ಬದುಕಿನ ಮೌಲ್ಯಗಳಲ್ಲಿ ಗಾಂಧೀಜಿ ಇನ್ನೂ  ಜೀವಂತ 

Team Udayavani, Oct 29, 2018, 5:41 PM IST

29-october-22.gif

ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗೆಳೆಯರ ಬಳಗ ಆಶ್ರಯದಲ್ಲಿ ‘ಪಾಪು ಗಾಂಧಿ, ಬಾಪು ಗಾಂಧಿ  ಆದ ಕಥೆ’ ನಾಟಕ ಇಲ್ಲಿಯ ಮಣಿಬಾಯಿ ಲೋಡಾಯಾ ಸಭಾಂಗಣದಲ್ಲಿ ಪ್ರದರ್ಶನಗೊಂಡಿತು. ಸಸಿಗೆ ನೀರುಣಿಸುವ ಮೂಲಕ ವಾರ್ತಾಧಿಕಾರಿ ಡಾ| ಬಿ.ಆರ್‌. ರಂಗನಾಥ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಅಪಮೌಲೀಕರಣಗೊಳ್ಳುತ್ತಿರುವ ಗಾಂಧೀಜಿಯವರ ವ್ಯಕ್ತಿತ್ವ ಮತ್ತು ಚಿಂತನೆಗಳನ್ನು ಸರಿಯಾದ ರೀತಿಯಲ್ಲಿ ಅರ್ಥೈಸುವುದೇ ‘ಪಾಪು ಗಾಂಧಿ, ಬಾಪು ಗಾಂಧಿ  ಆದ ಕಥೆ’ ನಾಟಕದ ಸಂದೇಶ. ಇದು ಅವರ ಬದುಕಿನ ಮರೆತ ಪುಟಗಳನ್ನು ಓದುವ ಕ್ರಮವೂ ಆಗಿದೆ ಎಂದರು.

ಜೀವನವನ್ನು ಕಟ್ಟುವ ಮೂಲ ಮೌಲ್ಯಗಳು, ಅಪಮೌಲ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಜೀವನ ಶ್ರದ್ಧೆ ಮತ್ತು ದರ್ಶನಕ್ಕೆ ಒಂದು ಮಾದರಿ ಗಾಂಧೀಜಿ. ಇದು ಮುಕ್ಕಾಗದಂತೆ ನಿಜ ಅರ್ಥದಲ್ಲಿ ಅವರನ್ನು ತಿಳಿಯುವ ಮತ್ತು ಸಮಾಜಕ್ಕೆ ತಿಳಿಸುವ ಪ್ರಯತ್ನಗಳು ನಡೆಯಬೇಕಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜ್ಞಾನಗಂಗಾ ಶಿಕ್ಷಣ ಸಮಿತಿ ಅಧ್ಯಕ್ಷ ಡಾ| ಜೆ.ಆರ್‌. ಗುಡಿ ಮಾತನಾಡಿ, ಈ ನಾಟಕ ಬರಿ ಮನರಂಜನೆಯದಲ್ಲ, ವಿಚಾರವಂತಿಕೆಯನ್ನು ಹುಟ್ಟು ಹಾಕುವ ಪ್ರಯತ್ನ. ಗಾಂಧಿ  ಎಂದಿಗೂ ಸಾಯುವುದಿಲ್ಲ ಈಗಲೂ ಜೀವಂತ ಇದ್ದಾರೆ ಎಂದರು. ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಆರ್‌.ವಿ. ಚಿನ್ನಿಕಟ್ಟಿ, ಬಳಗದ ಅಧ್ಯಕ್ಷ ವಿ.ಎಂ. ಪತ್ರಿ, ಹೆಸ್ಕಾಂ ಕಾರ್ಮಿಕ ಧುರೀಣ ವಿಜಯಕುಮಾರ ಮುದಕಣ್ಣನವರ, ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷೆ ದಾಕ್ಷಾಯಿಣಿ ಗಾಣಿಗೇರ, ಬಸವೇಶ್ವರ ಮಹಿಳಾ ನಾಗರಿಕ ವೇದಿಕೆಯ ಅಧ್ಯಕ್ಷೆ ಅನುಪಮಾ ಹಿರೇಮಠ, ವಿಜ್ಞಾನ ಸಮಿತಿಯ ರೇಣುಕಾ ಗುಡಿಮನಿ ಹಾಗೂ ಕಲಾ ತಂಡದ ಮದ್ವರಾಜ, ಶಿವಮೂರ್ತಿ ಇದ್ದರು. 2ಕಿರು ಕವಿಗೋಷ್ಠಿ ಜರುಗಿತು. ಬಾಲ ಕವಿಗಳಾದ ಲೋಕೇಶ ಎರೇಶಿಮಿ, ಸಿಂಚನಾ ವಿ.ಎಲ್‌., ಅಂಜು ಪತ್ತಾರ, ಕೋಮಲ ನರಗುಂದ, ಶಿಕ್ಷಕರಾದ ಅಕ್ಕಮಾಹಾದೇವಿ ಹಾನಗಲ್ಲ, ರಾಜೇಶ್ವರಿ ಸಾರಂಗಮಠ, ರಾಜು ಭಕ್ಷಿ ಕಾವ್ಯವಾಚನ ಮಾಡಿದರು. 

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.