ಮಾನವೀಯ ನೆಲೆಯಲ್ಲಿ ಪರಿಹಾರ ದೊರಕಿಸಿ

Team Udayavani, Aug 17, 2019, 11:14 AM IST

hv-tdy-1

ಹಾವೇರಿ: ಸಂಸದ ಶಿವಕುಮಾರ ಉದಾಸಿ ಅಧಿಕಾರಿಗಳ ಸಭೆ ನಡೆಸಿದರು.

ಹಾವೇರಿ: ತಳಪಾಯ ಹಾಕಿ ನಿರ್ಮಾಣ ಮಾಡಿದ ಎಲ್ಲ ಮನೆಗಳು ಪಕ್ಕಾ ಮನೆಗಳಾಗಿವೆ. ಮನೆ ಹಾನಿ ಸಮೀಕ್ಷೆ ಸಂದರ್ಭದಲ್ಲಿ ಪಕ್ಕಾ ಮತ್ತು ಕಚ್ಚಾ, ಭಾಗಶಃಪೂರ್ಣ ಎಂದು ವಿಭಾಗೀಕರಣ ಮಾಡದೇ ಎಲ್ಲ ಮನೆಗಳನ್ನು ಪಕ್ಕಾ ಮನೆ ಎಂದು ಪರಿಗಣಿಸಿ ನೊಂದವರಿಗೆ ಮಾನವೀಯ ನೆಲೆಯಲ್ಲಿ ಪೂರ್ಣ ಪ್ರಮಾಣದ ಪರಿಹಾರ ದೊರಕುವಂತೆ ಶಿಫಾರಸ್ಸು ಮಾಡಬೇಕು ಎಂದು ಸಂಸದ ಶಿವಕುಮಾರ ಉದಾಸಿ ತಹಶೀಲ್ದಾರ್‌ಗಳಿಗೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹ ಪರಿಹಾರ ಕಾರ್ಯಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ಘೋಷಿಸಿದಂತೆ ಮನೆ ಹಾನಿಯಾದವರಿಗೆ 10 ಸಾವಿರ ರೂ. ಮೊದಲ ಕಂತಾಗಿ ಪರಿಹಾರದ ಚೆಕ್‌ ಅಥವಾ ಆರ್‌.ಟಿ.ಜಿ.ಎಸ್‌. ಮೂಲಕ ಶೀಘ್ರ ಸಂದಾಯವಾಗುವಂತೆ ಕ್ರಮಕೈಗೊಳ್ಳಬೇಕು. ನೆರೆ ನೀರು ನುಗ್ಗಿ ಕೃಷಿ ಭೂಮಿ ಹಾನಿಯಾಗಿರುವ ಕುರಿತಂತೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ಜಿಲ್ಲೆಯ ನದಿ ಪಾತ್ರದ ಕೆಲ ಗ್ರಾಮಗಳಿಗೆ ನೀರು ನುಗ್ಗಿ ಮನೆಯೊಳಗೆ ಎರಡರಿಂದ ಮೂರು ಅಡಿ ನೀರು ನಿಂತಿದೆ. ಮನೆಗಳು ಬೀಳದಿದ್ದರೂ ಪ್ರವಾಹದ ನೀರು ವಾರಗಟ್ಟಲೆ ನಿಂತಿರುವ ಕಾರಣ ಗೋಡೆಗಳು ನೆನೆದು ಶಕ್ತಿ ಕಳೆದುಕೊಂಡಿವೆ. ಇಂತಹ ಸೂಕ್ಷ ್ಮತೆಗಳನ್ನು ಪರಿಗಣಿಸಿ ಪರಿಹಾರಕ್ಕೆ ಶಿಫಾರಸ್ಸು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಹಾರ ಕೇಂದ್ರಗಳು ಬಹುಪಾಲು ಶಾಲೆಗಳಲ್ಲಿ ನಡೆಯುತ್ತಿವೆ. ತರಗತಿ ನಡೆಸಲು ತೊಂದರೆಯಾಗದಂತೆ ಆ ಗ್ರಾಮದ ಎತ್ತರ ಪ್ರದೇಶದಲ್ಲಿರುವ ಬಾಡಿಗೆ ಕಟ್ಟಡ ಅಥವಾ ಸಮುದಾಯ ಭವನ ಅಥವಾ ಸರ್ಕಾರಿ ಇಲ್ಲವೆ ಖಾಸಗಿ ಜಮೀನನ್ನು ಬಾಡಿಗೆಗೆ ಪಡೆದು ತಾತ್ಕಾಲಿಕ ಶೆಡ್‌ ನಿರ್ಮಾಣ ಮಾಡಿ ಜನರನ್ನು ಸ್ಥಳಾಂತರಿಸಬೇಕು. ಈ ಕೆಲಸ ತುರ್ತಾಗಿ ಕೈಗೊಳ್ಳುವಂತೆ ಅವರು ಸೂಚಿಸಿದರು.

ಹರವಿ, ಬಸಾಪುರ, ಕೂಡಲ, ಕನ್ನೇಶ್ವೇರ, ಸೋಮೇಶ್ವರ ಸೇರಿದಂತೆ ಹಲವು ಗ್ರಾಮಗಳು ಪದೆ ಪದೆ ಜಲಾವೃತಗೊಳ್ಳುವುದನ್ನು ತಪ್ಪಿಸಲು ಪೂರ್ಣ ಪ್ರಮಾಣದಲ್ಲಿ ಎತ್ತರದ ಪ್ರದೇಶದಲ್ಲಿ ನಿವೇಶನ ಗುರುತಿಸಿ ಸ್ಥಳಾಂತರಕ್ಕೆ ಶಿಫಾರಸ್ಸು ಮಾಡಬೇಕು. ಪಂಚಾಯತ್‌ ರಾಜ್‌ ಹಾಗೂ ಲೋಕೋಪಯೋಗಿ ಇಲಾಖೆಯ ಸಂಪರ್ಕ ಕಡಿದುಹೋದ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆಮಾಡಬೇಕು. ಕುಡಿಯುವ ನೀರಿನ ಸಂಪರ್ಕ, ವಿದ್ಯುತ್‌ ಕಂಬಗಳ ಮರು ಸ್ಥಾಪನೆ ಕೆಲಸವನ್ನು ತಾತ್ಕಾಲಿಕವಾಗಿ ದುರಸ್ತಿಮಾಡಿ ಜನರಿಗೆ ತುರ್ತಾಗಿ ಸೌಲಭ್ಯಗಳನ್ನು ದೊರಕಿಸಿಕೊಡಬೇಕು. ಶಾಶ್ವತ ದುರಸ್ತಿಗೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಪೂರ್ಣವಾಗಿ ಬಿದ್ದುಹೋಗಿರುವ ಶಾಲಾ ಕಟ್ಟಡಗಳ ಮರು ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಗೋಡೆ ಕುಸಿತ ಅಥವಾ ಛಾವಣಿ ಹಾಳಾದ ಕಟ್ಟಡಗಳನ್ನು ವಿಪತ್ತು ನಿರ್ವಹಣಾ ಅನುದಾನದಲ್ಲಿ ತುರ್ತಾಗಿ ದುರಸ್ತಿಗೆ ಕ್ರಮಕೈಗೊಳ್ಳಬೇಕು. ರಿಪೇರಿಗೆ ತಲಾ ಎರಡು ಲಕ್ಷ ರೂ. ಅನುದಾನ ವೆಚ್ಚ ಮಾಡಲು ಅವಕಾಶವಿದೆ. ಜಿಲ್ಲೆಯಾದ್ಯಂತ ಮರು ಸರ್ವೇಮಾಡಿ ಶಾಲಾ ಕಟ್ಟಡಗಳ ದುರಸ್ತಿ ಹಾಗೂ ಅಥವಾ ಹೊಸ ಕಟ್ಟಡಗಳ ನಿರ್ಮಾಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಬೇಕು. ಹಾಳಾದ ಕಟ್ಟಡದಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ನಡೆಸಬಾರದು. ಕಾಲೇಜುಗಳ ದುರಸ್ತಿಗೆ ಅವಕಾಶವಿದ್ದರೆ ಈ ಅನುದಾನದಲ್ಲಿ ದುರಸ್ತಿಮಾಡಿಸಲು ಸೂಚಿಸಿದರು.

ಅಡಿಕೆ ಬೆಳೆ, ಬಾಳೆ ಸೇರಿದಂತೆ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳ ಹಾನಿ ಕುರಿತಂತೆ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ವರದಿಯ ಸಂದರ್ಭದಲ್ಲಿ ವಾಡಿಕೆ ಮಳೆ ಹಾಗೂ ಪ್ರಸ್ತುತ ಬಿದ್ದಿರುವ ಮಳೆಯ ವಿವರವನ್ನು ದಾಖಲಿಸಿ ಹಾನಿಯ ಕಾರಣ ರಹಿತ ವಿವರವನ್ನು ದಾಖಲಿಸುವಂತೆ ಸೂಚನೆ ನೀಡಿದರು.

ಹೊರಗುತ್ತಿಗೆ ನೇಮಕ: ರಸ್ತೆ ಪುನರ್‌ ನಿರ್ಮಾಣ, ಶಾಲಾ ಕಟ್ಟಡಗಳ ತುರ್ತು ರಿಪೇರಿ ಹಾಗೂ ನಿರ್ಮಾಣವಾಗಬೇಕು. ಒಂದೊಮ್ಮೆ ಸಮೀಕ್ಷೆ ಮಾಡಿ ಮರು ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಲ್ಲಿಸಲು ಸಿಬ್ಬಂದಿಗಳ ಕೊರತೆ ಇದ್ದರೆ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಇಂಜಿನೀಯರ್‌ಗಳನ್ನು ನೇಮಕ ಮಾಡಿಕೊಂಡು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಲೋಕೋಪಯೋಗಿ ಇಲಾಖೆ ಅಭಿಯಂತರರಿಗೆ ಸೂಚನೆ ನೀಡಿದರು.

ಸಭೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾತನಾಡಿ, ಜಿಲ್ಲೆಯಲ್ಲಿ 130 ಗ್ರಾಮಗಳು ಪ್ರವಾಹದಿಂದ ಹಾನಿಯಾಗಿವೆ. 130 ಪರಿಹಾರ ಕೇಂದ್ರಗಳನ್ನ ಆರಂಭಿಸಿದ್ದು ಇಂದಿಗೆ 71ಪರಿಹಾರ ಕೇಂದ್ರಗಳು ಮಾತ್ರ ಮುಂದುವರಿಸಲಾಗಿದೆ. ಉಳಿದಂತೆ ಸಂತ್ರಸ್ಥರು ಮರಳಿ ಮನೆಗೆ ತೆರಳಿದ ಹಿನ್ನೆಲೆಯಲ್ಲಿ ಕೇಂದ್ರಗಳನ್ನು ಬಂದ್‌ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೆ ತೊಂದರೆಯಾಗದಂತೆ ಸಂತ್ರಸ್ಥರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಡಲು ಉದ್ದೇಶಿಸಲಾಗಿದೆ. ಸಂತ್ರಸ್ಥ ಪ್ರತಿ ಕುಟುಂಬಕ್ಕೆ ಆಹಾರ ಕಿಟ್ ಜೊತೆಗೆ ಸೀಮೆ ಎಣ್ಣೆ ಹಾಗೂ ಸ್ಟೌವ್‌ ನೀಡಲಾಗುತ್ತಿದೆ. ದಾನಿಗಳು ನೀಡಿರುವ ಪರಿಹಾರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳ ಮರುಸ್ಥಾಪನೆ ಹಾಗೂ ಜನ ಮತ್ತು ಜಾನುವಾರುಗಳ ಆರೋಗ್ಯ ಸುರಕ್ಷತೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಎಲ್ಲ ತಾಲೂಕು ಆಡಳಿತಕ್ಕೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಹಾನಿಯ ಕುರಿತಂತೆ ಸಮೀಕ್ಷೆ ಕಾರ್ಯಗಳು ನಡೆದಿವೆ, ತುರ್ತು ಪರಿಹಾರ ವಿತರಣೆ ನಡೆದಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲೀಲಾವತಿ,ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.