ಗರಿಷ್ಠ ಸುರಕ್ಷತೆಯೊಂದಿಗೆ ಪರೀಕ್ಷೆ


Team Udayavani, Jun 24, 2020, 7:41 AM IST

ಗರಿಷ್ಠ ಸುರಕ್ಷತೆಯೊಂದಿಗೆ ಪರೀಕ್ಷೆ

ಹಾವೇರಿ: ಕೋವಿಡ್‌ ಪ್ರಮಾಣಿಕೃತ ಮಾರ್ಗಸೂಚಿಯಂತೆ ಗರಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜೂ. 25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ನಿಶ್ಚಿತೆಯಿಂದ ಪರೀಕ್ಷೆ ಬರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ 22,511 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದಾರೆ. 407 ವಿದ್ಯಾರ್ಥಿಗಳು ಹೊರ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡು ವಲಸೆ ಹೋಗಿದ್ದಾರೆ. 695 ವಿದ್ಯಾರ್ಥಿಗಳು ಬೇರೆ ಬೇರೆ ಜಿಲ್ಲೆಗಳಿಂದ ಹಾವೇರಿಯಲ್ಲಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ 75 ಮುಖ್ಯ ಪರೀಕ್ಷಾ ಕೇಂದ್ರಗಳು, 15 ಬ್ಲಾಕ್‌ ಕೇಂದ್ರಗಳನ್ನು ಗುರುತಿಸಲಾಗಿದೆ. 1420 ಕೊಠಡಿಗಳನ್ನು ಸಿದ್ಧಮಾಡಿಕೊಳ್ಳಲಾಗಿದೆ. 1006 ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 75 ಮುಖ್ಯ ಕೊಠಡಿಗಳಿಗೆ, 91 ಕೇಂದ್ರಗಳ ಕಾರಿಡಾರ್‌ ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 75 ಮುಖ್ಯ ಅಧಿಧೀಕ್ಷಕರು, 75 ಪ್ರಶ್ನೆ ಪತ್ರಿಕೆ ಪಾಲಕರು, 29 ಮಾರ್ಗಗಳಿಗೆ ಮಾರ್ಗಾಧಿಕಾರಿಗಳು ಹಾಗೂ 75 ಮೊಬೈಲ್‌ ಸ್ವಾಧಿನಾಧಿಕಾರಿಗಳು ಹಾಗೂ 75 ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನು ನೇಮಕಮಾಡಲಾಗಿದೆ.

ಸಾರಿಗೆ ವ್ಯವಸ್ಥೆ: ನೋಂದಾಯಿತ ಯಾವುದೇ ವಿದ್ಯಾರ್ಥಿಗಳು ಸಾರಿಗೆ ಅನಾನುಕೂಲತೆಗಳಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ತೊಂದರೆಯಾಗದಂತೆ ಮುಂಜಾಗ್ರತವಾಗಿ ಎಲ್ಲ ವಿದ್ಯಾರ್ಥಿಗಳನ್ನು ಸಂಪರ್ಕಸಾಧಿಸಿ ಸಾರಿಗೆ ವ್ಯವಸ್ಥೆಯನು ಖಚಿತಪಡಿಸಿಕೊಳ್ಳಲಾಗಿದೆ. 22,511 ವಿದ್ಯಾರ್ಥಿಗಳ 5453 ವಿದ್ಯಾರ್ಥಿಗಳು ಕಾಲ್ನಡಿಗೆಯಿಂದ ,2110 ವಿದ್ಯಾರ್ಥಿಗಳು ಬೈಸಿಕಲ್‌ ಮೂಲಕ, 10,933 ವಿದ್ಯಾರ್ಥಿಗಳು ಕಾರು, ಬೈಕ್‌ ಮೂಲಕ ಸ್ವಂತ ವಾಹನ ಬಳಿಸಿ ಬರಲಿದ್ದಾರೆ. 720 ಮಕ್ಕಳಿಗೆ ಖಾಸಗಿ ಶಾಲೆಯವರು ತಮ್ಮ ವಾಹನ ಮೂಲಕ ಕರೆತರಲು ಖಚಿತಪಡಿಸಿದ್ದಾರೆ. 1440 ಮಕ್ಕಳು ಶಾಲಾ ವಾಹನದ ಮೂಲಕ ಬರಲಿದ್ದಾರೆ. 1846 ಮಕ್ಕಳು ಕೆ.ಎಸ್‌.ಆರ್‌.ಟಿ.ಸಿ. ರೂಟ್‌ ಬಸ್‌ ಗಳಲ್ಲಿ ಬರಲಿದ್ದಾರೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸಮನ್ವಯದಿಂದ ಸಮಯಕ್ಕೆ ಬಸ್‌ ಬರುವ ಕುರಿತಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಜ್ವರ ತಪಾಸಣೆ: ಕೋವಿಡ್‌ ಮಾರ್ಗಸೂಚಿಯಂತೆ ಎಲ್ಲ ವಿದ್ಯಾರ್ಥಿಗಳಿಗೂ ಪರೀಕ್ಷಾ ಕೇಂದ್ರದಲ್ಲಿ ಜ್ವರ ತಪಾಸಣೆ ನಡೆಸಿ ಸ್ಯಾನಿಟೈಸರ್‌ ಬಳಸಿ ಕೈ ಶುದ್ಧತೆಮಾಡಿಕೊಂಡು ಮಾಸ್ಕ್ ಧರಿಸಿ ಕೊಠಡಿಯೊಳಗೆ ಸಾಮಾಜಿಕ ಅಂತರಕಾಯ್ದುಕೊಂಡು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಈ ಉದ್ದೇಶಕ್ಕಾಗಿ ಅಗತ್ಯ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಿ ಶಿಸ್ತುಬದ್ಧವಾಗಿ ನಿಯಮ ಪಾಲನೆಗೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಇದಕ್ಕೂ ಮುನ್ನ ಈಗಾಗಲೇ ಎಲ್ಲ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಪರೀಕ್ಷೆ ಮುಗಿಯುವರೆಗೂ ಪ್ರತಿ ದಿನ ಸ್ಯಾನಿಟೈಸ್‌ ಮಾಡಲಾಗುವುದು. ಜ್ವರ ಲಕ್ಷಣ ಇರುವವರಿಗೆ ಪ್ರತ್ಯೇಕ ಕೊಠಡಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬೆಳಗ್ಗೆ ಪರೀಕ್ಷೆ ಆರಂಭವಾಗುವ ಒಂದೂವರೆತಾಸು ಮೊದಲು ಅಂದರೆ ಬೆಳಗ್ಗೆ 10:30ಕ್ಕೆ ಪರೀಕ್ಷೆ ಆರಂಭವಾದರೆ 9 ಗಂಟೆಯೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ತಪಾಸಣೆಗೊಳಗಾಗಬೇಕು. ತಪಾಸಣೆ ಬಳಿಕವೇ ಕೊಠಡಿಯೊಳಗೆ ಪ್ರವೇಶ ಮಾಡಬೇಕು. ಬರುವಾಗ ಮತ್ತು ಹೋಗುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರತಿ ಸಾಲಿನಲ್ಲಿ ನಿಂತು ತಪಾಸಣೆ ನಂತರ ಮಾಸ್ಕ್ ಧರಿಸಿ ಒಳಗಡೆಹೋಗಬೇಕು. ಈಗಾಗಲೇ ಉಚಿತ ಮಾಸ್ಕ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಮನೆಯಿಂದಲೇ ಕುಡಿಯುವ ನೀರಿನ ಬಾಟಲಿಗಳನ್ನು ತಂದು ಪ್ರತ್ಯೇಕವಾಗಿ ಬಳಸಲು ಸಲಹೆ ನೀಡಲಾಗಿದೆ ಎಂದು ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ : ಜೂ. 25ರಂದು ದ್ವಿತೀಯ ಭಾಷೆ, ಜೂ. 27ರಂದು ಗಣಿತ, ಜೂ. 29ರಂದು ವಿಜ್ಞಾನ, ಜು. 1ರಂದು ಸಮಾಜ ವಿಜ್ಞಾನ, ಜು. 2ರಂದು ಪ್ರಥಮ ಭಾಷೆ ಹಾಗೂ ಜು. 3ರಂದು ತೃತೀಯ ಭಾಷೆ ಪರೀಕ್ಷೆಗಳು ಬೆಳಗ್ಗೆ 10:30ರಿಂದ ನಡೆಯಲಿವೆ.

ಸಹಾಯವಾಣಿ :  ಸಾರ್ವಜನಿಕರ ಸಂಪರ್ಕಕ್ಕೆ 9480574530 ಸಹಾಯವಾಣಿ ಸ್ಥಾಪಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಆರೋಗ್ಯ ಸಹಾಯಕರ ನೇಮಕ, ಸ್ಥಳೀಯ ಸಂಸ್ಥೆಗಳಿಂದ ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಸೇರಿದಂತೆ ಗರಿಷ್ಠ ಸುಕರÒತಾ ಮುನ್ನೆಚ್ಚರಿಕೆ ಕ್ರಮಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಿಷೇಧಾಜ್ಞೆ ಜಾರಿ :  ಪರೀಕ್ಷಾ ಕೇಂದ್ರದ ಸುತ್ತಲೂ 200 ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಝರಾಕ್ಸ್‌ ಸೆಂಟರ್‌ ಹಾಗೂ ಟೈಪಿಂಗ್‌ ಸೆಂಟರ್‌ ಮುಚ್ಚಲು ಆದೇಶಿಸಲಾಗಿದೆ ಹಾಗೂ ಮೊಬೈಲ್‌ ಬಳಕೆ ಸಹ ನಿಷೇಧಿಸಲಾಗಿದೆ. ಪಾರದರ್ಶಕ, ನಕಲು ಮುಕ್ತ ಸುವ್ಯವಸ್ಥಿತ ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.