸಲು ಎಲ್ಲರೂ ಶ್ರಮಿಸಬೇಕಿದೆ ಎಂದರು.
ನಗರಸಭೆ ಸದಸ್ಯರಾದ ಶಶಿಧರ ಬಸೇನಾಯ್ಕ, ಜಯಶ್ರೀ ಪಿಸೆ, ತಾಪಂ ಸದಸ್ಯೆ ಚೈತ್ರಾ ಮಾಗನೂರು, ಬಸವರಾಜ ಹುಚ್ಚಗೊಂಡರ. ಶೇರುಖಾನ್ ಖಾಬೂಲಿ, ಪ್ರಕಾಶ ಜೈನ, ಸಣ್ಣತಮ್ಮಪ್ಪ ಬಾರ್ಕಿ, ಮಂಜುನಾಥ ಗುಂಟೂರು, ಮಧು ಕೋಳಿವಾಡ, ಪುಟ್ಟಪ್ಪ ಮರಿಯಮ್ಮನವರ, ರಾಜಣ್ಣ ಮೋಟಗಿ ಸೇರಿದಂತೆ ಮತ್ತಿತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.