ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತು
ಎರಡನೇ ಹಂತದ ಚುನಾವಣೆಗೆ ಕ್ಷಣಗಣನೆ
Team Udayavani, Dec 26, 2020, 2:50 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆಗೆ ಇನ್ನೊಂದು ದಿನ ಬಾಕಿ ಇದ್ದು, ಡಿ.27 ರಂದು ಮತದಾನ ನಡೆಯಲಿದೆ. ಜಿಲ್ಲೆಯ ಬ್ಯಾಡಗಿ, ಹಾನಗಲ್ಲ, ಶಿಗ್ಗಾವಿ ಹಾಗೂ ಸವಣೂರು ತಾಲೂಕಿನ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ನಾಲ್ಕು ತಾಲೂಕಿನಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, 105 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಮುಕ್ತಾಯವಾಗಿದೆ. ಈಗ ಏನಿದ್ದರೂ ಮನೆಮನೆ ಭೇಟಿಗೆ ಅಷ್ಟೇ ಅವಕಾಶವಿದೆ. ಆದ್ದರಿಂದ ಅಭ್ಯರ್ಥಿಗಳು ಪ್ರತಿ ಮತದಾರರನ್ನು ತಲುಪಿ ಮನವೊಲಿಕೆ ನಾನಾ ಕಸರತ್ತಿನಲ್ಲಿ ತೊಡಗಿದ್ದಾರೆ. ಅಣ್ಣಾರ, ಅಕ್ಕಾರ, ತಾಯಂದಿರ ಇದೊಂದು ಸಲ ಅವಕಾಶ ಕೊಟ್ಟು ನೋಡಿ ಎಂದು ಹೇಳುತ್ತಿದ್ದಾರೆ.
ಪ್ರತಿಕ್ಷೇತ್ರಗಳಲ್ಲಿ ಸಾವಿರಾರು ಮತಗಳಷ್ಟೇ ಇರುವುದರಿಂದ ಅಭ್ಯರ್ಥಿಗಳು ಸಂಖ್ಯೆ ಹೆಚ್ಚಿರುವ ಕಡೆ ಪೈಪೋಟಿ ಹೆಚ್ಚಿದೆ. ಇನ್ನು ಪಕ್ಷ ಬೆಂಬಲಿತ ಅಭ್ಯರ್ಥಿಗಳು ತಮ್ಮ ನಾಯಕರ ಹೆಸರು ಹೇಳಿ ಮತ ಯಾಚಿಸುತ್ತಿದ್ದಾರೆ. ಮತದಾರರ ಓಲೈಸಲು ನಾನಾ ತಂತ್ರ: ಗ್ರಾಪಂ ಎರಡನೇ ಹಂತದ ಚುನಾವಣೆಗೆ ಇನ್ನೊಂದು ದಿನ ಬಾಕಿ ಇರುವಂತೆ ಹಳ್ಳಿಗಳಲ್ಲಿ ಚುನಾವಣೆ ಗ್ರಾಮಗಳ ಮತದಾರರನ್ನು ಓಲೈಸುವ ಸಲುವಾಗಿ ನಾನಾ ಕಸರತ್ತು ಮಾಡುತ್ತಿದ್ದಾರೆ.
ಮತದಾರರಿಗೆ ಕೋಳಿ, ಮಸಾಲೆ ಪದಾರ್ಥ, ಮದ್ಯ ಸೇರಿದಂತೆ ಹಲವಾರು ಉಡುಗರೆಗಳನ್ನು ನೀಡುವ ಮೂಲಕ ಸದ್ದುಗದ್ದಲವಿಲ್ಲದೇ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ. ಡಾಬಾ-ಹೋಟೆಲ್ ಭರ್ತಿ: 2ನೇ ಹಂತದಲ್ಲಿ ಗ್ರಾಪಂಗಳಿಗೆ ಚುನಾವಣೆ ನಡೆಯುವ ಕಡೆಗಳಲ್ಲಿ ತುರುಸು ತೀವ್ರಗೊಂಡಿದೆ. ಎಲ್ಲ ಹಳ್ಳಿಗಳಲ್ಲಿ ಕೊನೆ ಹಂತದ ಕಸರತ್ತು ನಡೆಯುತ್ತಿದೆ. ಪೈಪೋಟಿ ಮೇಲೆ ಅಭ್ಯರ್ಥಿಗಳು ಮತದಾರರನ್ನು ಮನವೊಲಿಸುವ ಕಾರ್ಯ ನಡೆದಿದೆ.
ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿನ ವೈನ್ ಶಾಪ್, ಬಾರ್ ಗಳನ್ನು ಬಂದ್ ಮಾಡಲಾಗಿದ್ದು, ಮದ್ಯಪಾನ, ಸಾಗಣೆ ನಿಷೇಧಿ ಸಲಾಗಿದೆ. ಆದರೆ, ಗ್ರಾಮೀಣ ಭಾಗದ ಜನರು ಹೆದ್ದಾರಿ ಪಕ್ಕದ ಡಾಬಾ, ನಗರಗಳ ಹೋಟೆಲ್, ಬಾರ್ ರೆಸ್ಟೋರೆಂಟ್ ಗಳು ಗ್ರಾಹಕರಿಂದ ತುಂಬಿ ತುಳುಕುತ್ತಿವೆ.
ಇದನ್ನೂ ಓದಿ:ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ ಅಧಿಕಾರಿಗಳು: ಉಡುಪಿ ಜಿಲ್ಲಾಧಿಕಾರಿ ಗರಂ
ಮತದಾರರ ಕರೆಸಲು ಆಫರ್: ಈಗಾಗಲೇ ಮೊದಲ ಹಂತದ ಚುನಾವಣೆಯಲ್ಲಿ ಅಭ್ಯರ್ಥಿಗಳ ನಡುವೆ ಏರ್ಪಟ್ಟಿದ್ದ ತೀವ್ರ ಜಿದ್ದಾಜಿದ್ದಿಯಿಂದ ಎಚ್ಚೆತ್ತುಕೊಂಡಿರುವ ಎರಡನೇ ಹಂತದ ಅಭ್ಯರ್ಥಿಗಳು ದೂರದ ಊರುಗಳಲ್ಲಿರುವ ಮತದಾರರನ್ನು ಕರೆ ತರಲು ಮುಂದಾಗುತ್ತಿದ್ದಾರೆ. ಕೆಲಸ ಸಲುವಾಗಿ ಗ್ರಾಮಗಳನ್ನು ತೊರೆದು ಬೆಂಗಳೂರು, ಗೋವಾ, ಮಂಗಳೂರು ಸೇರಿದಂತೆ ವಿವಿಧ ನಗರದಲ್ಲಿ
ವಾಸವಾಗಿರುವ ಮತದಾರರ ಮೇಲೆ ಕಣ್ಣು ಇಟ್ಟಿರುವ ಅಭ್ಯರ್ಥಿಗಳು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಗ್ರಾಮಕ್ಕೆ ಆಗಮಿಸುವಂತೆ ಮನವಿ ಮಾಡುತ್ತಿದ್ದಾರೆ. ಅಲ್ಲದೇ, ಅವರಿಗೆ ಅಗತಗ್ಯ ಬಿದ್ದರೆ ವಾಹನ ವ್ಯವಸ್ಥೆ, ಬಸ್ ಚಾರ್ಚ್ ಹಾಗೂ ಕಾರ್ ತಗೊಂಡು ಬಂದರೆ ಪೆಟ್ರೋಲ್ ಬಿಲ್ ಕೊಡುವ ಆಫರ್ ನೀಡುತ್ತಿದ್ದಾರೆ.
ಮಾಸ್ಕ್-ಸಾಮಾಜಿಕ ಅಂತರ ಮಾಯ
ಗ್ರಾಪಂ ಚುನಾವಣೆ ಹಿನ್ನೆಲೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ತುರುಸುಗೊಂಡಿದ್ದು, ಈ ನಡುವೆ ಕೋವಿಡ್ ಎರಡನೇ ಅಲೆ ಬಗ್ಗೆ ಎಚ್ಚೆರಿಸುತ್ತಿದ್ದರೂ ಜನತೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದು ಆತಂಕ ಮೂಡಿಸುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ಷೀಣಿಸಿದ್ದು, ನಿತ್ಯ ಒಂದಂಕ್ಕಿಯ ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಈ ನಡುವೆ ಚುನಾವಣೆ ಪ್ರಚಾರದ ನೆಪದಲ್ಲಿ ಜನರು ಮಾಸ್ಕ್, ಸಾಮಾಜಿಕ ಅಂತರ ಮರೆತು ವರ್ತಿಸುತ್ತಿದ್ದು ಗ್ರಾಮೀಣ ಭಾಗದಲ್ಲಿ ಮತ್ತೆ ಕೊರೊನಾ ಎರಡನೇ ಅಲೆಯ ಆತಂಕ ಹೆಚ್ಚುವಂತೆ ಮಾಡಿದೆ. ಜಿಲ್ಲಾಡಳಿತ ಬೀದಿ ನಾಟಕ, ಕರಪತ್ರ ಹಂಚುವುದು ಸೇರಿದಂತೆ ವಿವಿಧ ಜಾಗ್ರತಿ, ಅರಿವು ಮೂಡಿಸಿದರು ಜನರು ಮಾತ್ರ ನಿರ್ಲಕ್ಷ್ಯ ತೋರುತ್ತಿರುವುದು ಕಂಡು ಬರುತ್ತಿದೆ.
ವೀರೇಶ ಮಡ್ಲೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.