ಹಳ್ಳೂರು ಗ್ರಾಪಂ ಭ್ರಷ್ಟಾಚಾರ: ತನಿಖೆಗೆ ಆಗ್ರಹ
Team Udayavani, Feb 24, 2021, 4:21 PM IST
ಹಾವೇರಿ: ರಟ್ಟೀಹಳ್ಳಿ ತಾಲೂಕಿನ ಹಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಸಾಕಷ್ಟು ಅವ್ಯವಹಾರ, ಭ್ರಷ್ಟಾಚಾರ ನಡೆಯುತ್ತಿದೆ. ಪಂಚಾಯಿತಿಯಿಂದ ನಡೆಯುವ ಬಹುತೇಕ ಕಾಮಗಾರಿಗಳು ಕಳಪೆ ಗುಣಮಟ್ಟದಿಂದಕೂಡಿದ್ದು, ಜಿಲ್ಲಾ ಪಂಚಾಯಿತಿಯಿಂದ ಸಮಗ್ರ ತನಿಖೆನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಳ್ಳೂರು ಗ್ರಾಮದ ಸಾಮಾಜಿಕ ಕಾರ್ಯಕರ್ತ ಎ.ಎಚ್. ಶಿಂಧೆ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳೂರು ಗ್ರಾಪಂನಲ್ಲಿ ಸಾಕಷ್ಟು ಭ್ರಷ್ಟಾಚಾರ, ಕಳಪೆ ಕಾಮಗಾರಿ ನಡೆಯುತ್ತಿದೆ. ಈ ಬಗ್ಗೆ ಪ್ರಶ್ನಿಸಿದರೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಎಸಿಬಿ, ಲೋಕಾಯುಕ್ತ ಸೇರಿ ಬೇರೆ-ಬೇರೆ ತನಿಖಾ ಇಲಾಖೆಗಳಿಗೆ ದೂರುದಾಖಲಿಸಲು ದಾಖಲೆಗಳು ಅವಶ್ಯವಿದ್ದು, ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದರೂ ಪಿಡಿಒ ರವೀಶ್‌ಕೆ.ಆರ್. ಯಾವುದೇ ಮಾಹಿತಿ ಕೊಡುತ್ತಿಲ್ಲ, ಮಾಹಿತಿಪೂರೈಸುವಂತೆ ಮಾಹಿತಿ ಆಯೋಗದ ಆಯುಕ್ತರು ಆದೇಶಿಸಿದರೂ ಪಾಲಿಸುತ್ತಿಲ್ಲ. ಕೂಡಲೇ ಜಿಪಂ ಸಿಇಒ ಅವರು ಇದನ್ನು ಗಂಭೀರವಾಗಿ ಪರಿಗಣಿಸಿಪಿಡಿಒ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರಾಥಮಿಕ ಶಾಲೆ ಆವರಣದಲ್ಲಿ ನಿರ್ಮಿಸಿರುವ ಹೈಟೆಕ್ ಶೌಚಾಲಯದ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಆಶ್ರಯ ಮನೆಗಳನ್ನು ಅಕ್ರಮವಾಗಿಹಂಚಿಕೆ ಮಾಡಲಾಗಿದೆ. ಯಾವ ಕಾಮಗಾರಿಗೆ ಎಷ್ಟು ಅನುದಾನ ಬಂದಿದೆ. ಎಷ್ಟು ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಯಾರಿಗೂ ಗೊತ್ತಾಗುತ್ತಿಲ್ಲ, ಮಾಹಿತಿಹಕ್ಕಿನಡಿ ಅರ್ಜಿ ಸಲ್ಲಿಸಿದರೂ ಮಾಹಿತಿ ಕೊಡದಿದ್ದಾಗಮಾಹಿತಿ ಆಯೋಗದ ಬೆಳಗಾವಿ ಆಯುಕ್ತರಿಗೆ ದೂರುಸಲ್ಲಿಸಿದ್ದೇವು. ಆಗ ಅವರು ಸಮರ್ಪಕ ಮಾಹಿತಿ ಪೂರೈಸುವಂತೆ ಕಳೆದ ಮಾರ್ಚ್‌ನಲ್ಲೇ ಆದೇಶ ಹೊರಡಿಸಿದ್ದರೂ ಮಾಹಿತಿ ನೀಡುತ್ತಿಲ್ಲ. ಆಯೋಗಕ್ಕೂ ಕೇವಲ ಮಾಹಿತಿ ಒದಗಿಸಲಾಗಿದೆ ಎಂದು ಪತ್ರ ಬರೆದಿದ್ದಾರೆ. ಯಾವೆಲ್ಲ ಮಾಹಿತಿ ಕೊಟ್ಟಿದ್ದೇವೆ. ಏನೆಲ್ಲ ಅಡಕಗಳನ್ನು ಹಚ್ಚಿದ್ದೇವೆ ಎಂಬ ಯಾವ ಮಾಹಿತಿ ಅವರಿಗೂ ಕೊಟ್ಟಿಲ್ಲ ಎಂದು ದೂರಿದರು.
ಕೂಡಲೇ ಪಿಡಿಒ ಅವರನ್ನು ಅಮಾನತು ಮಾಡಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ಪಂಚಾಯಿತಿ ಎದುರು ನಿರಂತರ ಧರಣಿ ಹಮ್ಮಿಕೊಳ್ಳುತ್ತೇವೆ ಎಂದರು. ಹಳ್ಳೂರು ನವಶಿಲಾಯುಗ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸಿ.ಎಂ. ಜಕ್ಕಾಲಿ ಮಾತನಾಡಿದರು ಸುದ್ದಿಗೋಷ್ಠಿಯಲ್ಲಿ ಗ್ರಾಮದ ಮಂಜುನಾಥ ಹಳ್ಳೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.