ಪ್ರಕೃತಿ ನಾಶದಿಂದ ಜಾಗತಿಕ ತಾಪಮಾನ

•ಜಮೀನಿನ ಬದುಗಳ ಮೇಲೆ ಮರ-ಗಿಡ ಬೆಳೆಸಿ: ಯು.ಬಿ. ಬಣಕಾರ

Team Udayavani, Jul 8, 2019, 3:27 PM IST

haveri-tdy-6..

ಹಿರೇಕೆರೂರ: ಚಿಕ್ಕೋಣತಿ ಗ್ರಾಮದ ದೇವತಿಕಟ್ಟೆ ಕೆರೆ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಯು.ಬಿ.ಬಣಕಾರ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಹಿರೇಕೆರೂರ: ಪರಿಸರ ನಾಶದಿಂದ ಇಂದು ಜಾಗತಿಕ ತಾಪಮಾನ ಹೆಚ್ಚುವುದರ ಜತೆಗೆ ನಮ್ಮ ನಿತ್ಯ ಜೀವನದಲ್ಲಿ ಅನೇಕ ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಶಾಸಕ ಯು.ಬಿ.ಬಣಕಾರ ಹೇಳಿದರು.

ತಾಲೂಕಿನ ಚಿಕ್ಕೋಣತಿ ಗ್ರಾಮದ ದೇವತಿಕಟ್ಟೆ ಕೆರೆಯ ಆವರಣದಲ್ಲಿ ಬಿ.ಜಿ.ಬಣಕಾರ ಸೋಶಿಯಲ್ ಟ್ರಸ್ಟ್‌, ಯು.ಬಿ.ಬಣಕಾರ ಅಭಿಮಾನಿ ಬಳಗ, ಕೇಸರಿ ಮಹಿಳಾ ಘಟಕ ಮತ್ತು ಅರಣ್ಯ ಇಲಾಖೆ ಆಶ್ರಯದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮರ-ಗಿಡಗಳನ್ನು ಹೆಚ್ಚು ಬೆಳೆಸಿ ಪೋಷಿಸುವುದರೊಂದಿಗೆ ಕಾಡುಗಳನ್ನು ಉಳಿಸಿ ನಾಡಿಗೆ ಉತ್ತಮ ಆರೋಗ್ಯ ಒದಗಿಸುವ ಕೆಲಸ ಮಾಡಬೇಕು. ದಿನೇ ದಿನೇ ಪರಿಸರದ ಪ್ರಮಾಣ ಕಡಿಯಾಗುತ್ತಿದ್ದು ಭೌಗೊಳಿಕವಾಗಿ ಅಸಮತೋಲನ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ನಾವು ಹಾಗೂ ನಮ್ಮ ಮಕ್ಕಳು ಬದುಕುವುದು ಕಷ್ಟವಾಗುತ್ತದೆ. ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಮುಂದಾಗಬೇಕು. ರೈತರು ತಮ್ಮ ಜಮೀನುಗಳ ಬದುಗಳಲ್ಲಿ ಮರ ಗಿಡಗಳನ್ನು ಬೆಳೆಸಿದರೆ ಮಣ್ಣಿನ ಸವಕಳಿ ತಡೆಗಟ್ಟಬಹುದು ಮತ್ತು ಸಾರ್ವಜನಿಕ ಆಸ್ತಿಗಳಲ್ಲಿ ಸರ್ಕಾರ ಬೆಳೆಸುವ ಸಸಿಗಳನ್ನು ಕಾಳಜಿಯಿಂದ ಬೆಳೆಸುವ ಮನೋಭಾವ ಹೆಚ್ಚಿಸಿಕೊಳ್ಳಬೇಕು ಎಂದರು.

ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ಮಾತನಾಡಿ, ಒಂದು ಸಸಿಯನ್ನು ನೆಟ್ಟರೆ ಒಬ್ಬ ಮನುಷ್ಯನಿಗೆ ಜೀವ ನೀಡಿದಂತೆ. ಇಂದು ಅರಣ್ಯ ನಾಶದಿಂದ ಅನೇಕ ದುಷ್ಪರಿಣಾಮಗಳು ಎದುರಾಗುತ್ತಿವೆ. ಅರಣ್ಯ ಸಂಪತ್ತು ವಿನಾಶದಿಂದ ಆಹಾರಕ್ಕಾಗಿ ಪ್ರಾಣಿಗಳು ನಾಡಿಗೆ ಆಗಮಿಸುತ್ತಿವೆ. ಅಂತರ್ಜಲ ಕುಸಿಯುತ್ತಿದ್ದು, ಭೂಮಿಯ ಮೇಲೆ ಉಷ್ಣಾಂಶ ಹೆಚ್ಚಾಗತೊಡಗಿದೆ. ಪರಿಸರದ ಮಲಿನತೆಯಿಂದ ಶುದ್ಧ ಗಾಳಿ, ನೀರು ನಮಗೆ ಸಿಗುತಿಲ್ಲ. ಕಾರಣ ಪ್ರತಿಯೊಬ್ಬರು ಗಿಡ ಮರಗಳನ್ನು ಬೆಳಸಿ, ಸಂರಕ್ಷಿಸಬೇಕು ಎಂದು ತಿಳಿಸಿರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಶಿವರಾಜ ಹರಿಜನ, ಸುಮಿತ್ರಾ ಪಾಟೀಲ, ಕೆಎಂಎಫ್‌ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಎಸ್‌.ಆರ್‌. ಅಂಗಡಿ, ಮಹೇಶ ಗುಬ್ಬಿ, ರಾಜು ಬಣಕಾರ, ಷಣ್ಮುಖಯ್ಯ ಮಳಿಮಠ, ರಾಜಶೇಖರ ಹಂಪಾಳಿ, ಹನುಮಗೌಡ ಹುಡೇದ, ಎಸ್‌.ಬಿ.ಪಾಟೀಲ, ಸಿದ್ದು ನರೇಗೌಡ್ರ, ಶಿವಕುಮಾರ ತಿಪ್ಪಶೆಟ್ಟಿ, ಕಂಠಾಧರ ಅಂಗಡಿ, ಹುಚ್ಚಪ್ಪ ಜಡಿಯಣ್ಣನವರ, ವೀರಬಸಪ್ಪ ಮತ್ತೂರ, ಕರಬಸಪ್ಪ ತಿಪ್ಪಕ್ಕಳವರ, ಶರತ್‌ ಬಣಕಾರ, ಅನ್ನಪೂರ್ಣ ಬಣಕಾರ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.