Haveri: ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಟೀಕರಣ- ಸಾತ್ಯಕಿ ಸಾವರ್ಕರ್
Team Udayavani, Dec 18, 2023, 6:12 PM IST
ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರಲ್ಲ. ಅವರ ಭಾವಚಿತ್ರ ತೆಗೆಯಬೇಕೆಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುವ ಮೂಲಕ ಅಲ್ಪಸಂಖ್ಯಾತರ ಮತಕ್ಕಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ ಎಂದು ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ವಾಗ್ಧಾಳಿ ನಡೆಸಿದರು.
ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರಭಕ್ತರ ಬಳಗದಿಂದ ರವಿವಾರ ಸಂಜೆ ಏರ್ಪಡಿಸಿದ್ದ ವೀರ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಷ್ಟ್ರಭಕ್ತಿ ಎಂಬುದು ನಮ್ಮ ರಕ್ತದಲ್ಲೇ ಇದೆ. ಭಗತ್ ಸಿಂಗ್, ಸುಖದೇವ್, ಚಂದ್ರಶೇಖರ ಆಝಾದ್ ಅವರು ಸಾವರ್ಕರ್ ಅವರನ್ನು “ವೀರ’ ಎಂದು ಸಂಬೋಧಿಸಿದ್ದಾರೆ. ಸಾವರ್ಕರ್ ಅವರ ಹೋರಾಟ, ದೇಶಭಕ್ತಿ, ತ್ಯಾಗ ಎಂಥದ್ದು ಎಂಬುದು ಇಡೀ ನಾಡಿಗೆ ಗೊತ್ತಿದೆ. ಶಿವಾಜಿ ಮಹಾರಾಜರು, ರಾಣಿ ಚನ್ನಮ್ಮ,
ಶ್ರೀಕೃಷ್ಣದೇವರಾಯ ಮುಂತಾದವರು ನಮ್ಮ ಪೂರ್ವಜರು ಎಂದರು.
ಟಿಪ್ಪುವನ್ನು ಮೂರು ಬಾರಿ ಮರಾಠರು ಸೋಲಿಸಿದ್ದಾರೆ. ಹೀಗಾಗಿ, ಟಿಪ್ಪು ನಿಜವಾದ ವೀರನಲ್ಲ. ನಿಜವಾದ ವೀರರು ಮರಾಠರು. ನಮ್ಮೆಲ್ಲರ ರಕ್ತ ಒಂದೇ, ನಾವೆಲ್ಲರೂ ಒಂದೇ ಎಂಬ ಭಾವ ನಮ್ಮದು. ನಾವು ಶ್ರೀರಾಮ, ಶ್ರೀಕೃಷ್ಣ, ದೇವಿಯನ್ನು ಪೂಜಿಸುತ್ತಾ
ಬಂದಿದ್ದೇವೆ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ರಾಷ್ಟ್ರಭಕ್ತ ಸಾವರ್ಕರ್ ಅವರನ್ನು ಟೀಕೆ ಮಾಡುತ್ತಾರೆ, ಫೋಟೋ ತೆಗೆಯುತ್ತೇನೆ ಅಂತಾರೆ. ದೇಶದ ಇತರೆಡೆ ಕಾಂಗ್ರೆಸ್ ನಾಯಕರು ಸಾವರ್ಕರ್ ಅವರನ್ನು ಹೊಗಳುತ್ತಿದ್ದರೆ, ನಮ್ಮ ರಾಜ್ಯದ ಕಾಂಗ್ರೆಸ್ ನಾಯಕರು ಮಾತ್ರ ತೆಗಳುತ್ತಿದ್ದಾರೆ ಎಂದು ಕಿಡಿಕಾರಿದರು. ನಾವು ನಮ್ಮ ಮನೆಗಳಿಗೆ “ಸಾವರ್ಕರ್ ಸದನ’ ಎಂದು ನಾಮಫಲಕ ಹಾಕುತ್ತೇವೆ. ನಿಮಗೆ ತಾಕತ್ತಿದ್ದರೆ “ಟಿಪ್ಪು ಸದನ’ ಎಂದು ಹಾಕಿಕೊಳ್ಳಿ ಎಂದು ಸವಾಲು ಹಾಕಿದರು.
ಈ ದೇಶಕ್ಕೆ ಭವ್ಯ ಭವಿಷ್ಯವಿದೆ. ಸಾಧು, ಸಂತರ ಪುಣ್ಯಭೂಮಿ. ಅವರು ತ್ಯಾಗಿಗಳಾದರೆ, ನಾವು ಭೋಗಿಗಳು. ಸ್ವಾತಂತ್ರ್ಯ ಹೋರಾಟಗಾರರನ್ನು ಹೀಯಾಳಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಕೇವಲ ಮತಕ್ಕಾಗಿ, ಅಧಿಕಾರಕ್ಕಾಗಿ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ದೇಶದ ರಾಮ ಭಕ್ತರು ಗುಲಾಮಗಿರಿ ಸಂಕೇತವಾದ ಬಾಬ್ರಿ ಮಸೀದಿ ಒಡೆದು ಹಾಕಿದರು. ಜನವರಿಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಯಾಗಲಿದೆ. ಸಾಧು ಸಂತರನ್ನು ಜಾತಿವಾದಿಗಳು ಅಂತ ಜರಿಯುತ್ತಾರೆ. ಸೀತೆ, ಸಾವಿತ್ರಿ ಹುಟ್ಟಿದ ನಾಡಿನಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ನಿಲ್ಲಬೇಕು. ಆಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ ಎಂದರು.
ಇಲ್ಲಿಯ ಗಾಳಿ, ನೀರು, ಅನ್ನ ತಿಂದು ಕೆಲವರು ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗುತ್ತಾರೆ. ಅಂಥವರಿಗೆ ಇಲ್ಲಿ ಬದುಕಲು ಹಕ್ಕಿಲ್ಲ ಎಂದರು. ರಾಷ್ಟ್ರಭಕ್ತರ ಬಳಗದ ಗೌರವಾಧ್ಯಕ್ಷ ಕೆ.ಇ.ಕಾಂತೇಶ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರಧ್ವಜ ಹಾರಿಸುವ ತೀರ್ಮಾನ ತೆಗೆದುಕೊಂಡಾಗ ಮೊದಲ ಬಾರಿ ಹಾರಿಸಿದ್ದು ಹಾವೇರಿಯಲ್ಲಿ ಎಂಬುದು ಹೆಮ್ಮೆಯ ಸಂಗತಿ. ಸರ್ವಜ್ಞ, ಸಂತ ಶಿಶುನಾಳ ಶರೀಫರು, ಕನಕದಾಸರು ಮುಂತಾದವರಿಗೆ ಜನ್ಮ ನೀಡಿದ ಪುಣ್ಯಭೂಮಿ ಇದು. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಅಪ್ರತಿಮ ದೇಶಭಕ್ತಿಯ ಬಗ್ಗೆ ನಾಡಿನ ಜನರಿಗೆ ತಿಳಿದಿದೆ. ಈ ದೇಶ ಬರುವ ದಿನಗಳಲ್ಲಿ ಹಿಂದೂ ರಾಷ್ಟ್ರ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಸಾವರ್ಕರ್ ಚಿಂತನೆ ಕುರಿತು ವಾಗ್ಮಿ ಹಾಗೂ ರಾಷ್ಟ್ರವಾದಿ ಚಿಂತಕ ಕಿರಣ ರಾಮ್ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಹಾವೇರಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಬಿ.ಜಿ.ಗೌರಿಮನಿ ಹಾಗೂ ಮಲ್ಲೇಶಪ್ಪ ಅಂಗಡಿ ದಂಪತಿಗಳನ್ನು ಸನ್ಮಾನಿಸಲಾಯಿತು. ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ ಭಾಗವಹಿಸಿದ್ದರು.
ಭವ್ಯ ಮೆರವಣಿಗೆ
ಮಹಾರಾಷ್ಟ್ರದ ಪುಣೆಯಿಂದ ಹಾವೇರಿ ನಗರಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಸಾತ್ಯಕಿ ಸಾವರ್ಕರ್ ಅವರಿಗೆ ಹಾವೇರಿಯ ನೂರಾರು ಮಾತೆಯರು ಪೂರ್ಣಕುಂಭ ಸ್ವಾಗತ ಕೋರಿದರು. ನಗರದ ಹುಕ್ಕೇರಿ ಮಠದಿಂದ ವಿವಿಧ ವಾದ್ಯವೈಭವಗಳೊಂದಿಗೆ ಮೆರವಣಿಗೆ ಮೂಲಕ ಮುನ್ಸಿಪಲ್ ಹೈಸ್ಕೂಲ್ ಮೈದಾನಕ್ಕೆ ಕರೆತರಲಾಯಿತು.
ಗಮನ ಸಳೆದ ಗಾಯನ
ಕಾರ್ಯಕ್ರಮದಲ್ಲಿ ವಿಶೇಷವಾಗಿ ನೂರಾರು ವಿದ್ಯಾರ್ಥಿನಿಯರು ಸಮೂಹ ಗಾಯನದಲ್ಲಿ ಸಾವರ್ಕರ್ ವಿರಚಿತ “ಜಯೋಸ್ತುತೆ’ ಸೇರಿದಂತೆ ದೇಶಭಕ್ತಿ ಗೀತೆಗಳನ್ನು ಹಾಡಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.