ಬರಗಾಲ ಗುಳೆ ತಡೆಗೆ ಖಾತ್ರಿ ಕೆಲಸ

•ಜಿಪಂ ಸಿಇಒ ಕೆ. ಲೀಲಾವತಿ ಮಾಹಿತಿ •ಜಿಲ್ಲೆಗೆ 42 ಲಕ್ಷ ಮಾನವ ದಿನಗಳ ಸೃಜನೆಯ ಗುರಿ

Team Udayavani, May 17, 2019, 5:06 PM IST

haveri-tdy-3..

ಹಾವೇರಿ: ಹೊಸಕಿತ್ತೂರಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಯನ್ನು ಜಿಪಂ ಸಿಇಓ ಲೀಲಾವತಿ ವೀಕ್ಷಿಸಿದರು.

ಹಾವೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಪ್ರಸಕ್ತ 2019-20ನೇ ಸಾಲಿಗೆ ಜಿಲ್ಲೆಗೆ 42 ಲಕ್ಷ ಮಾನವ ದಿನಗಳ ಸೃಜನೆ ಗುರಿಯನ್ನು ಹೊಂದಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಯಾರೂ ಗುಳೆ ಹೋಗದಂತೆ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಲು ಕುಟುಂಬಗಳಿಗೆ ಸ್ಥಳೀಯವಾಗಿ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಲೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಏಳು ತಾಲೂಕುಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ಎಲ್ಲ ಅನುಷ್ಠಾನ ಅಧಿಕಾರಿಗಳಿಗೆ ಜನರು ಉದ್ಯೋಗದ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ನಿರ್ದೇಶನ ನೀಡಲಾಗಿದೆ. ಈಗಾಗಲೇ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಮೇ 6ವರೆಗೆ 25,872 ಕುಟುಂಬಗಳು ಬೇಡಿಕೆ ಸಲ್ಲಿಸಿದ್ದು, 24,833 ಕುಟುಂಬಗಳಿಗೆ ಉದ್ಯೋಗ ಒದಗಿಸಿ 2.36 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಒಂದರಿಂದ ಎರಡು ಸಮುದಾಯ ಆಧಾರಿತ ಮತ್ತು ಕನಿಷ್ಠ 50 ವೈಯಕ್ತಿಕ ಕಾಮಗಾರಿಗಳನ್ನು ಪ್ರಾರಂಭಿಸಲು ಮತ್ತು ಪ್ರಗತಿಯಲ್ಲಿ ಇಡಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಉದ್ಯೋಗ ಬೇಡಿಕೆಗೆ ಸಂಬಂಧಿಸಿ ಗ್ರಾಮ ಪಂಚಾಯಿತಿಗಳಲ್ಲಿ ನಮೂನೆ-6ನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮ ಪಂಚಾತಿತಿ ಅಭಿವೃದ್ಧಿ ಅಧಿಕಾರಿಗಳು ಅಥವಾ ಆಯಾ ತಾಲೂಕು ಪಂಚಾಯಿತಿ ಅಥವಾ ಜಿಲ್ಲಾ ಪಂಚಾಯಿತಿ ಕಚೇರಿಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯ ಒದಗಿಸುವುದು, ನೈಸರ್ಗಿಕ ಸಂಪನ್ಮೂಲ ಬಲಪಡಿಸುವುದು, ವಲಸೆ ತಡೆಗಟ್ಟುವುದು, ಆರ್ಥಿಕ ಭದ್ರತೆ ಒದಗಿಸುವುದು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಬರಗಾಲ ನಿಮಿತ್ತ ಜನರಿಗೆ ಉದ್ಯೊಗ ಒದಗಿಸುವ ಸಲುವಾಗಿ 252 ಕೆರೆಗಳನ್ನು ಗುರುತಿಸಲಾಗಿದ್ದು (ಜಲಾಮೃತ ಯೋಜನೆಯಡಿ) ಉದ್ಯೋಗ ಬೇಡಿ ಬಂದಲ್ಲಿ ತಕ್ಷಣ ಉದ್ಯೋಗ ಒದಗಿಸಲಾಗುವುದು. ಜನರಿಗೆ ಕೆರೆ ಹೂಳೆತ್ತುವ, ರಸ್ತೆ ನಿರ್ಮಾಣ, ಶಾಲಾ ಕಾಂಪೌಂಡ್‌, ಶಾಲಾ ಆಟದ ಮೈದಾನ, ಅರಣ್ಯ ಸಸಿ ನೆಡುವ, ಸಸಿ ನಿರ್ವಹಣೆ, ದನದೊಡ್ಡಿ, ರೇಷ್ಮೆ ಬೆಳೆ, ತೋಟಗಾರಿಕೆ, ಮನೆ ನಿರ್ಮಾಣ, ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ನಾಲಾ ದುರಸ್ತಿ, ಗೋಕಟ್ಟೆ ನಿರ್ಮಾಣ ಇನ್ನು ಹಲವಾರು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ (ಆರ್ಥಿಕ ವರ್ಷಕ್ಕೆ ನಿಗದಿಪಡಿಸಿದಂತೆ), ಉದ್ಯೋಗ ಚೀಟಿಯನ್ನು ಗ್ರಾಮ ಪಂಚಾಯಿತಿಗಳಲ್ಲಿ ಪಡೆಯಬೇಕು. ಉದ್ಯೋಗಕ್ಕಾಗಿ ನಮೂನೆ -6ರಲ್ಲಿ ಅರ್ಜಿ ಸಲ್ಲಿಸಿದ 15 ದಿನದೊಳಗಾಗಿ ಕೆಲಸ ಖಾತರಿ, ಕೂಲಿ ಹಣವನ್ನು ಕೆಲಸ ನಿರ್ವಹಿಸಿದ ನಂತರ 15 ದಿನಗಳೊಳಗಾಗಿ ಬ್ಯಾಂಕ್‌ ಖಾತೆಗೆ ಕಡ್ಡಾಯವಾಗಿ ನೀಡಲಾಗುವುದು. ವೃದ್ಧರು ಮತ್ತು ವಿಕಲಚೇತನರಿಗೆ ಕೆಲಸದ ಪರಿಣಾಮದಲ್ಲಿ ಶೇ. 50 ರಿಯಾಯಿತಿ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಉದ್ಯೋಗ ಚೀಟಿ ನೀಡಲಾಗುವುದು.

ಗ್ರಾಮ ಪಂಚಾಯಿತಿಗಳಿಂದ ವೈಯಕ್ತಿಕ ಕಾಮಗಾರಿಗಳಾದ ಕುರಿ, ದನದ ದೊಡ್ಡಿ (ಎಸ್‌ಸಿ ಮತ್ತು ಎಸ್‌ಟಿ ಕುಟುಂಬಗಳಿಗೆ ಮತ್ತು ಪ್ಯಾಕೇಜ್‌ ಮಾದರಿಯಲ್ಲಿ ಅನುಷ್ಠಾನಿಸಿದರೆ ಸಾಮಾನ್ಯ ಕುಟುಂಬಗಳಿಗೂ), ಭೂ-ಅಭಿವೃದ್ಧಿ ಮತ್ತು ಒಡ್ಡು, ಬದು ನಿರ್ಮಾಣ, ಇಂಗು ಗುಂಡಿ (ಕೊಳವೆ ಬಾವಿ ಮರುಪೂರಣ ಘಟಕ), ಹಂದಿ ದೊಡ್ಡಿ, ಕೊಳವೆ ಬಾವಿ ಮರುಪೂರಣ ಘಟಕ ಹಾಗೂ ಸಮುದಾಯ ಕಾಮಗಾರಿಗಳಾದ ಕೆರೆ ಅಭಿವೃದ್ಧಿ ಕಾಮಗಾರಿ (ಕೆರೆ ಹೂಳೆತ್ತುವುದು ಮತ್ತು ಪಿಚ್ಚಿಂಗ್‌), ಆಟದ ಮೈದಾನ ಅಭಿವೃದ್ಧಿ, ಸ್ಮಶಾನ ಅಭಿವೃದ್ಧಿ, ಗ್ರಾಮೀಣ ಗೋದಾಮು, ಮಲ್ಟಿ ಆರ್ಚ್‌ ಚೆಕ್‌ ಡ್ಯಾಂ, ಗ್ರಾಮೀಣ ಉದ್ಯಾನವನ ನಿರ್ಮಾಣ, ಅಂಗನವಾಡಿ ಕೇಂದ್ರ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ), ನಮ್ಮ ಹೊಲ ನಮ್ಮ ದಾರಿ (ಮಣ್ಣು ರಸ್ತೆ 200 ಮೀ.ಗೆ), ರೈತರ ಕಣ, ಸಂತೆ ಕಟ್ಟೆ, ಶಾಲಾ ಶೌಚಾಲಯ (ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ), ಶಾಲಾ ಕಾಂಪೌಂಡ, ಸಂಜೀವಿನಿ ಶೆಡ್‌, ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ, ಗೋಬರ್‌ ಗ್ಯಾಸ್‌ ಗುಂಡಿ ತೆಗೆಯುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ, ವಾಲ್ ಪೂಲ್ ಮಾದರಿ, ರಿರ್ಚಾ ವೆಲ್, ಇಂಜಕ್ಷನ್‌ ರೀಚಾರ್ಜ್‌ ವೆಲ್, ಕಲ್ಲು ತಡೆ, ಕುಡಿಯುವ ನೀರಿನ ಬೋರವೆಲ್ ರಿಚಾರ್ಜ್‌ ಪಿಟ್, ಸಮುದಾಯ ದನದ ದೊಡ್ಡಿ ನಿರ್ಮಾಣ ಮಾಡಲಾಗುವುದು ಎಂದರು.

ಈ ಯೋಜನೆಯಡಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ವತಿಯಿಂದ ಹಂದಿ ಶೆಡ್ಡು, ಅಜೋಲ ತೊಟ್ಟಿ, ಅರಣ್ಯ ಇಲಾಖೆ ವತಿಯಿಂದ ಸ್ವಂತ ಜಮೀನು ಮತ್ತು ಬದುಗಳಲ್ಲಿ ಸಿಲ್ವರ್‌, ಹೆಬ್ಬೇವು, ಹಲಸು, ಸಾಗವಾನಿ, ತೇಗ, ಮುಂತಾದ ಗಿಡಗಳನ್ನು, ಮೀನುಗಾರಿಕೆ ಇಲಾಖೆಯಿಂದ ಮೀನು ಕೃಷಿ ಹೊಂಡ, ರೇಷ್ಮೆ ಇಲಾಖೆಯಿಂದ ಹಿಪ್ಪು ನೆರಳೆ ನರ್ಸರಿ, ಹಿಪ್ಪು ನೆರಳೆ ನಾಟಿ ಜೋಡಿಸಾಲು ಪದ್ಧತಿ, ಹಿಪ್ಪು ನೆರಳೆ ಮರಗಡ್ಡಿ ವಿಧಾನ, ಕೃಷಿ ಇಲಾಖೆಯಿಂದ ಎರೆಹುಳು ತೊಟ್ಟಿ, ಭೂ ಅಭಿವೃದ್ಧಿ, ಕೃಷಿ ಹೊಂಡ ನಿರ್ಮಾಣಕ್ಕೆ ಅವಕಾಶವಿದೆ ಎಂದು ಜಿಪಂ ಸಿಇಓ ಲೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.