ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಪಣ ತೊಡಿ: ಸ್ವಾಮೀಜಿ

ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳ ಬಗ್ಗೆ, ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಿದೆ

Team Udayavani, Aug 27, 2022, 6:14 PM IST

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಪಣ ತೊಡಿ: ಸ್ವಾಮೀಜಿ

ಹಾವೇರಿ: ಹಾವೇರಿ ನೂತನ ಜಿಲ್ಲೆಯಾಗಿ ರಚನೆಗೊಂಡು 25 ವರ್ಷಗಳ ಅವಧಿಯಲ್ಲಿ ಹಲವಾರು ರಂಗಗಳಲ್ಲಿ ಮುನ್ನಡೆ ಸಾಧಿಸಿದೆ. ಭವಿಷ್ಯದ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ವರೂ ಪಣತೊಡಬೇಕಾಗಿದೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.

ಸ್ಥಳೀಯ ಹೊಸಮಠದ ಬಸವೇಶ್ವರ ಬಿಇಡಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ “ಹಾವೇರಿ ಜಿಲ್ಲೆಗೆ ರಜತ ಸಂಭ್ರಮ-ಭವಿಷ್ಯದಲ್ಲಿ ನಮ್ಮ ಕನಸಿನ ಹಾವೇರಿ’ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನೂತನವಾಗಿ ಜಿಲ್ಲೆ ಅಸ್ತಿತ್ವಕ್ಕೆ ಬಂದಾಗ ನಿರೀಕ್ಷೆಗಳು ಬಹಳಷ್ಟಿದ್ದವು. ಅಭಿವೃದ್ಧಿ ಪ್ರಕ್ರಿಯೆ ಎಂಬುದು ಉತ್ತಮ ಬದುಕಿಗೆ ಹಾಗೂ ಜನರ ಕಾರ್ಯನಿರ್ವಹಣೆಗೆ ಇರುವ ಭೌತಿಕ ಸೌಕರ್ಯಗಳನ್ನು ಹಾಗೂ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳಲು ಹೊಸ ಕೌಶಲ್ಯಗಳನ್ನು ಪಡೆಯುವುದು ಹಾಗೂ ಅಳವಡಿಸಿಕೊಳ್ಳುವುದಕ್ಕಾಗಿ ವರಮಾನದ ಹೆಚ್ಚಳವನ್ನು ಒಳಗೊಳ್ಳುತ್ತದೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಒದಗಿಸಲಾದ ವಿವಿಧ ಮೂಲಭೂತ ಕನಿಷ್ಟ ಅವಶ್ಯಕತೆಗಳು ಹಾಗೂ ಇತರ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳುಹಾಗೂ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪದರ್ಶಿಸಬೇಕು.

ಜಿಲ್ಲೆಯ ಅಭಿವೃದ್ಧಿಯಲ್ಲಿ ಜಿಲ್ಲೆಯ ಜನತೆಯ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಹಾವೇರಿ ಜಿಲ್ಲೆಯ ಇತಿಹಾಸದ ಬಗ್ಗೆ ಮಾತನಾಡಿದ ಉಪನ್ಯಾಸಕ ಪ್ರಮೋದ ನಲವಾಗಲ, ಹಾವೇರಿ ಜಿಲ್ಲೆಗೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆಯಿದೆ. ಶಿಲಾಶಾಸನಗಳು, ಪುರಾತನ ದೇವಾಲಯಗಳು ಜಿಲ್ಲೆಯ ಹಿರಿಮೆಯನ್ನು ಸಾರಿ, ಸಾರಿ ಹೇಳುತ್ತವೆ.

ಇಂದಿನ ಯುವಜನಾಂಗ ಇತಿಹಾಸ ಅರಿತು ಮುನ್ನಡೆಯಬೇಕಿದೆ ಎಂದರು. ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ನೂತನವಾಗಿ ಅಸ್ತಿತಕ್ಕೆ ಬಂದ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆ ಅತ್ಯಂತ ಸಮರ್ಪಕ ಜಿಲ್ಲೆಯಾಗಿದೆ. ಸಾಹಿತ್ಯಿಕವಾಗಿ ಹಾವೇರಿ ಜಿಲ್ಲೆ ಶ್ರೀಮಂತವಾಗಿದೆ. ವರಕವಿ ಸರ್ವಜ್ಞ, ದಾಸಶ್ರೇಷ್ಠರಾದ ಕನಕದಾಸರು, ನಾಡಿಗೆ ಭಾವೈಕ್ಯತೆ ಸಾರಿದ ಶರೀಫರು, ಗುರುಗೋವಿಂದ ಭಟ್ಟರು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ.ಗೋಕಾಕ ಅವರಂತ ಅನೇಕ ಮಹನೀಯರನ್ನು
ನಾಡಿಗೆ ನೀಡಿದ ಹೆಮ್ಮೆ ಹಾವೇರಿ ಜಿಲ್ಲೆಗೆ ಇದೆ.

ಸರ್ಕಾರ ಅನೇಕ ಟ್ರಸ್ಟ್‌ಗಳನ್ನು, ಪ್ರಾಧಿಕಾರಗಳನ್ನು ಹಾವೇರಿ ಜಿಲ್ಲೆಯಲ್ಲಿ ರಚಿಸಿದೆ. ಹಾವೇರಿ ಜಿಲ್ಲೆ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ. ಆದರೆ ಸಾಂಸ್ಕೃತಿಕ ರಾಜಕಾರಣದ ಕೊರತೆಯಿಂದಾಗಿ ಅನೇಕ ಅವಘಡಗಳಾಗುತ್ತಿವೆ. ಜಿಲ್ಲೆಯ ಮಹನೀಯರ ಹೆಸರಿನಲ್ಲಿರುವ ಟ್ರಸ್ಟ್‌ಗಳಿಗೆ ಸರ್ಕಾರ ಜಿಲ್ಲೆಯವರನ್ನು ನೇಮಿಸದೇ ಬೇರೆ ಜಿಲ್ಲೆಯವರನ್ನು ನೇಮಕ ಮಾಡಿದೆ.

ಅಂತವರಿಂದ ಹೇಗೆ ಕೆಲಸ ನಿರ್ವಹಿಸಲು ಸಾಧ್ಯ ಎನ್ನುವ ಸಾಮಾನ್ಯ ತಿಳಿವಳಿಕೆ ಅಧಿಕಾರದಲ್ಲಿರುವವರಿಗೆ ಇರಬೇಕಾಗುತ್ತದೆ ಎಂದರು. ಪತ್ರಕರ್ತ ಮಾಲತೇಶ ಅಂಗೂರ, ಹಾವೇರಿ ಜಿಲ್ಲೆ ರಚನೆಗೆ ನಡೆದ ಹೋರಾಟ ಹಾಗೂ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಉಪನ್ಯಾಸಕ ಶ್ರೀಧರ ಅಗಸಿಬಾಗಿಲ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ಪ್ರಾವಾಸೋಧ್ಯಮಕ್ಕೆ ಸಾಕಷ್ಟು ಅವಕಾಶಗಳಿವೆ. ಜಿಲ್ಲೆಯಲ್ಲಿರುವ ಐತಿಹಾಸಿಕ ಸ್ಥಳಗಳ ಬಗ್ಗೆ, ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಿದೆ ಎಂದರು.

ಜಿಲ್ಲೆಯ ಆರ್ಥಿಕಾಭಿವೃದ್ಧಿಯ ಕುರಿತು ಎಚ್‌.ಎಸ್‌. ಕಬ್ಬಿಣಕಂತಿಮಠ ಮಾತನಾಡಿ, ಜಿಲ್ಲೆ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಾದರೆ ಜಿಲ್ಲೆಯ ಜನರ ತಲಾ ಆದಾಯ ಹೆಚ್ಚಳವಾಗಬೇಕು. ಹಾವೇರಿ ಜಿಲ್ಲೆ ಕೃಷಿ ಆಧಾರಿತ ಜಿಲ್ಲೆಯಾಗಿದೆ. ವೈಜ್ಞಾನಿಕವಾಗಿ ಕೃಷಿ ಉತ್ಪನ್ನಗಳನ್ನು ಬೆಳೆಯುವ ನಿಟ್ಟಿನಲ್ಲಿ ನೂತನ ಕೃಷಿ ಪದ್ಧತಿ ರೂಪಿಸಬೇಕಿದೆ. ಕೃಷಿ ಉತ್ಪನ್ನಗಳಿಗೆ ಪೂರಕವಾಗಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಅಂದಾಗ ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಯಾಗುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗಗಳು ಲಭ್ಯವಾಗುತ್ತವೆ ಎಂದರು. ಕಾರ್ಯಕ್ರಮದಲ್ಲಿ ನಿವೃತ್ತ ಎಸ್‌ಪಿ ಶಿವಕುಮಾರ ತಾವರಗಿ, ಬಸವರಾಜ ಹೆಡಿಗ್ಗೊಂಡ,
ಎನ್‌.ಎನ್‌.ಗಾಳೆಮ್ಮನವರ, ಮುರುಗೆಪ್ಪ ಕಡೆಕೊಪ್ಪ, ಪರಮೇಶ್ವರಪ್ಪ ಮೇಗಳಮನಿ ಇತರರಿದ್ದರು. ಬಿಇಡಿ ಕಾಲೇಜು ಪ್ರಾಚಾರ್ಯ ಮಂಜುನಾಥ ವಡ್ಡರ ಸ್ವಾಗತಿಸಿ, ಪ್ರೀಯಾ ರೊಡ್ಡಣ್ಣನವರ ನಿರೂಪಿಸಿ, ವಂದಿಸಿದರು.

ಹೋರಾಟದಿಂದ ಅಸ್ತಿತ್ವಕ್ಕೆ ಬಂದಿರುವ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಚಿಂತನೆಗಳು ನಡೆಯಬೇಕು. ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಆರಂಭಗೊಂಡಿದೆ. ಮೆಡಿಕಲ್‌ ಕಾಲೇಜು ಆರಂಭಿಕ ಹಂತದಲ್ಲಿದೆ. ಯುವಜನತೆಗೆ ಶಿಕ್ಷಣ ನೀಡಿದರೆ ಸಾಲದು, ಉದ್ಯೋಗ ನೀಡುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಹಾವೇರಿ-ರಾಣಿಬೆನ್ನೂರಗಳಲ್ಲಿ ಮೇಜ್‌ ಪಾರ್ಕ್‌ ಸ್ಥಾಪನೆಯಾಗಬೇಕಿದೆ. ಕೃಷಿ ಹಾಗೂ ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ಸಿಗಬೇಕಿದೆ.
ಸಂಜೀವಕುಮಾರ ನೀರಲಗಿ, ನಗರಸಭೆ ಅಧ್ಯಕ್ಷರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.