ಗ್ರಾಮಸ್ಥರಿಗೆ ಯೋಜನೆ ಮಾಹಿತಿ ನೀಡಿ: ಬಳ್ಳಾರಿ
Team Udayavani, Dec 22, 2018, 3:45 PM IST
ಹಾವೇರಿ: ತಾಲೂಕಿನ ಕುಳೆನೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗಚೀಟಿ ವಿತರಣೆ ಹಾಗೂ ರೋಜಗಾರ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಯೋಜನೆ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು. ಮಕ್ಕಳ ಮೂಲಕ ಸ್ವಚ್ಛತೆಯ ಅರಿವು ಮನೆ ಮನೆಗೂ ಪ್ರಸಾರವಾಗಬೇಕು ಎಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ಎನ್. ಹುಬ್ಬಳ್ಳಿ ಮಾತನಾಡಿ, ಮುಖ್ಯಮಂತ್ರಿಗಳ 21ಅಂಶಗಳ ಕ್ರಿಯಾ ಯೋಜನೆ ತಯಾರಿಸಲಾಗುವುದು. ಈ ಕಾರ್ಯಕ್ರಮದಡಿ ಗ್ರಾಮ ಪಂಚಾಯಿತಿವಾರು ಹಂಚಿಕೆ ಮಾಡಲಾಗಿದೆ. ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಒಳಗೊಂಡಂತೆ ವೈಯಕ್ತಿಕ ಭೂ ಅಭಿವೃದ್ಧಿ, ಕುರಿ-ದನದೊಡ್ಡಿ, ಸಮಗ್ರವಾಗಿ ಸ್ಮಶಾನ ಅಭಿವೃದ್ಧಿ, ಕೊಳವೆ ಬಾವಿಗಳ ಮರುಪೂರಣ ಘಟಕ, ನಮ್ಮ ಹಳ್ಳಿ ನಮ್ಮ ನೀರು, ನಮ್ಮೂರ ಕೆರೆ, ನಮ್ಮ ಹೊಲ ನಮ್ಮ ದಾರಿ, ಕೃಷಿ ಹೊಂಡ, ಬಹುಕಮಾನು ತಡೆಗೋಡೆ, ಎರೆಹೂಳು ಗೊಬ್ಬರ ತೊಟ್ಟಿ, ಜೈವಾನೀಲ ಸ್ಥಾವರ ನಿರ್ಮಾಣಕ್ಕಾಗಿ ಗುಂಡಿ ಅಗಿಯುವುದು, ರೈತರ ಕಣ, ಅಂಗನವಾಡಿ ಕೇಂದ್ರ, ಗ್ರಾಮೀಣ ಗೋದಾಮು, ರಾಜೀವ ಗಾಂಧಿ ಸೇವಾ ಕೇಂದ್ರ, ಸರ್ಕಾರಿ ಶಾಲೆಗಳಿಗೆ, ಆಟದ ಮೈದಾನ, ಶಾಲಾ ಆವರಣಗೋಡೆ ನಿರ್ಮಾಣ ಮಾಡುವ ಕಾಮಗಾರಿ ಹಮ್ಮಿಕೊಳ್ಳಬಹುದು ಎಂದರು.
ಅತ್ಯವಶ್ಯವಿರುವ ಶಾಲೆಗಳಿಗೆ ಶೌಚಾಲಯ ನಿರ್ಮಾಣ, ಹಾಗೂ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಸಮಗ್ರವಾಗಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು, ಕಾಮಗಾರಿಗಳನ್ನು ಆಯ್ಕೆಮಾಡಿ, ಕ್ರಿಯಾ ಯೋಜನೆ ತಯಾರಿಸುವುದಾಗಿದೆ ಮತ್ತು ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳ ಕೈಗೊಳ್ಳುವ ಬಗ್ಗೆ, ಕೃಷಿ, ಅರಣ್ಯ, ತೋಟಗಾರಿಕೆ ಹಾಗೂ ಕೈಗೊಳ್ಳಬಹುದಾದ ವೈಯಕ್ತಿಕ ಕಾಮಗಾರಿಗಳ ಕುರಿತು ಅವರು ತಿಳಿಸಿದರು.
ಸರ್ಕಾರದ ಮಾಹಾತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕವಾಗಿ 50 ಸಾವಿರ ಕೋಟಿ ರೂ. ಅನುದಾನದಲ್ಲಿ ಜನರ ಜೀವನ ಉಪಯೋಗ ಕಾರ್ಯಕ್ರಮಗಳು ಹಾಗೂ ಜೀವನ ಸುಧಾರಣೆಗೆ ಮೂಲಸೌಕರ್ಯ ಕಲ್ಪಿಸಲು 294 ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ತಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ತಾಲೂಕು ಮಟ್ಟದ ಸಂಪರ್ಕ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.