Hangal ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಪರಿಹಾರ ನೀಡಲು ಮನವಿ
ಸಿಎಂ ಎದುರು ಅಳಲು ತೋಡಿಕೊಂಡ ಸಂತ್ರಸ್ತೆ ಸಹೋದರ
Team Udayavani, Jan 15, 2024, 10:35 PM IST
ಹಾವೇರಿ: ನಗರದ ಹೊರವಲಯದಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂತ್ರಸ್ತೆಯ ಸಹೋದರ ಮನವಿ ಸಲ್ಲಿಸಿದರು.
ತಾಲೂಕಿನ ನರಸೀಪುರದಲ್ಲಿ ಸೋಮವಾರ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಜ.8ರಂದು ಪರಿಚಿತ ವ್ಯಕ್ತಿಯೊಂದಿಗೆ ಹಾನಗಲ್ಲ ತಾಲೂಕಿನ ಕ್ರಾಸ್ ನಾಲ್ಕರ ಬಳಿಯ ಲಾಡ್ಜ್ ಗೆ ಬಂದಿದ್ದಾಗ ಅನಾಮಧೇಯ ಯುವಕರ ಗುಂಪು ಲಾಡ್ಜ್ ನಲ್ಲಿ ಹಲ್ಲೆ ನಡೆಸಿ, ದೈಹಿಕವಾಗಿ ಹಿಂಸೆ ಮಾಡಿ, ಸಾರ್ವಜನಿಕವಾಗಿ ಅವಮಾನಿಸಿದೆ. ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದೆ. ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಯುವಕರ ಗುಂಪು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಬಳಿಕ ಅವಳನ್ನು ಶಿರಸಿ ಬಸ್ ಹತ್ತಿಸಿ ಹೋಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹಾನಗಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ದರಿಂದ ತಾವುಗಳು ಈ ಪ್ರಕರಣದ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ಮಾಡಿ, ಸಂತ್ರಸ್ತ ಸಹೋದರಿಗೆ ನ್ಯಾಯ ಒದಗಿಸಬೇಕು. ಜತೆಗೆ ಆಕೆಗೆ ಸರಕಾರಿ ಉದ್ಯೋಗ ಹಾಗೂ ಪರಿಹಾರ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಮತ್ತಿಬ್ಬರು ಆರೋಪಿಗಳ ಸೆರೆ
ಸಾಮೂಹಿಕ ಅತ್ಯಾಚಾರ, ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಸಾದಿಕ್ ಬಾಬುಸಾಬ್ ಅಗಸಿಮನಿ (29) ಹಾಗೂ ಶೋಯೆಬ್ ನಿಯಾಜ್‌ಅಹ್ಮದ್ ಮುಲ್ಲಾ (19) ಬಂ ಧಿತರು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು 8 ಜನರನ್ನು ಬಂಧಿ ಸಲಾಗಿದೆ. ಅದರಲ್ಲಿ ಮಹ್ಮದಸೈಫ್ ಅಬ್ದುಲಸತ್ತಾನ ಸಾವಿಕೇರಿ ಎಂಬಾತ ಅಕ್ಕಿಆಲೂರಿನ ಬಾಳೂರ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳ ಪರಿಶೀಲನೆಗೆಂದು ಕರೆತಂದು ಮನೆಯಲ್ಲಿ ಬಿಟ್ಟು ಹೋದರು: ಸಂತ್ರಸ್ತೆ
ಶಿರಸಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯನ್ನು ಹಾನಗಲ್ ಪೊಲೀಸರು ಮನೆಗೆ ಕರೆತಂದು ಬಿಟ್ಟಿದ್ದು, ಸ್ಥಳೀಯ ಪೊಲೀಸರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಈ ಬಗ್ಗೆ ಶಿರಸಿಯಲ್ಲಿ ಮಾತನಾಡಿದ ಸಂತ್ರಸ್ತೆ, ಅತ್ಯಾಚಾರ ಎಸಗಿದವರಿಗೆ ಕಠಿನ ಶಿಕ್ಷೆಯಾಗಬೇಕು. ಆದರೆ ಈ ಪ್ರಕರಣದಲ್ಲಿ ಇಲ್ಲದ ಇಬ್ಬರನ್ನುಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಫೋಟೋ ತೋರಿಸಿದರು. ಆ ಪೈಕಿ ಇಬ್ಬರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಲ್ಲ. ಆರು ಮಂದಿಯಲ್ಲಿ ಈ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ತಿಳಿಸಿದ್ದೆ. ಆದರೂ ಅವರನ್ನು ಬಂಧಿಸಿದ್ದಾರೆ. ಮಹಿಳಾ ಕೇಂದ್ರದಲ್ಲಿದ್ದ ನನ್ನನ್ನು ಹಾನಗಲ್ ಪೊಲೀಸರು ಸ್ಥಳ ಪರಿಶೀಲನೆಂದು ಕರೆತಂದು ಈಗ ಮನೆಗೆ ತಂದು ಬಿಟ್ಟಿದ್ದಾರೆ. ನನ್ನ ಕುಟುಂಬಸ್ಥರಿಗೂ ಮಾಹಿತಿ ನೀಡದೆ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ. ನನಗೆ ಜೀವ ಭಯವಿದ್ದರೂ ಮನೆಯ ಬಳಿ ಪೊಲೀಸರನ್ನು ನಿಯೋಜಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತೆಯನ್ನು ಶಿರಸಿಗೆ ಸ್ಥಳಾಂತರಿಸಿದ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.