ಕೃಷಿ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ
Team Udayavani, Jun 16, 2019, 2:16 PM IST
ಬ್ಯಾಡಗಿ: ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಬೇಜವಾಬ್ದಾರಿ ವರ್ತನೆಗೆ ಬೇಸತ್ತು ರೈತರು ಪ್ರತಿಭಟಿಸಿದರು.
ಬ್ಯಾಡಗಿ: ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಕೃಷಿ ಇಲಾಖೆ ಅಧಿಕಾರಿಗಳ ವರ್ತನೆಗೆ ಬೇಸತ್ತ ರೈತರು ಹಾಗೂ ಸಾರ್ವಜನಿಕರು ಕಚೇರಿ ಎದುರು ಪ್ರತಿಭಟಿಸಿದರು.
ಬಿತ್ತನೆ ಬೀಜ ಸೇರಿದಂತೆ ಕೃಷಿ ಪರಿಕರ ಹಾಗೂ ಇನ್ನಿತರ ಕಾರ್ಯಗಳಿಗೆ ಬೆಳಗ್ಗೆ 10:20ಕ್ಕೆ ಕಚೇರಿಗೆ ಆಗಮಿಸಿದ್ದ ರೈತರಿಗೆ ಕಚೇರಿಯಲ್ಲಿ ಡಿ. ದರ್ಜೆ ನೌಕರರನ್ನು ಬಿಟ್ಟರೆ ಯಾರೊಬ್ಬರೂ ಇರದೇ ಇರುವುದು ಶಾಕ್ ನೀಡಿತ್ತು. ಈಗ ಬರುತ್ತಾರೆ ಆಗ ಬರುತ್ತಾರೆ ಎಂದು ಕಾದುಕುಳಿತವರಿಗೆ 11.40ಗಂಟೆಯಾದರೂ ಕೃಷಿ ಅಧಿಕಾರಿ ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಕಚೇರಿಗೆ ಬರದೇ ಇರುವುದು ರೈತರನ್ನು ಮತ್ತಷ್ಟು ಕೆರಳುವಂತೆ ಮಾಡಿತು. ದೂರವಾಣಿ ಮೂಲಕ ಕರೆ ಮಾಡಿ ವಿಚಾರಿಸಿದಾಗಲೂ ಹಾರಿಕೆ ಉತ್ತರ ನೀಡಿದ್ದರಿಂದ ರೈತರ ಆಕ್ರೋಶದ ಕಟ್ಟೆ ಒಡೆಯಿತು.
ಕೃಷಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತ ಕಚೇರಿ ಎದುರು ರೈತರು ಪ್ರತಿಭಟಿಸಿದರು. ರೈತ ರಹಮತ ಹಿತ್ತಲಮನಿ ಮಾತನಾಡಿ, ಈಗಾಗಲೇ ಗೋವಿನಜೋಳ ಬಿತ್ತನೆ ಮಾಡಿದ್ದು ಉಳಿದ 3 ಎಕರೆಯಲ್ಲಿ ಶೇಂಗಾ ಬಿತ್ತನೆ ಬೀಜಕ್ಕಾಗಿ ವಾರದಿಂದ ಅಲೆದಾಡುತ್ತಿದ್ದೇನೆ. 3 ದಿನಗಳಿಂದ ಕಚೇರಿಗೆ 10.30ಕ್ಕೆ ಬರುತ್ತಿದ್ದೇನೆ. ಯಾವೊಬ್ಬ ಅಧಿಕಾರಿಯೂ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ. ಪ್ರಶ್ನಿಸಿದರೆ ನಮ್ಮ ಮೇಲೆಯೇ ದಬ್ಟಾಳಿಕೆ ನಡೆಸುತ್ತಿದ್ದಾರೆ. ಇಂಥ ಬೇಜವಾಬ್ದಾರಿ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಕೂಡಲೇ ಜಿಲ್ಲಾ ಕೃಷಿ ಅಧಿಕಾರಿಗಳು ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೇ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.