ಜು.18ರ ಬಳಿಕ ವಿಪಕ್ಷ ನಾಯಕನ ಆಯ್ಕೆ: ಬಸವರಾಜ ಬೊಮ್ಮಾಯಿ
ಸೇಡಿನ ರಾಜಕಾರಣ ಬಹಳ ದಿನ ನಡೆಯಲ್ಲ
Team Udayavani, Jul 17, 2023, 7:25 AM IST
ಹಾವೇರಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಜು.18ರ ಬಳಿಕ ತೀರ್ಮಾನ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ಚರ್ಚೆ ನಡೆದಿದೆ. ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರಗಳನ್ನು ಎತ್ತಿದ್ದೇವೆ. ಸಿಎಂ ಕಚೇರಿಯಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ನಾನು ಯಾವುದಕ್ಕೂ ಹಣ ತೆಗೆದುಕೊಂಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಸಿಎಂ ಸ್ವಂತಕ್ಕೆ ಹಣ ತೆಗೆದುಕೊಂಡಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ. ಅವರ ಸರ್ಕಾರದ ಮಂತ್ರಿ ಮಂಡಲದ ಸದಸ್ಯರು, ಚೇಲಾಗಳು ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದರು.
ಅಧಿಕಾರಗಳ ವಲಯದಲ್ಲಿ ಈ ಬಗ್ಗೆ ಬಹಳ ದೊಡ್ಡ ಚರ್ಚೆ ಆಗುತ್ತಿದೆ. ಅದನ್ನು ಮುಚ್ಚಿ ಹಾಕುವ ಸಲುವಾಗಿ ನಾನು ತಗೊಂಡಿಲ್ಲ, ತಗೊಂಡಿದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅದರ ಅರ್ಥ ಸರ್ಕಾರದಲ್ಲಿ ಬೇರೆಯವರು ತೆಗೆದುಕೊಂಡರೆ ಮುಖ್ಯಮಂತ್ರಿಗಳ ಜವಾಬ್ದಾರಿ ಮುಗಿಯಿತಾ? ಸಿಎಂ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.