ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿ


Team Udayavani, Apr 13, 2020, 12:18 PM IST

13-April-18

ಹಾವೇರಿ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸ್ವಯಂಸೇವಾ ಸಂಘಟನೆಗಳ ಮುಖ್ಯಸ್ಥರ ಸಭೆ ನಡೆಯಿತು.

ಹಾವೇರಿ: ಕೋವಿಡ್‌-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆದಾಗ್ಯೂ ದಾನಿಗಳು, ಸ್ವಯಂಸೇವಾ ಸಂಘಟನೆಗಳು ಜಿಲ್ಲಾಡಳಿತ ಕಾರ್ಯದಲ್ಲಿ ಕೈಜೋಡಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ವಿವಿಧ ಸಂಘ-ಸಂಸ್ಥೆ ಮುಖ್ಯಸ್ಥರಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ಸ್ವಯಂಸೇವಾ ಸಂಘಟನೆಗಳ ಮುಖ್ಯಸ್ಥರ ಸಭೆ ನಡೆಸಿದ ಅವರು, ಕೋವಿಡ್‌ವಾರಿಯರ್‌ ಆಗಿ ಸ್ವಯಂ ಪ್ರೇರಣೆಯಿಂದ ಕೆಲಸ ಮಾಡಲು ಮುಂದೆ ಬರಬೇಕು. ಅಸಹಾಯಕರಿಗೆ, ವಲಸೆ ಕಾರ್ಮಿಕರಿಗೆ, ಆಶ್ರಯ, ಊಟ, ವಸತಿ ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಲು ಮುಂದಾಗುವಂತೆ ತಿಳಿಸಿದರು.

ಈಗಾಗಲೇ ಜಿಲ್ಲಾಡಳಿತದಿಂದ ವಲಸೆ ಕಾರ್ಮಿಕರಿಗೆ, ಬಡವರಿಗೆ ಪಡಿತರ, ಊಟದ ವ್ಯವಸ್ಥೆ ಮಾಡಲಾಗಿದೆ. ಈ ಕೆಲಸದಲ್ಲಿ ತಾವು ಕೈಜೋಡಿಸಬೇಕು. ತಮ್ಮ ತಮ್ಮ ಸಂಘ-ಸಂಸ್ಥೆ ಹಾಗೂ ಸಮಾಜದ ದಾನಿಗಳಿಂದ ನೆರವು ನೀಡುವುದರ ಮೂಲಕ ಜಿಲ್ಲಾಡಳಿತಕ್ಕೆ ಕೈಜೋಡಿಸುವಂತೆ ಕೋರಿದರು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮಾತನಾಡಿ, ಈಗಾಗಲೇ ವಲಸೆ ಕಾರ್ಮಿಕರಿಗೆ ಹಸಿವಿನಿಂದ ಬಳಲುವ ವಸತಿ ಹೀನರಿಗೆ ಜಿಲ್ಲಾಡಳಿತ ವತಿಯಿಂದ ಸಹಾಯವಾಣಿ ಸ್ಥಾಪಿಸಿ ಅಗತ್ಯವಿದ್ದವರಿಗೆ ಉಚಿತವಾಗಿ ಆಹಾರ ಪೂರೈಸಲಾಗುತ್ತಿದೆ. ಜಿಲ್ಲೆಯಾದ್ಯಂತ ಪಡಿತರ ವಿತರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜಾಗೃತಿ ಮೂಡಿಸುವುದು, ಬ್ಯಾಂಕ್‌ ವ್ಯವಹಾರಕ್ಕೆ ಬರುವ ಸಂದರ್ಭದಲ್ಲಿ ಅನಗತ್ಯವಾಗಿ ಗುಂಪು ಕೂಡದಂತೆ ಜಾಗೃತಿ ಮೂಡಿಸುವುದು ಸೇರಿದಂತೆ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೋವಿಡ್‌ ನಿಯಂತ್ರಣ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಜಿಪಂ ಸಿಇಒ ರಮೇಶ ದೇಸಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪಿ.ವೈ. ಶೆಟ್ಟೆಪ್ಪನವರ, ಜಿಲ್ಲಾ ವಾರ್ತಾಧಿಕಾರಿ ಬಿ.ಆರ್‌. ರಂಗನಾಥ್‌, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ರೆಡ್‌ ಕ್ರಾಸ್‌ ಸಂಸ್ಥೆಯ ಅಧ್ಯಕ್ಷ ಸಂಜೀವ ನೀರಲಗಿ, ಇಡಾರಿ ಸಂಸ್ಥೆಯ ಮುಖ್ಯಸ್ಥೆ ಪರಿಮಳಾ ಜೈನ್‌, ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ಮಜೀದ್‌, ಆಶಾಕಿರಣ ಸಂಸ್ಥೆಯ ಮುತ್ತುರಾಜ
ಮಾದರ, ಬ್ಯಾಡಗಿ ಕಲ್ಲೇಶ್ವರ ಗ್ರಾಮೀಣ ವಿದ್ಯಾ ಸಂಸ್ಥೆಯ ದಾನಪ್ಪ ಚೂರಿ, ಹಾವೇರಿ ದಿವ್ಯಜ್ಯೋತಿ ಶಿಕ್ಷಣ ಸಂಸ್ಥೆಯ ಎನ್‌.ಎಚ್‌. ದಯಾನಂದ, ಶ್ರೀ ಅರುಣೋದಯ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಐ.ಬಿ. ಪಾಟೀಲ, ರಾಣಿಬೆನ್ನೂರು ಸರಸ್ವತಿ ಮಹಿಳಾ ಸಂಸ್ಥೆ ಅಧ್ಯಕ್ಷೆ ಪಾರ್ವತಿ ವಿ. ಹೊಸಮನಿ ಇತರರು ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.