ಪ್ರೊ| ಸಂಕನೂರಗೆ ಮತ ನೀಡಿ ಗೆಲ್ಲಿಸಿ
Team Udayavani, Oct 24, 2020, 1:42 PM IST
ಹಾನಗಲ್ಲ: ಪದವೀಧರರಿಗೆ ನೌಕರಿ ಸಿಗಲಿ ಎನ್ನುವ ವಿಶಿಷ್ಟ ಹೋರಾಟಗಳ ಮೂಲಕ ಪದವೀಧರರ ಹಾಗೂ ನೌಕರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿರುವ ಪ್ರೊ| ಎಸ್.ವಿ.ಸಂಕನೂರ ಅವರಿಗೆ ಪ್ರಥಮ ಪ್ರಾಶಸ್ತÂದ ಮತ ನೀಡಿ ವಿಧಾನ ಪರಿಷತ್ತಿಗೆ ಮರು ಆಯ್ಕೆ ಮಾಡುವಂತೆ ಸಂಸದ ಶಿವಕುಮಾರ ಉದಾಸಿ ಮನವಿ ಮಾಡಿದರು.
ಪಟ್ಟಣದ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶುಕ್ರವಾರ ಭೇಟಿ ನೀಡಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು. ವಿದ್ಯಾಲಯದ ಬಿ.ಇಡಿವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಜೊತೆ ಮಾತನಾಡಿದ ಅವರು, ಸಂಕನೂರ ಸಜ್ಜನಿಕೆಯ ರಾಜಕಾರಣಿ. ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಸೇವೆ ಮಾಡಿದ್ದಾರೆ. ದೇಶದಲ್ಲಿ ಕಸ್ತೂರಿ ರಂಗನ್ ನೇತೃತ್ವದಲ್ಲಿ 3 ನೇ ಬಾರಿಗೆ ಶಿಕ್ಷಣ ನೀತಿ ಬದಲಾವಣೆಯಾಗಿದೆ. ಕೇಂದ್ರದ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರದ ಹಿಂದಿನ ಸವಾಲುಗಳನ್ನು ಸರಿದೂಗಿಸುವ ಬದ್ಧತೆ ಇದೆ. ಸಂಕನೂರ ಪರ ಮತ ನೀಡಿ ಬಿಜೆಪಿ ಆಡಳಿತಕ್ಕೆ ಬಲ ತುಂಬುವ ಮೂಲಕ ಅಮೂಲಾಗ್ರ ಬದಲಾವಣೆ ತರಲು ತಮ್ಮ ಮತವನ್ನು ಬಿಜೆಪಿ ಅಭ್ಯರ್ಥಿಗೆ ನೀಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧರಾಜ ಕಲಕೋಟಿ, ತಾಲೂಕು ಘಟಕದ ಅಧ್ಯಕ್ಷ ರಾಜು ಗೌಳಿ, ಮುಖಂಡರಾದ ಜಯತೀರ್ಥ ಕಟ್ಟಿ, ಬಿ.ಎಸ್. ಅಕ್ಕಿವಳ್ಳಿ, ಕಲ್ಯಾಣಕುಮಾರ ಶೆಟ್ಟರ, ಶಿವಲಿಂಗಪ್ಪ ತಲ್ಲೂರ, ರಾಜಣ್ಣ ಪಟ್ಟಣದ, ಭೋಜರಾಜ ಕರೂದಿ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.