ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್
Team Udayavani, May 18, 2020, 4:55 PM IST
ಬ್ಯಾಡಗಿ: ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ವಿತರಿಸಿದರು.
ನಂತರ ಮಾತನಾಡಿದ ಅವರು, ಅತಂತ್ರರಾದ ಎಲ್ಲರವನ್ನೂ ಪತ್ತೆ ಹಚ್ಚುವ ಮೂಲಕ ವಲಸೆ ಕಾರ್ಮಿಕರ ಸಂಕಷ್ಟಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸ್ಪಂದಿಸಿವೆ. ಪ್ರತಿಯೊಬ್ಬ ವ್ಯಕ್ತಿಯ ಜೀವಕ್ಕೂ ಬೆಲೆಯಿದೆ. ಜಿಲ್ಲೆಯಲ್ಲಿ ಹೊರಗಿನಿಂದ ಬಂದವರಿಂದಲೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬೇರೆ ಬೇರೆ ಪ್ರದೇಶಗಳಿಂದ ರೈತರು, ಚಾಲಕರು ಲಾರಿಗಳ ಮೂಲಕ ಪಟ್ಟಣಕ್ಕೆ ಬರುತ್ತಿದ್ದು, ಸ್ಥಳೀಯ ಎಪಿಎಂಸಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಕೂಲಿ ಕಾರ್ಮಿಕರು ಬಹಳಷ್ಟು ಎಚ್ಚರಿಕೆಯಿಂದಿರುವಂತೆ ಮನವಿ ಮಾಡಿದರು.
ತಹಶೀಲ್ದಾರ್ ಶರಣಮ್ಮ ಕಾರಿ, ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಬಿಜೆಪಿ ತಾಲೂಕಾಧ್ಯಕ್ಷ ಸುರೇಶ ಅಸಾದಿ, ಮಾಜಿ ಅಧ್ಯಕ್ಷ ಶಂಕ್ರಣ್ಣ ಮಾತನವರ, ಕಾರ್ಯದರ್ಶಿ ವೀರೇಂದ್ರ ಶೆಟ್ಟರ, ಪುರಸಭೆ ಸದಸ್ಯರಾದ ಶಿವಯೋಗಿ ಅಂಗಡಿ, ಮೆಹಬೂಬ್ ಅಗಸನಹಳ್ಳಿ, ಮುಖಂಡರಾದ ಶಿವಬಸಪ್ಪ ಕುಳೇನೂರ, ಅರುಣ ಪಾಟೀಲ, ಸಂಜೀವ ಮಡಿವಾಳರ, ವಿಷ್ಣುಕಾಂತ ಬೆನ್ನೂರ, ಮಂಜುನಾಥ ಪೂಜಾರ, ಶಿವಯೋಗಿ ಗಡಾದ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.