ಬೀದಿಗಿಳಿದು ರೈತರ ಪ್ರತಿಭಟನೆ

•ಅನ್ನದಾತರ ಸಂಪೂರ್ಣ ಸಾಲಮನ್ನಾ ಮಾಡಿ•ರೈತ ಸಂಘಟನೆ ನೇತೃತ್ವದಲ್ಲಿ ಹೋರಾಟ

Team Udayavani, Aug 20, 2019, 1:21 PM IST

hv-tdy-2

ಹಾವೇರಿ: ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಅತಿವೃಷ್ಠಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಸೋಮವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಕಾಗಿನೆಲೆ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ನೂರಾರು ರೈತರು, ಪಿ.ಬಿ. ರಸ್ತೆಯ ಮೂಲಕ ಪಾದಯಾತ್ರೆಯಲ್ಲಿ ಬಂದು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ವಾಹನ ಸಂಚಾರಕ್ಕೆ ತಡೆವೊಡ್ಡಿದರು. ಬಳಿಕ ಪಾದಯಾತ್ರೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ರೈತರಿಗೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ನಾಲ್ಕು ವರ್ಷಗಳ ಬರಗಾಲದಿಂದಾಗಿ ರೈತರು ಸಮಸ್ಯೆ ಎದುರಿಸುತ್ತಿರುವುದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈಗ ರಚನೆಯಾಗಿರುವ ಹೊಸ ಸರ್ಕಾರ ಕೂಡಲೇ ಸಾಲ ಮನ್ನಾ ಗೊಂದಲ ಬಗೆಹರಿಸಿ ರೈತರ ಎಲ್ಲ ಸಾಲಮನ್ನಾ ಮಾಡಬೇಕು. ಸಾಲಮನ್ನಾದ ಮಾಹಿತಿ ಯಾವ ಅಧಿಕಾರಿಗಳಿಂದಲೂ ಸಿಗುತ್ತಿಲ್ಲ, ಬ್ಯಾಂಕ್‌ ವ್ಯವಸ್ಥಾಪಕರು, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರ ಬಳಿ ಸಿಗುತ್ತಿಲ್ಲ, ನಮ್ಮ ಸಾಲಮನ್ನಾ ಆಗುತ್ತದೆಯೋ ಇಲ್ಲವೋ ಎಂಬುದು ರೈತರಿಗೆ ಗೊತ್ತಾಗುತ್ತಿಲ್ಲ, ಅವರಿಗೆ ಹೊಸ ಸಾಲವೂ ಸಿಗುತ್ತಿಲ್ಲ, ಹೀಗಾಗಿ ರೈತರು ಮಾಹಿತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಕೂಡಲೇ ರೈತರಿಗೆ ಸರಿಯಾದ ಮಾಹಿತಿ ನೀಡಿ ಗೊಂದಲ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಂದು ತಿಂಗಳು ತಡವಾಗಿ ಬಿತ್ತನೆಯಾಗಿತ್ತು. ಆದರೆ, ಆಗಸ್ಟ್‌ನಲ್ಲಿ ಆಗಿರುವ ಅತಿವೃಷ್ಠಿಗೆ ರೈತರ ಬೆಳೆ ಪೂರ್ಣ ಹಾಳಾಗಿದೆ. ಬೆಳೆ ಹಾನಿಯಾಗಿರುವ ಪ್ರತಿ ಎಕರೆಗೆ ಕನಿಷ್ಠ 25ಸಾವಿರ ರೂ. ಪರಿಹಾರ ನೀಡಬೇಕು. ಬಾಕಿ ಇರುವ ಬೆಳೆವಿಮೆ ಹಣವನ್ನು ಬಡ್ಡಿ ಸಮೇತ ರೈತರಿಗೆ ಪಾವತಿಸಬೇಕು. ಜಿಲ್ಲೆಯ ರೈತರು ಸತತ ಬರ, ಈ ವರ್ಷ ನೆರೆಯಿಂದ ತತ್ತರಿಸಿದ್ದು ಕೂಡಲೇ ದಬ್ಟಾಳಿಕೆಯ ಸಾಲ ವಸೂಲಾತಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಕಳೆದ ವರ್ಷ ಬರದಿಂದ ತತ್ತರಿಸಿದ ರೈತರಿಗೆ ಇನ್ನೂ ಬೆಳೆನಷ್ಟ ಪರಿಹಾರ ತಲುಪಿಲ್ಲ. ತುಂಗಾ ಮೇಲ್ದಂಡೆ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಕೊಡಬೇಕು. ಜಿಲ್ಲೆಗೆ ಪ್ರತ್ಯೇಕ ಸಹಕಾರಿ ಬ್ಯಾಂಕ್‌ ಹಾಗೂ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಬೇಕು. ಗ್ರಾಮೀಣ ಪ್ರದೇಶದ ರಸ್ತೆ ದುರಸ್ತಿ ಮಾಡಬೇಕು. ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಅಡಿವೆಪ್ಪ ಆಲದಕಟ್ಟಿ, ಶಿವಬಸಪ್ಪ ಭೋವಿ, ಎಸ್‌.ವಿ. ಚಪ್ಪರದಹಳ್ಳಿ, ಮಹಮದಗೌಸ್‌ ಪಾಟೀಲ, ರುದ್ರನಗೌಡ ಕಾಡನಗೌಡ್ರ, ಗಂಗಣ್ಣ ಎಲಿ, ಮರಿಗೌಡ ಪಾಟೀಲ, ಕರಿಬಸಪ್ಪ ಅಗಸಿಬಾಗಲದ, ಶಂಕರಗೌಡ ಶಿರಗಂಬಿ, ಪ್ರಭುಗೌಡ ಪ್ಯಾಟಿ, ಸುರೇಶ ಚಲವಾದಿ, ದಿಳ್ಳೆಪ್ಪ ಮಣ್ಣೂರು, ಬಸನಗೌಡ ಗಂಗಪ್ಪಳವರ, ಮಲ್ಲೇಶಪ್ಪ ಪರಪ್ಪನವರ, ಕಿರಣಕುಮಾರ ಗಡಿಗೋಳ, ಮಂಜುನಾಥ ಕದಂ ಇತರರರು ಇದ್ದರು.

ಟಾಪ್ ನ್ಯೂಸ್

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.