ಅನುದಾನ ಬಳಸದ ಅಧಿಕಾರಿ ವಿರುದ್ಧ ಕ್ರಮ
ಕಾಲಮಿತಿಯೊಳಗೆ ವೆಚ್ಚ ಮಾಡಲು ಸೂಚನೆ
Team Udayavani, Feb 3, 2021, 5:47 PM IST
ಹಾವೇರಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಕಲ್ಯಾಣಕ್ಕಾಗಿ ಇಲಾಖಾವಾರು ಬಿಡುಗಡೆಯಾದಅನುದಾನ ಕಾಲಮಿತಿಯೊಳಗೆ ವೆಚ್ಚಮಾಡದಅಧಿಕಾರಿಗಳ ಮೇಲೆ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ವರ್ಗಗಳ ಅಧಿನಿಯಮದಡಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯಡಿ ವಿವಿಧ ಇಲಾಖೆಗೆ ಹಂಚಿಕೆಯಾದ ಅನುದಾನದ ಬಳಕೆ, ಕಾರ್ಯಕ್ರಮದ ಅನುಷ್ಠಾನ ಕುರಿತಂತೆ ಡಿಸೆಂಬರ್ ಅಂತ್ಯದವರೆಗೆ ತ್ತೈಮಾಸಿಕ ಸಭೆ ನಡೆಸಿ ಅವರು ಮಾತನಾಡಿದರು. ಪರಿಶಿಷ್ಟರ ಕಲ್ಯಾಣಕ್ಕಾಗಿ ಸರ್ಕಾರ ಬಿಡುಗಡೆಗೊಳಿಸಿರುವ ಅನುದಾನವನ್ನು ಸಕಾರಣವಿಲ್ಲದೆ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿ ಅನುದಾನ ಉಳಿಸಿಕೊಂಡ ಅಧಿಕಾರಿಗಳ ಮೇಲೆ ನಾನೇ ಖುದ್ದಾಗಿ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದರು.
ಪ್ರಸಕ್ತ ಆರ್ಥಿಕ ವರ್ಷದ ಕೊನೆಯ ಹಂತದಲ್ಲಿದ್ದೇವೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಕಲ್ಯಾಣಕ್ಕಾಗಿ ಜಿಲ್ಲೆಗೆ ಬಿಡುಗಡೆಯಾದ ಅನುದಾನ ನೂರಕ್ಕೆ ನೂರರಷ್ಟು ವೆಚ್ಚ ಮಾಡಬೇಕು. ನಿಯಮಾನುಸಾರ ಅರ್ಹ ಫಲಾನುಭವಿಗಳ ಯೋಜನೆ ತಲುಪಬೇಕು.
ಕಾಮಗಾರಿಗಳು ಕೈಗೊಂಡಿದ್ದರೆ ಗುಣಮಟ್ಟದ ಕಾಮಗಾರಿಗಳು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
ಪರಿಶಿಷ್ಟರ ಅನುದಾನದಡಿ ಮಂಜೂರಾದ ಮೂಲಸೌಲಭ್ಯಗಳು, ಕಾಮಗಾರಿಗಳು ಅದೇ ಜನಾಂಗಕ್ಕೆ ತಲುಪಬೇಕು. ಅದೇ ಜನಾಂಗದ ಬಡವಾಣೆಗಳಲ್ಲಿ ಅನುಷ್ಠಾನಗೊಳ್ಳಬೇಕು. ಯಾವುದೇ ಕಾರಣಕ್ಕೂ ಈ ಜನಾಂಗದ ಅಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನ ಬೇರೆ ಕಡೆ ಬಳಕೆಯಾಗಬಾರದು. ಈ ಕುರಿತಂತೆ ಗರಿಷ್ಠ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ವಿಶೇಷ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಫಲಾನುಭವಿಗಳು ಈಗಾಗಲೇ ಆಯ್ಕೆಗೊಂಡಿದ್ದರೆ ತಕ್ಷಣವೇ ಅವರ ಖಾತೆಗೆ ಅನುದಾನ ಜಮಾ ಮಾಡಬೇಕು. ಇನ್ನೂ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕಾರಿಗಳು ತ್ವರಿತವಾಗಿ ಮಾರ್ಗಸೂಚಿಯಂತೆ ಫಲಾನುಭವಿಗಳನ್ನು ಆಯ್ಕೆಮಾಡಲು ಅನುಷ್ಠಾನಾಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ವರ್ಗ ಮತ್ತು ವರ್ಗಗಳಿಗೆ ತೋಟಗಾರಿಕೆ ಸೌಲಭ್ಯಗಳು, ಮೀನುಗಾರಿಕೆ ಇಲಾಖೆ ಸೌಲಭ್ಯಗಳು, ಈ ಜನಾಂಗದ ಕಲಾವಿದರಿಗೆ ಅನುಷ್ಠಾನಗೊಳಿಸಿರುವ ಕಾರ್ಯಕ್ರಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಕೈಗೊಂಡ ಕ್ರಮಗಳು, ನಗರದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಕಾಲೋನಿಗಳಲ್ಲಿ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳು, ಗಂಗಾ ಕಲ್ಯಾಣ ವಿದ್ಯುತ್ ಸಂಪರ್ಕ, ಕಾರ್ಮಿಕರಿಗೆ ಸೌಲಭ್ಯ, ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ವಿವಿಧ 31 ಇಲಾಖೆಗಳ ಪ್ರಗತಿಯನ್ನು ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಸಭೆಗೆ ಗೈರು ಹಾಜರಾದ ತುಂಗಾ ಮೇಲ್ದಂಡೆ ಯೋಜನೆಯ ಅಭಿಯಂತರರು, ಪಿಡಬ್ಲೂಡಿ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲು ಸೂಚನೆ ನೀಡಿದರು. ಸಮಾಜ ಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ರೋಷನ್, ಡಿಎಫ್‌ಒ ಕ್ರಾಂತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ರಾಜೀವ ಕೂಲೇರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿರಕ್ತಿಮಠ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಡಿಡಿಪಿಯು ನಾಗರಾಜ, ಕಾರ್ಮಿಕ ಇಲಾಖಾ ಅಧಿಕಾರಿ ಸಾತೇನಹಳ್ಳಿ, ಕೈಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ವಿನಾಯಕ ಜೋಶಿ ಹಾಗೂ ವಿವಿಧ ಅಭಿವೃದ್ಧಿ ನಿಗಮದ ಅಧಿಕಾರಿಗಳು, ಇತರ ಅಧಿಕಾರಿಗಳು ಇದ್ದರು.
ಓದಿ : ನಾನು ಇರುವವರೆಗೂ ಜಿ.ಟಿ.ಡಿ ಯನ್ನು ವಾಪಸ್ ಜೆಡಿಎಸ್‌ಗೆ ಸೇರಿಸಿಕೊಳ್ಳುವುದಿಲ್ಲ: HDK ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.