ಆ್ಯಪ್ ಮೂಲಕವೇ ಪ್ರಗತಿ ವಿವರ ನೀಡಿ
•ಇಲಾಖೆ ಗೂಗಲ್ಶೀಟ್‌ನಲ್ಲಿ ಅಪ್‌ಲೋಡ್ ಮಾಡಿ•ಪರಿಶೀಲನೆ ಸಭೆಯಲ್ಲಿ ಡಿಸಿ ಮಾಹಿತಿ
Team Udayavani, Jul 29, 2019, 9:04 AM IST
ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅಧ್ಯಕ್ಷತೆಯಲ್ಲಿ ಇಲಾಖಾಧಿಕಾರಿಗಳ ಸಭೆ ನಡೆಯಿತು.
ಹಾವೇರಿ: ಪ್ರತಿ ತಿಂಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಯೋಜನೆಯಡಿ ಸಾಧಿಸಿರುವ ಪ್ರಗತಿಯ ಆರ್ಥಿಕ ಮತ್ತು ಭೌತಿಕ ಸಾಧನೆ ವಿವರವನ್ನು ಆ್ಯಪ್ ಮೂಲಕವೇ ಮಾಹಿತಿ ನೀಡಬೇಕು ಎಂದು ಅನುಷ್ಠಾನಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ 2013ರನ್ವಯ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಸಕ್ತ ಸಾಲಿನ ಜೂನ್ ತಿಂಗಳಿನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
ಅನುಸೂಚಿತ ಜಾತಿಗಳ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆಗಳ ಜಿಲ್ಲೆಯಲ್ಲಿ ಸಾಧಿಸಿದ ಪ್ರಗತಿ ವರದಿಯನ್ನು ಸಮಾಜ ಕಲ್ಯಾಣ ಇಲಾಖೆಯ ಗೂಗಲ್ಶೀಟನಲ್ಲಿ ಅಪ್‌ಲೋಡ್ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದರು.
ಇಲಾಖಾವಾರು ಅನುಸೂಚಿತ ಜಾತಿ ಮತ್ತು ಬುಡಕಟ್ಟು ಉಪಯೋಜನೆಗಳಡಿ ಬಿಡುಗಡೆಯಾದ ಅನುದಾನ, ಅನುಷ್ಠಾನಗೊಂಡಿರುವ ಕಾಮಗಾರಿವಾರು ವಿವರ, ಫಲಾನುಭವಿವಾರು ಮಾಹಿತಿ ಸಲ್ಲಿಸಬೇಕು. ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಬಾರದು ಎಂದು ಸೂಚಿಸಿದರು.
ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ, ತುಂಗಾ ಮೇಲ್ದಂಡೆ ಯೋಜನೆ, ಪಂಚಾಯತರಾಜ್ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ ಕೈಗೊಳ್ಳುವ ರಸ್ತೆ, ಕಟ್ಟಡ ಕಾಮಗಾರಿಗಳ ಪ್ರಗತಿ ಮಾಹಿತಿ ಸಂದರ್ಭದಲ್ಲಿ ಕಾಮಗಾರಿ ಕೈಗೊಂಡ ಸ್ಥಳದ ಮಾಹಿತಿ, ಭೌತಿಕ ಮತ್ತು ಆರ್ಥಿಕ ವಿವರವನ್ನು ಸಲ್ಲಿಸಬೇಕು. ಕಾಮಗಾರಿಯ ಗುಣಮಟ್ಟ ಹಾಗೂ ಅನುಷ್ಠಾನಗೊಂಡಿರುವ ಸ್ಥಳ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೇಷ್ಮೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಯೋಜನೆಯ ಅನುಷ್ಠಾನ ಕುರಿತ ಪರಿಶೀಲನೆಗೆ ಪ್ರತ್ಯೇಕ ಸಭೆ ನಿಗದಿಪಡಿಸಲು ಸೂಚಿಸಿದರು.
1704 ಕೃಷಿ ಹೊಂಡ: ಕೃಷಿ ಭಾಗ್ಯ ಯೋಜನೆಯಡಿ ಕಳೆದ ಸಾಲಿನಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ 1704 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ತುಂಗಾ ಮೇಲ್ದಂಡೆ ಯೋಜನೆಯಡಿ ವಿಶೇಷ ಘಟಕ ಯೋಜನೆಯಡಿ ಕಳೆದ ಸಾಲಿನಲ್ಲಿ 12 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಮೂರು ಕಾಮಗಾರಿಗಳು ಮುಕ್ತಾಗೊಂಡಿವೆ. 353.43 ಲಕ್ಷ ರೂ. ಆರ್ಥಿಕ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.
ಜೂನ್ ತಿಂಗಳಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆಯಲ್ಲಿ ಶೇ.100ರಷ್ಟು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ನಗರಾಭಿವೃದ್ಧಿ ಇಲಾಖೆ ಶೇ. 87ರಷ್ಟು, ಕೃಷಿ ಇಲಾಖೆ ಶೇ. 60 ರಷ್ಟು ಸಾಧನೆ ಮಾಡಿರುವುದಾಗಿ ಅಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಕೆ.ವಾಸಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪೀರಜಾದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ಎಸ್. ಶೆಟ್ಟೆಪ್ಪನವರ ಒಳಗೊಂಡಂತೆ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.