ಗಣಮೇಳದಲ್ಲಿ 2ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ


Team Udayavani, Feb 14, 2020, 4:06 PM IST

hv-tdy-1

ಹಾವೇರಿ: ಬೆಂಗಳೂರು ಮಹಾನಗರದಲ್ಲಿ ವಿಶಿಷ್ಟ ಹಾಗೂ ವಿನೂತನ ರೀತಿಯ “ಶಿವಯೋಗ ಸಂಭ್ರಮ’ ಎಂಬ ಅಸಂಖ್ಯ ಪ್ರಮಥರ ಗಣಮೇಳವನ್ನು ಫೆ. 16ರಂದು ಸಂಘಟಿಸಲಾಗಿದ್ದು, ಎರಡು ಲಕ್ಷಕ್ಕೂ ಅಧಿಕ ಭಕ್ತರು ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ತಿಳಿಸಿದರು.

ಗುರುವಾರ ಹೊಸಮಠದ ಆವರಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಚಿತ್ರದುರ್ಗದ ಮುರುಘರಾಜೇಂದ್ರ ಬ್ರಹನ್ಮಠ, ಬಸವಕೇಂದ್ರಗಳು, ಬಸವ ಸಂಘಟನೆಗಳು, ವಿವಿಧ ಧಾರ್ಮಿಕ ಕೇಂದ್ರಗಳು ಹಾಗೂ ಸರ್ವಜನಾಂಗದ ಮಠಾಧೀಶರ ಸಹಯೋಗದೊಂದಿಗೆ ಸಂಘಟಿಸಿರುವ ಸಮ್ಮೇಳನ ಸರ್ವಶರಣರ ಸಮ್ಮೇಳನವಾಗಿದೆ. ಬೆಂಗಳೂರಿನ ನಂದಿ ಗ್ರೌಂಡ್ಸ್‌ನಲ್ಲಿ ಬೆಳಗ್ಗೆ 8ಗಂಟೆಯಿಂದ ಸಂಜೆ 5ಗಂಟೆವರೆಗೆ ನಡೆಯಲಿದೆ ಎಂದರು. ಬಸವಣ್ಣನವರ ನೇತೃತ್ವದಲ್ಲಿ ಲಕ್ಷದ ಮೇಲೆ ತೊಂಬತ್ತಾರು ಸಾವಿರ ಗಣಗಳು ಸಮಾವೇಗೊಂಡಿದ್ದರೆಂಬುದು ಇತಿಹಾಸದ ಒಂದು ರೋಚಕ ಅಂಶ. 21ನೇ ಶತಮಾನದಲ್ಲಿ ಅಂಥದೊಂದು ಚಾರಿತ್ರಿಕ ಘಟನೆಗೆ ಸಾಕ್ಷಿಯಾಗಬೇಕೆಂಬ ಉದ್ದೇಶದಿಂದ ಗಣಮೇಳವನ್ನು “ಜಾಗತಿಕ ಶಾಂತಿ ಹಾಗೂ ಪ್ರಗತಿಗಾಗಿ’ ಎಂಬ ಧ್ಯೇಯದೊಂದಿಗೆ ಸಂಘಟಿಸಲಾಗಿದೆ. “ಗಣಮೇಳ’ ಎಂಬ ಪದ ಶರಣರ ವಚನಗಳಲ್ಲಿ ಉಲ್ಲೇಖವಾಗಿದ್ದು, ಭಕ್ತರ ಸಮೂಹವೇ ಗಣಮೇಳವಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತ ಶರಣರ ಸಮೂಹವೇ “ಗಣಮೇಳ’ ಎಂದರು.

ಗಣಮೇಳದಲ್ಲಿ ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಸಾಮೂಹಿಕ ಸಹಜ ಶಿವಯೋಗ ಹಮ್ಮಿಕೊಳ್ಳಲಾಗಿದ್ದು, 20,000ಕ್ಕೂ ಹೆಚ್ಚು ಜನರು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕಾಗಿ ಮಠದಿಂದ 25,000 ಲಿಂಗಗಳ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದಲ್ಲಿ ಶಿವಯೋಗ ಸಂಭ್ರಮ, ಸಂಗೀತ ಸಂಭ್ರಮ, ಗೋಷ್ಠಿ ಕಾರ್ಯಕ್ರಮಗಳು ನಡೆಯಲಿವೆ. ಜಾತ್ಯಾತೀತ, ಪಕ್ಷಾತೀತವಾದ ಈ ಸಮ್ಮೇಳನವು ಐತಿಹಾಸಿಕ ಕಾರ್ಯಕ್ರಮವಾಗುವ ಜತೆ ದಾಖಲೆಯಾಗುವ ಕಾರ್ಯಕ್ರಮವಾಗಲಿದೆ. 300ಕ್ಕೂ ಹೆಚ್ಚು ನಾಡಿನ ವಿವಿಧ ಮಠಾಧಿಧೀಶರು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಗಣಮೇಳದಲ್ಲಿ ಭಾಗವಹಿಸಲು ಕೆಲವು ಕಡೆಗಳಲ್ಲಿ ಬಸ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು ಕೆಲ ಭಕ್ತರು ರೈಲು, ಸ್ವಂತ ವಾಹನಗಳ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲು ವ್ಯವಸ್ಥೆ ಮಾಡಿಕೊಂಡಿದ್ದಾರೆ. ಜಿಲ್ಲೆಯಿಂದಲೂ ಸಾವಿರಾರು ಭಕ್ತರು ಭಾಗವಹಿಸುತ್ತಿದ್ದಾರೆ. ಸಮ್ಮೇಳನಕ್ಕೆ ಬರುವ ಭಕ್ತರಿಗಾಗಿ ಊಟ, ವಸತಿಯೊಂದಿಗೆ ಎಲ್ಲ ರೀತಿಯ ಅಚ್ಚುಕಟ್ಟಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಣಿಬೆನ್ನೂರಿನ ಗುರುಬಸವ ಸ್ವಾಮೀಜಿ, ಶಾಸಕ ನೆಹರು ಓಲೇಕಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯ ರುದ್ರೇಶ ಚಿನ್ನಣ್ಣನವರ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.