ಬೆಳೆ ವಿಮೆಗೆ ನೋಂದಾಯಿಸಿದರೆ ರೈತರಿಗೆ ಅನುಕೂಲ

Team Udayavani, May 12, 2020, 1:12 PM IST

ಬೆಳೆ ವಿಮೆಗೆ ನೋಂದಾಯಿಸಿದರೆ ರೈತರಿಗೆ ಅನುಕೂಲ

ಹಾವೇರಿ: ಪ್ರಧಾನಮಂತ್ರಿ ಫಸಲ್‌ ವಿಮಾ ಯೋಜನೆಯಡಿ ಬೆಳೆವಿಮೆಗೆ ಒಳಪಡುವ ಆಯ್ಕೆಯನ್ನು ರೈತರಿಗೆ ಬಿಡಲಾಗಿದೆಯೇ ಹೊರತು ಕಡ್ಡಾಯಗೊಳಿಸಿಲ್ಲ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ 19 ಹಿನ್ನೆಲೆಯಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬೆಳೆ ವಿಮೆ ಕಡ್ಡಾಯಗೊಳಿಸಿಲ್ಲ. ಆದರೆ, ಬೆಳೆವಿಮೆ ನೋಂದಾಯಿಸಿದರೆ ರೈತರಿಗೆ ಅನುಕೂಲವಾಗಲಿದೆ. ಈ ಕುರಿತಂತೆ ಅಧಿಕಾರಿಗಳು ರೈತರಿಗೆ ಮನವರಿಕೆ ಮಾಡಿಕೊಡಬೇಕು. ವಿಮೆ ಕಂತು ತುಂಬಲು ರೈತರ ಮನವೊಲಿಸಬೇಕು ಎಂದರು.

ಮುಂಗಾರು ಬಿತ್ತನೆಗೆ ಯಾವುದೇ ಅಭಾವ ಆಗದಂತೆ ಬೀಜ ಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ಎಲ್ಲ ತಾಲೂಕಾವಾರು ಮಾರಟಗಾರರ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಂಸದರು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಸಾಲ ಯೋಜನೆಯಡಿ ಕೃಷಿ, ಸಣ್ಣ ಉದ್ಯಮಿಗಳು, ವೈಯಕ್ತಿಕ ಸಾಲ, ಕೇಂದ್ರ ಮತ್ತು  ರಾಜ್ಯ ಸರ್ಕಾರಗಳ ಸಬ್ಸಿಡಿ ಯೋಜನೆಗಳು, ಪ್ರೋತ್ಸಾಹದಾಯಕ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳ್ಳಬೇಕು. ಲಾಕ್‌ಡೌನ್‌ಗೊಳಗಾಗಿ ರೈತರು, ಸ್ವ ಉದ್ಯೋಗಿಗಳು, ಸ್ವ ಸಹಾಯ ಸಂಘಗಳು, ಸಣ್ಣ ವಾಣಿಜ್ಯೋದ್ಯಮಿಗಳು ಸಂಕಷ್ಟದಲ್ಲಿದ್ದಾರೆ. ಸಾಲ ನೀಡಿಕೆ ಪ್ರಮಾಣದಲ್ಲಿ ಯಾವುದೇ ಕೊರತೆಯಾಗದಂತೆ ನಿಗಧಿಗಿಂತ ಗರಿಷ್ಠ ಪ್ರಮಾಣದಲ್ಲಿ ಅರ್ಹರಿಗೆ ಸಾಲ ನೀಡುವ ಕುರಿತು ತ್ವರಿತ ಕ್ರಮವಹಿಸಬೇಕು ಎಂದರು.

ಕೃಷಿ ಪ್ರಧಾನವಾದ ಹಾವೇರಿ ಜಿಲ್ಲೆಯ ರೈತರಿಗೆ ಕೋವಿಡ್‌ ಸಂಕಷ್ಟ ಕಾಲದಲ್ಲಿ ಹೆಚ್ಚು ಜನರಿಗೆ ಕೃಷಿ ಸಾಲ ನೀಡಬೇಕು. ರೈತರು ಸಾಲ ಪಡೆಯಲು ತೊಂದರೆ ಪಡಬಾರದು. ಸಿಬಿಲ್‌ ದರವನ್ನು ಕೃಷಿ ಕ್ಷೇತ್ರಕ್ಕೆ ಅನ್ವಯಿಸಬಾರದು. ಹೊಸ ಕೃಷಿ ಸಾಲವನ್ನು ತಕ್ಷಣವೇ ನೀಡಬೇಕು. ಎಲ್ಲ ಬ್ಯಾಂಕ್‌ಗಳು ಈ ಮಾನದಂಡವನ್ನು ಅನುಸರಿಸುವಂತೆ ಸೂಕ್ತ ನಿರ್ದೇಶನ ನೀಡಲು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ನೆರೆ ಪರಿಹಾರ: ಕಳೆದ ಆಗಸ್ಟ್‌, ಅಕ್ಟೋಬರ್‌ ಮಾಹೆಯಲ್ಲಿ ಸುರಿದ ಮಳೆಯಿಂದ ಹಾನಿಗೊಳಗಾದ ಬೆಳೆ ಹಾಗೂ ಮನೆ ಹಾನಿ ಪರಿಹಾರ ಬಹಳ ಜನರಿಗೆ ದೊರೆತಿಲ್ಲ. ಈ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ತಹಶೀಲ್ದಾರ್‌ ಹಂತದಲ್ಲೇ ಈ ಸಮಸ್ಯೆ ಬಗೆಹರಿಸುವ ಅಧಿಕಾರವಿದ್ದರೂ ಜಿಲ್ಲಾಧಿಕಾರಿಗಳ ನಿರ್ದೇಶನ ಇಲ್ಲ ಎಂದು ವಿಳಂಬ ಮಾಡುತ್ತಿದ್ದಾರೆ. ಬಾಕಿ ಉಳಿದಿರುವ ಪರಿಹಾರ ನೀಡುವ ಪ್ರಕರಣಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು ಹಾಗೂ ಬೆಳೆ ಪರಿಹಾರ ದೊರೆಯದವರಿಗೆ ಬೆಳೆ ಪರಿಹಾರ ನೀಡಬೇಕು. ಪರಿಹಾರ ವಿತರಣೆಯಲ್ಲಿ ಲೋಪ ಎಸಗಿದವರನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಶಾಸಕರಾದ ಸಿ.ಎಂ. ಉದಾಸಿ, ನೆಹರು ಓಲೇಕಾರ, ಅರುಣಕುಮಾರ ಗುತ್ತೂರ, ವಿರೂಪಾಕ್ಷಪ್ಪ ಬಳ್ಳಾರಿ ಸಭೆಯಲ್ಲಿ ಆಗ್ರಹಿಸಿದರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ, ಹಾವೇರಿ ಉಪ ವಿಭಾಗಾಧಿಕಾರಿ ಡಾ| ದಿಲೀಷ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Delhi–CM

Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Karkala: ಯಕ್ಷಗಾನ ಪ್ರದರ್ಶನ ನಿಲ್ಲಿಸಲು ಮುಂದಾದ ಪೊಲೀಸರು… ಆಕ್ರೋಶ, ಎಸ್ಪಿ ಸ್ಪಷ್ಟನೆ

Karkala: ಯಕ್ಷಗಾನ ಪ್ರದರ್ಶನ ನಿಲ್ಲಿಸಲು ಮುಂದಾದ ಪೊಲೀಸರು… ಆಕ್ರೋಶ, ಎಸ್ಪಿ ಸ್ಪಷ್ಟನೆ

1-ssss

ODI;ಸ್ಪೋಟಕ ಶತಕ ಸಿಡಿಸಿದ ನಾಯಕಿ ಸ್ಮೃತಿ: ಟೀಮ್ ಇಂಡಿಯಾ ದಾಖಲೆ ಮೊತ್ತ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಜಿಲ್ಲೆಯಲ್ಲಿ ಕ್ಷೀಣಿಸುತ್ತಿದೆ ಎಲೆಬಳ್ಳಿ ಬೆಳೆ ಕ್ಷೇತ್ರ

ಹಾವೇರಿ: ಜಿಲ್ಲೆಯಲ್ಲಿ ಕ್ಷೀಣಿಸುತ್ತಿದೆ ಎಲೆಬಳ್ಳಿ ಬೆಳೆ ಕ್ಷೇತ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ

Udupi: ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Delhi–CM

Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.