ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನ
Team Udayavani, Aug 7, 2021, 1:11 PM IST
ಹಾವೇರಿ: ಶಿಗ್ಗಾವಿ-ಸವಣೂರು ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ (58 ವ) ಶನಿವಾರ ನಿಧನರಾದರು.
ಮೃತರಿಗೆ ಪತ್ನಿ, ಓರ್ವ ಪುತ್ರ-ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ. ಮೃತರ ಅಂತ್ಯಕ್ರಿಯೆ ಸವಣೂರಿನ ವೀರಶೈವರುದ್ರಭೂಮಿಯಲ್ಲಿ ಶನಿವಾರ ಸಂಜೆ ಜರುಗುಲಿದೆ ಎಂದು ಮೂಲಗಳು ತಿಳಿಸಿವೆ.
ರಾಜಶೇಖರ ಸಿಂದೂರ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು.
ಮುಖ್ಯಮಂತ್ರಿ ಸಂತಾಪ: ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಶಸ್ವಿ ಉದ್ಯಮಿಯೂ ಆಗಿದ್ದ ಸಿಂಧೂರ ಅವರು ಸರಳ, ಸಜ್ಜನ ಜನಾನುರಾಗಿ ಶಾಸಕರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸು ವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಬದಲಾವಣೆ ತರುವ ನಿಟ್ಟಿನಲ್ಲಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ: ಸಿಎಂ ಬೊಮ್ಮಾಯಿ
ಸಿಂಧೂರ ಅವರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ಸವಣೂರಿಗೆ ಆಗಮಿಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.