ಸರ್ಕಾರಿ ನೌಕರರಿಗೆ ಸೇವಾ ಮನೋಭಾವ ಅಗತ್ಯ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಲ್ಲಿ ಡಿಸಿ ಸಂಜಯ ಶೆಟ್ಟೆಣ್ಣವರ ಸಲಹೆ

Team Udayavani, Apr 22, 2022, 4:54 PM IST

22

ಹಾವೇರಿ: ಸರ್ಕಾರಿ ಕೆಲಸ ಜನರ ಕೆಲಸವಾಗಿದೆ. ಸರ್ಕಾರಿ ನೌಕರರು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಜನಸಾಮಾನ್ಯರ ಸೇವೆಯಲ್ಲಿ ನಿರತರಾಗಬೇಕೆಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಲಹೆ ನೀಡಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಜಿಲ್ಲಾ ಶಾಖೆ ಸಹಯೋಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ತಮ್ಮ ಕರ್ತವ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ 19 ಜನರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಸರ್ಕಾರಿ ನೌಕರರ ಉತ್ತಮ ಕೆಲಸಕ್ಕೆ ನಮ್ಮೆಲ್ಲರ ಸದಾ ಬೆಂಬಲವಿರುತ್ತದೆ. ಸರ್ಕಾರಿ ನೌಕರರ ಸಂಘದ ಚಟುವಟಿಕೆಗೆ ಐದು ಎಕರೆ ಭೂಮಿಯನ್ನು ಕೋರಿದ್ದು, ಜಾಗೆ ಗುರುತಿಸಿದರೆ ಶೀಘ್ರದಲ್ಲೇ ಮಂಜೂರಾತಿ ನೀಡುವುದಾಗಿ ಘೋಷಿಸಿದರು.

ಉಪನ್ಯಾಸಕರಾಗಿ ಭಾಗವಹಿಸಿದ್ದ ಉಪನ್ಯಾಸಕ ಅರವಿಂದ ಐರಣಿ ಮಾತನಾಡಿ, ಸರ್ಕಾರಿ ನೌಕರರಿಗೆ ಅ ಧಿಕಾರ ಅಷ್ಟೇ ಜವಾಬ್ದಾರಿಯೂ ಇರುತ್ತದೆ. ಆಡಳಿತದಲ್ಲಿ ಜವಾಬ್ದಾರಿ ನಿಭಾಯಿಸುವುದು ಒಂದು ಕೌಶಲ್ಯ. ಇದನ್ನು ರೂಢಿಸಿಕೊಂಡಾಗ ಕರ್ತವ್ಯ ನಿರ್ವಹಣೆಯಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ ಮಾತನಾಡಿ, ಜಿಲ್ಲಾ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಐದು ಎಕರೆ ನಿವೇಶನ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಮಾನ ವೇತನಕ್ಕಾಗಿ ನೌಕರರ ಸಂಘದ ಕೋರಿಕೆಯಂತೆ ವೇತನಕ್ಕೆ ಆಯೋಗ ರಚನೆಗೆ ಘೋಷಣೆ ಮಾಡಿದೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು 25 ಸಾವಿರ ರೂ.ಗೆ ಹೆಚ್ಚಳ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ರಾಜ್ಯ ಮಟ್ಟದ ಸರ್ವೋತ್ತಮ ಪ್ರಶಸ್ತಿ ಪ್ರದಾನ: 2020-21ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಬ್ಯಾಡಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎನ್‌.ತಿಮ್ಮಾರಡ್ಡಿ, ದೇವಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಮಂಜುನಾಥ ಜನಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್‌ ಸೂಪರಿಂಟೆಂಡೆಂಟ್‌ ರಮೇಶ ಹರಿಜನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಪರಿಂಟೆಂಡೆಂಟ್‌ ಯಲ್ಲಪ್ಪ ಪೂಜಾರ, ರಾಣಿಬೆನ್ನೂರ ತಹಶೀಲ್ದಾರ್‌ ಕಚೇರಿ ಗ್ರಾಮಲೆಕ್ಕಾಧಿಕಾರಿ ಅಶೋಕ ಅರಳೇಶ್ವರ, ಹಾವೇರಿ ಸಹಾಯಕ ಪೊಲೀಸ್‌ ಅಧೀಕ್ಷಕರ ಕಚೇರಿ ಪ್ರಥಮ ದರ್ಜೆ ಸಹಾಯಕ ಅನ್ವರಸಾಬ ಬುಡ್ನೆಸಾಬನವರ, ಜಿಲ್ಲಾಧಿಕಾರಿ ಕಚೇರಿಯ ಡಿ ಗ್ರೂಪ್‌ ನೌಕರ ನಾಗರಾಜ ಸೋಮಕ್ಕಳವರ ಹಾಗೂ ಹಿರೇಕೆರೂರು ತಹಶೀಲ್ದಾರ್‌ ಕಚೇರಿ ಡಿ ಗ್ರೂಪ್‌ ನೌಕರ ಜಿ.ಆರ್‌.ಕಿಳ್ಳಿ ಅವರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪ್ರಶಸ್ತಿ ಪ್ರದಾನ ಮಾಡಿದರು.

2021-22ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಹಾನಗಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್‌ಕುಮಾರ ಬಿ., ಹಿರೇಕೆರೂರು ತಾಲೂಕು ಪಂಚಾಯಿತಿಯ ಜೆ.ಜಿ. ಪರಶುರಾಮ ಎಚ್‌ .ನಾಗರಾಳ, ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೇದಾರ್‌ ಸಿ.ಎಸ್‌.ಜಾಧವ, ಹೂವಿನಶಿಗ್ಲಿ ಗ್ರಾಪಂ ಪಿಡಿಒ ರಮೇಶ ಹುಲಸೋಗಿ, ಆರೋಗ್ಯ ಇಲಾಖೆ ವಾಹನ ಚಾಲಕ ಪುಂಡಲಿಕ ಬುಲುಬಲೆ, ಹಿರೇಕೆರೂರು ತಹಶೀಲ್ದಾರ್‌ ಕಚೇರಿ ಗ್ರಾಮ ಲೆಕ್ಕಾಧಿಕಾರಿ ಸುಮಾ ಕೆಂಚಿಕೊಪ್ಪ, ಜಿಲ್ಲಾಧಿಕಾರಿ ಕಚೇರಿ ಡಿ ಗ್ರೂಪ್‌ ನೌಕರಾದ ಲಲಿತಾ ದುಗಲದ ಹಾಗೂ ಹಾವೇರಿ ತಹಶೀಲ್ದಾರ್‌ ಕಚೇರಿ ಡಿ ಗ್ರೂಪ್‌ ನೌಕರ ಜಾಫರಸಾಬ್‌ ಹುಬ್ಬಳ್ಳಿ ಅವರಿಗೆ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಮಹಮ್ಮದ ರೋಷನ್‌, ಅಪರ ಜಿಲ್ಲಾಧಿಕಾರಿ ಡಾ|ಎನ್‌.ತಿಪ್ಪೇಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಅಬಕಾರಿ ಆಯುಕ್ತರಾದ ಶೈಲಜಾ, ಡಿಎಚ್‌ಒ ಡಾ|ಎಚ್‌.ಎಸ್‌.ರಾಘವೇಂದ್ರಸ್ವಾಮಿ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಬ್ಯಾಡಗಿ ತಹಶೀಲ್ದಾರ್‌ ರವಿ ಕೊರವರ, ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.