ಸೌಲಭ್ಯ ಕೊರತೆ; ಸಕಾಲದಲ್ಲಿ ಸಿಗ್ತಿಲ್ಲ ಚಿಕಿತ್ಸೆ

ತಜ್ಞ ವೈದ್ಯರಷ್ಟೇ ಅಲ್ಲ ನರ್ಸ್‌, ಡಿ ಗ್ರೂಪ್‌ ಸಿಬ್ಬಂದಿ ಸೇರಿ ಅನೇಕ ಹುದ್ದೆ ಖಾಲಿ ಖಾಲಿ ­ಕಾಯಂ ವೈದ್ಯ-ಸಿಬ್ಬಂದಿ ನೇಮಕ ಅನಿವಾರ್ಯ

Team Udayavani, May 25, 2021, 7:14 PM IST

24hvr1aa

ವಿಶೇಷ ವರದಿ

ಹಾವೇರಿ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ತಜ್ಞ ವೈದ್ಯರಷ್ಟೇ ಅಲ್ಲ ನರ್ಸ್‌ಗಳು, ಡಿ ಗ್ರೂಪ್‌ ಸಿಬ್ಬಂದಿ ಸೇರಿದಂತೆ ಅನೇಕ ಹುದ್ದೆಗಳು ಖಾಲಿ ಇದ್ದು, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಜಿಲ್ಲೆಯ ಜನರು ಪರದಾಡುವಂತಾಗಿದೆ.

ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ಇಂಥ ಸಂದರ್ಭದಲ್ಲಂತೂ ವೈದ್ಯ, ಸಿಬ್ಬಂದಿ ಕೊರತೆ ಜನರ ಪ್ರಾಣಕ್ಕೇ ಸಂಚಕಾರ ತರುತ್ತಿದೆ. ಜಿಲ್ಲೆಯಲ್ಲಿ ಸಮರ್ಪಕ ವೈದ್ಯಕೀಯ ಸೌಲಭ್ಯ ಇಲ್ಲದೇ ಇರುವುದರಿಂದ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಹಾಗಾಗಿಯೇ ಮರಣ ಪ್ರಮಾಣ ಹೆಚ್ಚಾಗಿದೆ ಎಂಬುದನ್ನು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಆರೋಗ್ಯ ಸಚಿವರೇ ಸ್ವತಃ ಒಪ್ಪಿಕೊಂಡಿದ್ದಾರೆ. ಹೀಗಾಗಿ ಸಚಿವರು ಕೂಡಲೇ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿನ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಕ್ರಮ ವಹಿಸಬಹುದು ಎಂಬ ಜನರ ನಿರೀಕ್ಷೆ ಚಿಗುರೊಡೆದಿದೆ.

ಜಿಲ್ಲಾಸ್ಪತ್ರೆಯಲ್ಲಿ ಸದ್ಯ ಕೋವಿಡ್‌ ಹಾಗೂ ಕೋವಿಡೇತರರು ಸೇರಿದಂತೆ ನಿತ್ಯ ನೂರಾರು ಜನರು ದಾಖಲಾಗುತ್ತಿದ್ದಾರೆ. ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಬರುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ತಂತ್ರಜ್ಞರು, ನರ್ಸ್‌ಗಳು, ಡಿ ಗ್ರೂಪ್‌ ಸೇರಿದಂತೆ ನೂರಾರು ಹುದ್ದೆಗಳು ಖಾಲಿ ಇವೆ. ಅಗತ್ಯವಿರುವ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದರೂ ಟೆಕ್ನಿಷಿಯನ್ಸ್‌, ಅನುಭವಿ ಸಿಬ್ಬಂದಿ ಸಿಗುತ್ತಿಲ್ಲ. ತಜ್ಞ ವೈದ್ಯರಂತೂ ಲಕ್ಷ‌ ರೂ. ವೇತನ ಕೊಡುವುದಾಗಿ ಹೇಳಿದರೂ ಬರುತ್ತಿಲ್ಲ. ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆಗೆ ಸರ್ಕಾರ ಕಾಯಂ ವೈದ್ಯ, ಸಿಬ್ಬಂದಿಯನ್ನೇ ನೇಮಕ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ.

ಸಿಬ್ಬಂದಿ ಕೊರತೆ ವಿವರ: ತಾಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಬಹಳಷ್ಟಿದೆ. ತಾಲೂಕು ಆಸ್ಪತ್ರೆಗಳಲ್ಲಿ 67 ವೈದ್ಯರ ಹುದ್ದೆಗಳಲ್ಲಿ ಇನ್ನೂ 7 ಹುದ್ದೆ ಖಾಲಿ ಇವೆ. 71ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗಳಲ್ಲಿ 23 ಹುದ್ದೆ ಖಾಲಿ ಇವೆ. 34 ಫಾರ್ಮಾಸಿಸ್ಟ್‌ ಹುದ್ದೆಗಳಲ್ಲಿ 23 ಖಾಲಿ ಇವೆ. ಕಿರಿಯ ಆರೋಗ್ಯ ಸಹಾಯಕರ 316 ಹುದ್ದೆಗಳಲ್ಲಿ 73 ಖಾಲಿ ಇವೆ. ಗ್ರೂಪ್‌ ಡಿ 430 ಹುದ್ದೆಗಳಲ್ಲಿ 98 ಹುದ್ದೆ ಭರ್ತಿಯಾಗಬೇಕಿದೆ. ಜಿಲ್ಲಾಸ್ಪತ್ರೆಯಲ್ಲಿ 15 ದಿನಗಳ ಹಿಂದಷ್ಟೇ 30 ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗಿದೆ. ಆದರೂ ಇನ್ನೂ ಸುಮಾರು 30 ಹುದ್ದೆ ಅಗತ್ಯವಿದೆ.

ಜಿಲ್ಲಾಸ್ಪತ್ರೆಯಲ್ಲಿ ಸದ್ಯ ವೈದ್ಯರ ಕೊರತೆ ಹೆಚ್ಚಿಲ್ಲವಾದರೂ ಟೆಕ್ನಿಷಿಯನ್ಸ್‌, ನರ್ಸ್‌ಗಳ ಕೊರತೆ ಬಹಳಷ್ಟಿದೆ. ಸದ್ಯ ಇರುವಷ್ಟು ಸಿಬ್ಬಂದಿಯೇ ಸಾಧ್ಯವಾದಷ್ಟು ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿದ್ದಾರೆ. ಒಟ್ಟಾರೆ ಸರ್ಕಾರ ಮಂಜೂರಾಗಿರುವ ಹುದ್ದೆಗಳನ್ನು ಸಹ ತುಂಬದೇ ಇರುವುದರಿಂದ ಇರುವ ಸಿಬ್ಬಂದಿ ಮೇಲೆ ಒತ್ತಡವೂ ಹೆಚ್ಚುತ್ತಿದೆ. ಕೋವಿಡ್‌ ತುರ್ತು ಸಂದರ್ಭದಲ್ಲಿ ಅನೇಕರು ರಜೆ ರಹಿತ ಸೇವೆ ನೀಡುತ್ತಿದ್ದು, ಸರ್ಕಾರ ಕೂಡಲೇ ಆರೋಗ್ಯ ಇಲಾಖೆಯಲ್ಲಿನ ಖಾಲಿ ಹುದ್ದೆ ತುಂಬಲು ಕ್ರಮ ವಹಿಸಬೇಕಿದೆ.

ಟಾಪ್ ನ್ಯೂಸ್

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.