ಹಾವೇರಿ:111 ಜನರಿಗೆ ಸೋಂಕು; 6 ಜನರು ಸಾವು
Team Udayavani, Apr 29, 2021, 8:30 PM IST
ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯ ಸೋಂಕಿನ ಪ್ರಕರಣಗಳ ನಾಗಾಲೋಟ ಮುಂದುವರೆದಿದ್ದು, ಗುರುವಾರ ಬರೊಬ್ಬರಿ 111 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಹಾಗೂ 6 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 12,406 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಗುರುವಾರ ೪೯ ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 11,598 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ ಹಾಗೂ ಈವರೆಗೆ 223 ಜನರು ಕೋವಿಡ್‌ನಿಂದ ಮೃತಪಟ್ಟಿದ್ದು, 585 ಸಕ್ರಿಯ ಪ್ರಕರಣಗಳಿವೆ.
ತಾಲೂಕುವಾರು ವಿವರದಂತೆ ಬ್ಯಾಡಗಿ-1, ಹಾನಗಲ್ಲ-4, ಹಾವೇರಿ-23, ಹಿರೇಕೆರೂರು-9, ರಾಣೆಬೆನ್ನೂರು-48, ಸವಣೂರು-10, ಶಿಗ್ಗಾವಿ-13, ಇತರೆ-3 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನಿಂದ ಗುಣಮುಖರಾಗಿ ಬ್ಯಾಡಗಿ-5, ಹಾನಗಲ್ಲ-9, ಹಾವೇರಿ-13, ಹಿರೇಕೆರೂರು-3, ರಾಣೆಬೆನ್ನೂರು-11, ಸವಣೂರು-೨2, ಶಿಗ್ಗಾವಿ-5, ಇತರೆ-1 ಜನರು ಬಿಡುಗಡೆ ಹೊಂದಿದ್ದಾರೆ.
ಆರು ಸೋಂಕಿತರು ಸಾವು..
ಜಿಲ್ಲೆಯಲ್ಲಿ ಗುರುವಾರ ಆರು ಜನರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ದೃಢಪಡಿಸಲಾಗಿದೆ. ಜಿಲ್ಲೆಯ ಹಾನಗಲ್ಲ ತಾಲೂಕಿನ 50 ವರ್ಷದ ಮಹಿಳೆ, ಸವಣೂರು ತಾಲೂಕಿನ 60ವರ್ಷ ವೃದ್ಧ, ಬ್ಯಾಡಗಿ ತಾಲೂಕಿನ 62 ವರ್ಷದ ವೃದ್ಧೆ, ಶಿಗ್ಗಾವಿ ತಾಲೂಕಿನ 75 ವರ್ಷ ವೃದ್ಧ ಹಾಗೂ ಹಾವೇರಿ ತಾಲೂಕಿನ 58 ವರ್ಷದ ಮಹಿಳೆ ಹಾಗೂ 51 ವರ್ಷದ ಪುರುಷ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾನುಸಾರ ಮೃತರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಡಿಎಚ್‌ಒ ಡಾ. ಎಚ್.ಎಸ್.ರಾಘವೇಂದ್ರಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.