Haveri: ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕ ಮೃತ್ಯು
15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು... ಹಬ್ಬಕ್ಕೆ ಬ್ರೇಕ್ ಹಾಕಿದ ಪೊಲೀಸರು!
Team Udayavani, Mar 4, 2024, 5:06 PM IST
ಹಾವೇರಿ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೃತ ಯುವಕ ಅರಳಿಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ (38) ಎನ್ನುವವರಾಗಿದ್ದು, ಹೋರಿ ತಿವಿದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಪೋಲಿಸರು ಸಾವಿರಾರು ಜನರು ಭಾಗಿಯಾಗಿದ್ದ ಹೋರಿ ಬೆದರಿಸುವ ಹಬ್ಬವನ್ನು ನಿಲ್ಲಿಸಿ ಕ್ರಮ ಕೈಗೊಂಡಿದ್ದಾರೆ. ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.