Haveri: ಜಿಲ್ಲೆಯಲ್ಲಿ 229 ಮಕ್ಕಳು ಶಿಕ್ಷಣದಿಂದ ವಂಚಿತ

ಎಸ್ಸೆಸ್ಸೆಲ್ಸಿ ಶಿಕ್ಷಣ ಪ್ರತಿ ಮಗುವಿಗೂ ಸಿಗುವಂತೆ ಮಾಡಲು ಮುಂದಾಗಿದ್ದಾರೆ

Team Udayavani, Sep 27, 2023, 4:32 PM IST

Haveri: ಜಿಲ್ಲೆಯಲ್ಲಿ 229 ಮಕ್ಕಳು ಶಿಕ್ಷಣದಿಂದ ವಂಚಿತ

ಹಾವೇರಿ: ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕೈಗೊಂಡ ಸಮೀಕ್ಷೆ ವೇಳೆ ಜಿಲ್ಲೆಯಲ್ಲಿ ಗುರುತಿಸಲಾಗಿದ್ದ ಶಾಲೆಯಿಂದ ಹೊರಗುಳಿದ 505 ಮಕ್ಕಳ ಪೈಕಿ 276 ಮಕ್ಕಳನ್ನು ಮುಖ್ಯವಾಹಿನಿಗೆ ಸೇರಿಸುವಲ್ಲಿ ಶಿಕ್ಷಣ ಇಲಾಖೆ ಯಶಸ್ವಿಯಾಗಿದೆ. ಆದರೆ, ವಿವಿಧ ಕಾರಣಗಳಿಂದ ಇನ್ನೂ 229 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಶಿಕ್ಷಣದಿಂದ ವಂಚಿತರಾಗಿದ್ದಾರೆ.

16 ವರ್ಷದೊಳಗಿನ ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತವಾಗಬಾರದೆಂಬ ಕಾರಣಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕಳೆದ ಫೆಬ್ರವರಿ ತಿಂಗಳಿಂದಲೇ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕಾರ್ಯ ಆರಂಭಿಸಲಾಗಿತ್ತು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ
ಸೇರಿಸುವ ಮೂಲಕ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೈಗೊಂಡ ಸಮೀಕ್ಷೆ ವೇಳೆ ಒಟ್ಟು 505 ಮಕ್ಕಳು ಶಾಲೆ ಬಿಟ್ಟಿರುವುದು ಪತ್ತೆಯಾಗಿದೆ.

ಮುಖ್ಯವಾಹಿನಿಗೆ 276 ಮಕ್ಕಳು: ಶಾಲೆಯಿಂದ ಹೊರಗುಳಿದ 505 ಮಕ್ಕಳ ಪೈಕಿ ರಾಣೆಬೆನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು 154 ಮಕ್ಕಳು, ಹಾನಗಲ್ಲ ತಾಲೂಕಿನಲ್ಲಿ 129 ಮಕ್ಕಳು ಪತ್ತೆಯಾಗಿದ್ದಾರೆ. ಬ್ಯಾಡಗಿ 12, ಹಾವೇರಿ 33, ಹಿರೇಕೆರೂರು 16, ಸವಣೂರು 73, ಶಿಗ್ಗಾವಿ ತಾಲೂಕಿನಲ್ಲಿ 88 ಮಕ್ಕಳು ಪತ್ತೆಯಾಗಿದ್ದಾರೆ. ಇವರಲ್ಲಿ 276 ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವಲ್ಲಿ ಶಿಕ್ಷಕರು, ಬಿಆರ್‌ಸಿ, ಸಿಆರ್‌ಪಿಗಳು ಯಶಸ್ವಿಯಾಗಿದ್ದಾರೆ. ಇನ್ನುಳಿದ 229 ಮಕ್ಕಳನ್ನು ಮುಖ್ಯವಾಹಿನಿಗೆ ಸೇರಿಸುವುದು ಈಗಿರುವ ಸವಾಲಾಗಿದೆ.

16 ವಯಸ್ಸು ಮೀರಿದವರು: ಸಮೀಕ್ಷೆಯಲ್ಲಿ ಗುರುತಿಸಿದ ಆದರೆ ಶಾಲೆಗೆ ಮರಳಿ ಸೇರದ 229 ಮಕ್ಕಳಲ್ಲಿ ಹೆಚ್ಚಿನವರು 16 ವರ್ಷ ಮೀರಿದವರಾಗಿದ್ದಾರೆ. ಕುಟುಂಬದಲ್ಲಿನ ಬಡತನ, ಜಾಗೃತಿ ಕೊರತೆ ಇತ್ಯಾದಿ ಕಾರಣಗಳಿಂದ ಈ ಮಕ್ಕಳು ಶಾಲೆಗೂ ಹೋಗದೇ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದಾರೆ. ಈಗ ಈ ಮಕ್ಕಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿ, ಬಾಹ್ಯ ಅಭ್ಯರ್ಥಿಗಳಾಗಿ ಕೂರಿಸಲು ಶಿಕ್ಷಣ ಇಲಾಖೆ ಅ ಧಿಕಾರಿಗಳು ನಿರ್ಧರಿಸಿದ್ದಾರೆ.

ಆ ಮೂಲಕ ಎಸ್ಸೆಸ್ಸೆಲ್ಸಿ ಶಿಕ್ಷಣ ಪ್ರತಿ ಮಗುವಿಗೂ ಸಿಗುವಂತೆ ಮಾಡಲು ಮುಂದಾಗಿದ್ದಾರೆ. ಪ್ರೌಢ ಶಿಕ್ಷಣ ಇಲಾಖೆಯಿಂದ ಮುಂಬರುವ ವಾರ್ಷಿಕ ಪರೀಕ್ಷೆಗೆ ನೋಂದಣಿ ಶುರುವಾದಾಗ ಸಮೀಕ್ಷೆಯಲ್ಲಿ ಗುರುತಿಸಿದ ಮಕ್ಕಳ ಹೆಸರು ಸೇರಿಸಲು ಉದ್ದೇಶಿಸಲಾಗಿದೆ.

ಶಾಲೆ ಬಿಡಲು ಹಲವು ಕಾರಣ
ಅರ್ಧದಲ್ಲೇ ಶಾಲೆ ಬಿಡುವುದು, ಶಾಲೆಯಿಂದ ಸಂಪೂರ್ಣ ಹೊರಗಿರಲು ಕುಟುಂಬದ ಆರ್ಥಿಕ ಪರಿಸ್ಥಿತಿಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಡತನ ಕಾರಣಕ್ಕಾಗಿ ಪಾಲಕರು ಮಕ್ಕಳನ್ನು ತಮ್ಮೊಂದಿಗೆ ಕೂಲಿಗೆ ಕರೆದೊಯ್ಯುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕೆ ಬೇಕಾಗುವ ಖರ್ಚು ಭರಿಸಲಾಗದ ಕುಟುಂಬಗಳು ಶಾಲೆ ಬಿಡಿಸುತ್ತಿವೆ. ಇನ್ನು ಕೆಲವರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದು, ಮಕ್ಕಳನ್ನು ಅಲ್ಲಿಗೇ ಕರೆದೊಯ್ಯುತ್ತಿದ್ದಾರೆ. ಅಂಥವರಲ್ಲಿ ಕೆಲ ಪಾಲಕರು ಸ್ಥಳೀಯವಾಗಿ ಶಾಲೆಗಳಿಗೆ ಕಳುಹಿಸುತ್ತಿದ್ದರೆ, ಇನ್ನೂ ಕೆಲವರು ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಇದರಿಂದ ಮಕ್ಕಳು ಕಡ್ಡಾಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಸಲ ಶಾಲೆ ಬಿಟ್ಟವರ ಸಂಖ್ಯೆ ಜಿಲ್ಲೆಯಲ್ಲಿ ಕಡಿಮೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮತ್ತು ಅರ್ಧಕ್ಕೆ ಬಿಟ್ಟ ಮಕ್ಕಳ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್‌ ಅಂತ್ಯದವರೆಗೂ ನಡೆಯಲಿದೆ. 505 ಮಕ್ಕಳ ಪೈಕಿ ಒಂದು ಮಗುವಿಗೆ ಗೃಹ ಆಧಾರಿತ ಶಿಕ್ಷಣಕ್ಕೆ, 273 ಮಕ್ಕಳನ್ನು ಶಾಲೆಗಳಿಗೆ ಸೇರಿಸಲಾಗಿದೆ. ಯಾವ ಮಗುವು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ.
ಗಿರೀಶ ಪದಕಿ, ಡಿಡಿಪಿಐ ಹಾವೇರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.