19ರಂದು ಇ-ಲೋಕ ಅದಾಲತ್
Team Udayavani, Aug 30, 2020, 3:35 PM IST
ಹಾವೇರಿ: ಕೋವಿಡ್ ದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇಡೀ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಇ-ಲೋಕ ಅದಾಲತ್ ಅನ್ನು ಸೆ.19ರಂದು ರಾಜ್ಯದಲ್ಲಿ ಏರ್ಪಡಿಸಲಾಗಿದ್ದು, ಬಾಕಿ ಇರುವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ| ಅರವಿಂದಕುಮಾರ್ ಹೇಳಿದರು.
ಬೆಂಗಳೂರು ಹೈಕೋರ್ಟ್ ಮೂಲಕ ಸಂಚಾರಿ ಹೈಕೋರ್ಟ್ ಪೀಠಗಳ ನ್ಯಾಯಾಧೀಶರು, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಮಾಧ್ಯಮದವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಸರ್ವರಿಗೂ ನ್ಯಾಯ ಮತ್ತು ಸಮಾನ ಅವಕಾಶ ಕಲ್ಪಿಸುವುದು ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕೊರೊನಾ ಇರುವಿಕೆಯ ಈ ಸಂದರ್ಭದಲ್ಲಿ ಬೃಹತ್ (ಮೆಘಾ) ಇ-ಲೋಕ ಅದಾಲತ್ ಆಯೋಜಿಸಲಾಗಿದೆ. ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿ ಸಿದಂತೆ ವಕೀಲರ ಮೂಲಕ ಅಥವಾ ನೇರವಾಗಿ ಸಾರ್ವಜನಿಕರೇರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಹೇಗೆ ಸಂಪರ್ಕಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಲಿಂಕ್‌ಗಳು, ಇ-ಮೇಲ್ ವಿವರ ಹಾಗೂ ಸಂಬಂಧಿಸಿದ ದೂರವಾಣಿ ಸಂಖ್ಯೆ ತಿಳಿಸಲಾಗುತ್ತದೆ ಎಂದರು.
ಇ-ಲೋಕ ಅದಾಲತ್ ಯಶಸ್ವಿಯಾಗಿ ಆಯೋಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ 4 ಬಾರಿ ಸಭೆ ನಡೆಸಲಾಗಿದೆ ಎಂದು ವಿವರಿಸಿದ ನ್ಯಾ| ಅರವಿಂದಕುಮಾರ್ ಅವರು, ಯಾವುದೇ ಕಾರಣಕ್ಕೂ ಕಕ್ಷಿದಾರರು ನ್ಯಾಯಾಲಯಕ್ಕೆ ಬರುವುದಿಲ್ಲ ಎಂದರು. ವಿಮಾ ಕಂಪನಿಗಳ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಕಾರ್ಮಿಕ ವಿವಾದ, ಬ್ಯಾಂಕ್ ವಿಷಯಗಳು, ಚೆಕ್ ಬೌನ್ಸ್, ಹಣ ವಸೂಲಾತಿ ಪ್ರಕರಣಗಳು, ಕ್ರಿಮಿನಲ್ ಕಂಪೌಂಡೇಬಲ್ ಅಪರಾಧಗಳು, ಎಂಎಸಿಟಿ ಪ್ರಕರಣಗಳು, ಭೂಸ್ವಾಧೀನ, ವಿದ್ಯುತ್, ಎಂಎಂಡಿಆರ್ ಕಾಯ್ದೆ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಬಾಕಿಇರುವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಸದವಕಾಶ ಒದಗಿ ಬಂದಿದ್ದು, ಇದನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಹೈಕೋರ್ಟ್ ನ್ಯಾ| ಅಲೋಕಕುಮಾರ್ ಮಾತನಾಡಿ, ಕೋವಿಡ್ ಮಹಾಮಾರಿಯ ಈ ಸಂದರ್ಭದಲ್ಲಿ ಇ-ಲೋಕ ಅದಾಲತ್ ಅತ್ಯಂತ ಪರಿಣಾಮಕಾರಿಯಾಗಿದೆ. ವಿವಿಧ ವಿಷಯಗಳಲ್ಲಿ ಸಾವಿರಾರು ವ್ಯಾಜ್ಯ ಗಳಿವೆ. ಅವುಗಳನ್ನು ಇ-ಅದಾಲತ್‌ನಲ್ಲಿ ಪರಿಹರಿಸಬಹುದು. ಬಾಕಿ ಇರುವ ಪ್ರಕರಣ ಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವವರು ಸೆ.18ರ ವರೆಗೂ ತಮ್ಮ ಮಾಹಿತಿ ಸಲ್ಲಿಸಬಹುದಾಗಿದೆ ಎಂದರು. ಹಾವೇರಿ ನ್ಯಾಯಾಲಯ ಸಭಾಂಗಣದಲ್ಲಿ
ವಿಡಿಯೋ ಸಂವಾದಲ್ಲಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧಿಶರಾದ ಎಚ್.ಎಸ್.ರೇಣುಕಾದೇವಿ ಅವರು ಜಿಲ್ಲೆಯ ಪ್ರಕರಣಗಳ ಮಾಹಿತಿ ನೀಡಿದರು. ಜು. 31ಕ್ಕೆ 24,783 ಪ್ರಕರಣಗಳು ಬಾಕಿ ಉಳಿದಿದ್ದು, ಈ ಪೈಕಿ 2078 ಪ್ರಕರಣಗಳನ್ನು ಗುರುತಿಸಲಾಗಿದೆ. ವಿಮಾ ಕಂಪನಿಗಳ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಕಾರ್ಮಿಕ ವಿವಾದ, ಬ್ಯಾಂಕ್ ವಿಷಯಗಳು,ಚೆಕ್ ಬೌನ್ಸ್, ಹಣ ವಸೂಲಾತಿ ಪ್ರಕರಣಗಳು, ಕ್ರಿಮಿನಲ್ ಕಂಪೌಂಡೇಬಲ್ ಅಪರಾಧಗಳು, ಎಂಎಸಿಟಿ ಪ್ರಕರಣಗಳು, ಭೂಸ್ವಾಧೀನ, ವಿದ್ಯುತ್, ಎಂಎಂಡಿಆರ್ ಕಾಯ್ದೆ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಬಾಕಿ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದೆಂದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ವಿ.ಆರ್.ಗುಡಿ, ಒಂದನೇ ಹೆಚ್ಚುವರಿ ಮತ್ತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಈ. ರಾಜೀವಗೌಡ, ಕೌಟುಂಬಿಕ ನ್ಯಾಯಾಲಯದ ನ್ಯಾಯಾàಶರಾದ ಕಿರಣ ಕಿಣಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾ ಧೀಶರು ಹಾಗೂ ಸಿಜೆಎಂ ಎ.ವಿ.ಪಾಟೀಲ, ಪ್ರಧಾನ ದಿವಾಣಿ ನ್ಯಾಯಾಧಿಧೀಶರು ಹಾಗೂ ಜೆಎಂಎಫ್‌ಸಿ ಲಕ್ಷ್ಮೀ ಎನ್.ಗರಗ, ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ನಾಸಿರಾ ಬಾನು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.