Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Team Udayavani, Nov 21, 2024, 8:39 AM IST
ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಚಿಕಿತ್ಸೆ ಫಲಿಸದೇ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮನೋಹರ್ ತಹಶೀಲ್ದಾರ್ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.
ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಅನಾರೋಗ್ಯನ ಹಿನ್ನೆಲೆಯಲ್ಲಿ ಮನೋಹರ ತಹಶೀಲ್ದಾರ ಅವರು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಇತ್ತೀಚಿಗೆ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು.
ಮನೋಹರ ತಹಶೀಲ್ದಾರ ಅವರು ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರು, ಅಭಿಮಾನಿಗಳನ್ನು ಅಗಲಿದ್ದಾರೆ.
ಸಾರ್ವಜನಿಕರ ದರ್ಶನಕ್ಕೆ ಅವಕಾಶ..
ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ಲ ಪಟ್ಟಣದ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: Maharashtra Polls: ಘರ್ಷಣೆ, ವಾಗ್ವಾದ ನಡುವೆ ಮಹಾರಾಷ್ಟ್ರ ಮತ ಕುಸಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.